Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿಕ್ಷಕ ಭವ್ಯಭವಿಷ್ಯದ ಮಾರ್ಗದರ್ಶಕ : ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 04 : ಶಿಕ್ಷಕ ನಡೆದಾಡುವ ವಿಶ್ವಕೋಶ. ಅಪಾರ ಜ್ಞಾನವನ್ನು ಹೊಂದಿ, ಸಕಲ ಸದ್ಗುಣಗಳನ್ನು ಮತ್ತು ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡರೆ ಮಾತ್ರ ಉತ್ತಮ ಶಿಕ್ಷಕರಾಗಲು ಸಾಧ್ಯ. ಶಿಕ್ಷಕ ಭವ್ಯಭವಿಷ್ಯದ ಮಾರ್ಗದರ್ಶಕ. ತನ್ನ ಕಾಲಮಾನದ ಹೊಸ ಪೀಳಿಗೆಯ ದಿಕ್ಸೂಚಕ. ಸ್ವಾಸ್ಥ್ಯ ಸಮಾಜ ಸುಧಾರಕ. ನವಯಗದ ನಾವಿಕ. ವಿದ್ಯಾರ್ಥಿಗಳ ಬಾಳ ಹೊಂಬೆಳಕು ಶಿಕ್ಷಕರು ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಬಣ್ಣಿಸಿದರು

ನಗರದ ಹೊರವಲಯದಲ್ಲಿರುವ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಎಸ್ ಜೆ ಎಸ್ ಸಮೂಹ ಸಂಸ್ಥೆಗಳಿಂದ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯ ನಿಮಿತ್ತ ಅಕ್ಷರ ಗುರುಗಳಿಗೆ ಆಧ್ಯಾತ್ಮದ ಗುರುಗಳಿಂದ ಗೌರವ ಸಮರ್ಪಣೆ ಸಮಾರಂಭದ ದಿವ್ಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ದೀಪಾ ತಾನುರಿದು ಜಗತ್ತಿಗೆ ಬೆಳಕು ನೀಡುವ ಹಾಗೇ ಶಿಕ್ಷಕರು ತಮ್ಮ ನಿಸ್ವಾರ್ಥ ಸೇವೆಯಿಂದ ವಿದ್ಯಾರ್ಥಿಗಳಿಗೆ ವಿದ್ಯಾ, ಬುದ್ಧಿ ಕಲಿಸಿ ಉಜ್ವಲ ಭವಿಷ್ಯ ರೂಪಿಸುತ್ತಾರೆ. ಗುರು ಎಂದರೆ ವ್ಯಕ್ತಿಯಲ್ಲ. ಅಜ್ಞಾನದ ಕತ್ತಲೆ ಕಳೆದು ಸುಜ್ಞಾನದ ಕಡೆಗೆ ಕರೆದುಕೊಂಡು ಹೋಗುವ ಒಂದು ಶಕ್ತಿ. ತಂದೆ ತಾಯಿ ಜನ್ಮ ಕೊಡುತ್ತಾರೆ ಆದರೆ ಗುರುಗಳು ನಮಗೆ ವಿದ್ಯಾ ಬುದ್ಧಿ ಕಲಿಸಿ ನಮ್ಮ ಜೀವನಕ್ಕೊಂದು ಅರ್ಥ ಕೊಡುತ್ತಾರೆ. ಜೀವನ ವಿಕಾಸದ ಪ್ರಚೋದಕ ಶಿಕ್ಷಕ. ಕೋವಿಡ್ ಸಾಂಕ್ರಾಮಿಕ ಕಾಲದಲ್ಲಿ ಹಳಿತಪ್ಪಿದ ವಿದ್ಯಾರ್ಥಿಗಳ ವಿದ್ಯಾಪಥವನ್ನು ಪುನರ್ಜೀವನಗೊಳಿಸುವ ಸವಾಲಿನಲ್ಲಿ ಶಿಕ್ಷಕರು ಯಶಸ್ಸು ಕಾಣಲಿ ತನ್ಮೂಲಕ ಸತ್ಪ್ರಜೆಗಳನ್ನು ನೀಡಲಿ. ಇಂದಿನ ಯುಗದಲ್ಲಿ ವಿದ್ಯಾವಂತರು ಕೂಡಾ ಭಯೋತ್ಪಾದಕರಾಗುತ್ತಿರುವುದು ಆತಂಕ ಮೂಡಿಸುತ್ತಿದೆ. ವಿದ್ಯಾ ಜೊತೆ ಸಂಸ್ಕಾರ ದೊರೆತರೆ ಮಾತ್ರ ಸತ್ಪ್ರಜೆಗಳನ್ನು ಕಾಣಬಹುದು.

ಶಿಕ್ಷಕ ವೃತ್ತಿಯನ್ನು ಇಷ್ಟಪಟ್ಟು, ಸಂತಸದಿಂದ ಆಯ್ಕೆ ಮಾಡಿಕೊಂಡು ಶಿಕ್ಷಕನಾಗಬೇಕು. ಶಿಕ್ಷಣ ವೃತ್ತಿಯ ಬಗ್ಗೆ ಅಪಾರ ಅಭಿಲಾಷೆಯಿರಬೇಕು. ಶಿಕ್ಷಕ ಆಯ್ಕೆ ಮಾಡಿಕೊಂಡ ಶಿಸ್ತೀಯ ವಿಷಯಗಳ ಬಗ್ಗೆ ಉತ್ತಮ ಮಟ್ಟದ ಜ್ಞಾನವನ್ನು ಹೊಂದಿರಬೇಕು. ವಿದ್ಯಾರ್ಥಿಗಳನ್ನು ತನ್ನ ಮಕ್ಕಳಂತೆ ಕಾಣುವ ಗುಣವಿರಬೇಕು ಮತ್ತು ಸಹನೆಯು ಮುಖ್ಯ. ಪ್ರೀತಿ ವಾತ್ಸಲ್ಯಗಳಿಂದ ಬೋಧನೆ ಮಾಡಬೇಕು. ಬೋಧಿಸುವ ವಿಷಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ಕುತೂಹಲವನ್ನುಂಟು ಮಾಡುವ ಸಾಮರ್ಥ್ಯ ಹೊಂದಿರಬೇಕು. ಸೃಜನಾತ್ಮಕ ಮತ್ತು ವಿಮರ್ಶಾತ್ಮಕ ಸಾಮರ್ಥ್ಯಗಳನ್ನು ಹೊಂದಿರಬೇಕು. ಉತ್ತಮ ಗುಣಮಟ್ಟದ ಸಂವಹನ ಕೌಶಲ್ಯವನ್ನು ಹೊಂದಿರಬೇಕು. ಜೀವನ ಪರ್ಯಂತ ಹೊಸತನ್ನು ಕಲಿಯುವ ಮತ್ತು ಜ್ಞಾನವನ್ನು ಬೆಳೆಸಿಕೊಳ್ಳುವ ಇಚ್ಛಾಶಕ್ತಿಯಿರಬೇಕು. ಎಲ್ಲಾ ವಿದ್ಯಾರ್ಥಿಗಳಲ್ಲಿ ಕಲಿಯುವ ಸಾಮರ್ಥ್ಯ ಒಂದೇ ಮಟ್ಟದಲ್ಲಿರುವುದಿಲ್ಲ. ವಿದ್ಯಾರ್ಥಿಗಳ ಕಲಿಕೆಯ ಸಾಮರ್ಥ್ಯದಲ್ಲಿರುವ ವ್ಯತ್ಯಾಸಗಳನ್ನು ತಿಳಿದು, ಅದರಂತೆ ಬೋಧನಾ ಕ್ರಮವನ್ನು ಅಳವಡಿಸಿಕೊಂಡು ಎಲ್ಲಾ ವಿದ್ಯಾರ್ಥಿಗಳಿಗೆ ಅರ್ಥವಾಗುವಂತೆ ಪಾಠ ಪ್ರವಚನಗಳನ್ನು ಮಾಡುವ ಸಾಮರ್ಥ್ಯ ಮತ್ತು ಸಹನೆಯಿರಬೇಕು.ವಿದ್ಯಾರ್ಥಿ ಸಮೂಹ ಮತ್ತು ಸಮಾಜವು ಮೆಚ್ಚುವ ಉತ್ತಮ ನಡವಳಿಕೆ ಇರಬೇಕು. ಶಿಕ್ಷಕನ ನಡವಳಿಕೆ ಆದರ್ಶ ಪ್ರಾಯವಾಗಿರಬೇಕು. ಶಿಕ್ಷಕನಲ್ಲಿ ವೃತ್ತಿಪರ ನಡವಳಿಕೆಗೂ ಮತ್ತು ವೈಯಕ್ತಿಕ ನಡವಳಿಕೆಗೂ ವ್ಯತ್ಯಾಸವಿರಬಾರದು, ಪ್ರತ್ಯೇಕಿಸಬಾರದು. ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ, ಅದರ ವಿಕಾಸಕ್ಕೆ ಅವಕಾಶ ಮಾಡಿಕೊಟ್ಟು, ಪ್ರೋತ್ಸಾಹಿಸಬೇಕು. ಪಾಠದ ಜೊತೆಗೆ, ಮುಖ್ಯವಾಗಿ ಮಾನವೀಯ ಗುಣಗಳನ್ನು ವಿದ್ಯಾರ್ಥಿಗಳಲ್ಲಿ ಬಿತ್ತುವ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಆಸಕ್ತಿಯಿರಬೇಕು.

ಶಿಕ್ಷಕ ಒಬ್ಬ ಆಯ್ದ ಸರಕಾಗಬೇಕು ವಿನಹಃ ತಾತ್ಕಾಲಿಕ ಉದಾರ ನಿಮಿತ್ತ ಅಥವಾ ಸ್ವಾರ್ಥಕ್ಕಾಗಿ ಆಗಿರಬಾರದು. ಮಕ್ಕಳ ಬದುಕಿಗೆ ಅವಶ್ಯಕವಾದ ಶಿಕ್ಷಣ ನೀಡುವಲ್ಲಿ ಪ್ರಾಮಾಣಿಕತೆ ಇದ್ದರೆ ಮಕ್ಕಳು ತಮ್ಮ ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳುತ್ತಾರೆ
ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ ಅವರು ಅಂದು ಇಂದು ನಮ್ಮ ಮನ ಮನೆಗಳಲ್ಲಿ ಚಿರಸ್ಮರಣೀಯ ರಾಗಿದ್ದಾರೆ. ಕಾರಣ ಅವರ ಶ್ರದ್ಧೆ ಜವಾಬ್ದಾರಿ ವೃತ್ತಿನಿಷ್ಠೆ ಅವರ ತತ್ವಜ್ಞಾನ ಅಳವಡಿಸಿಕೊಂಡಿದ್ದರು. ಅವರು ಶಿಕ್ಷಣ ತಜ್ಞರಾಗಿ ಶಿಕ್ಷಕರಾಗಿ ವ್ಯಕ್ತಿಯಾಗಿ ರಾಷ್ಟ್ರದ ಪ್ರಥಮ ಪ್ರಜೆಯಾಗಿ ರಾಷ್ಟ್ರ ಅಂತರ್ ರಾಷ್ಟ್ರಮಟ್ಟಕ್ಕೆ ಬೆಳಕು ಚೆಲ್ಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶ್ರೀಪೀಠದಲ್ಲಿರುವ ಶಿಕ್ಷಕರಿಗೆ ಶ್ರೀಪೀಠದಿಂದ ಗೌರವ ಸಮರ್ಪಣೆ ಮಾಡಲಾಯಿತು. ಭೋವಿ ಗುರುಪೀಠದ ಸಿಇಒ ಗೌನಹಳ್ಳಿ ಗೋವಿಂದಪ್ಪ, ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ಮೋಹನ ಡಿ ಸಿ, ರಾಮಕೃಷ್ಣ ಪ್ರೌಢಶಾಲೆಯ ಮುಖ್ಯೋಪಧ್ಯಾಯರಾದ ಶ್ರೀಧರ, ಶಾರದ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಧ್ಯಾಯರಾದ ಹನುಮಂತಪ್ಪ, ಸಿದ್ಧರಾಮೇಶ್ವರ ಪ್ರೌಢಶಾಲೆಯ ಮುಖ್ಯೋಪಧ್ಯಾಯರಾದ ಆನಂದ ತಳವಾರ, ಎಸ್ ಜೆ ಎಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಧ್ಯಾಯರಾದ ದಿನೇಶ ಶಿಕ್ಷಕ ವರ್ಗ, ಶಿಕ್ಷಕೇತರ ವರ್ಗ, ಹಾಗೂ ಪೋಷಕರು ಮಕ್ಕಳು ಭಾಗವಹಿಸಿದ್ಧರು

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!