ಬೆಂಗಳೂರು : ನಟ ನಂದಮೂರಿ ತಾರಕ ರತ್ನ ಅವರ ಆರೋಗ್ಯ ಸ್ಥಿತಿ ಕುರಿತು ನಾರಾಯಣ ಹೃದಯಾಲಯ ಆಸ್ಪತ್ರೆಯ ಆಡಳಿತ ಮಂಡಳಿ ಆರೋಗ್ಯ ಬುಲೆಟಿನ್ ಬಿಡುಗಡೆ ಮಾಡಿದೆ.
ಅವರ ಸ್ಥಿತಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ವೈದ್ಯರು ಬುಲೆಟಿನ್ನಲ್ಲಿ ತಿಳಿಸಿದ್ದಾರೆ. ಅವರಿಗೆ ವೆಂಟಿಲೇಟರ್ನಲ್ಲಿಯೇ ಚಿಕಿತ್ಸೆ ಮುಂದುವರೆದಿದೆ ಎಂದು ಬುಲೆಟಿನ್ನಲ್ಲಿ ತಿಳಿಸಿದ್ದಾರೆ.
ತಾರಕರತ್ನ ಅವರು ಎಕ್ಮೋ ಚಿಕಿತ್ಸೆ ಪಡೆದಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ಬಂದ ವರದಿಗಳಿಗೆ ವೈದ್ಯರು ಸ್ಪಷ್ಟನೆ ನೀಡಿದ್ದಾರೆ. ಯಾವುದೇ ರೀತಿಯ ಎಕ್ಮೋದಲ್ಲಿ ಚಿಕಿತ್ಸೆ ನೀಡಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅವರ ಆರೋಗ್ಯ ಸ್ಥಿತಿ ಕುರಿತು ಕಾಲಕಾಲಕ್ಕೆ ಕುಟುಂಬ ಸದಸ್ಯರಿಗೆ ವಿವರ ನೀಡುತ್ತಿದ್ದೇವೆ ಎಂದು ವೈದ್ಯರು ತಿಳಿಸಿದ್ದಾರೆ.