Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅನಿತಾ ಕೌಲ್ ರಾಜ್ಯ ಪ್ರಶಸ್ತಿಗೆ ಶಿಕ್ಷಕ ನಾಗಭೂಷಣ್ ಆಯ್ಕೆ

Facebook
Twitter
Telegram
WhatsApp

ಸುದ್ದಿಒನ್, ಚಳ್ಳಕೆರೆ,ಜನವರಿ.05 :   ತಾಲ್ಲೂಕಿನ ನಾಯಕನಹಟ್ಟಿ ಸಮೀಪದ ಸರ್ಕಾರಿ ಪ್ರೌಢಶಾಲೆ ರೇಖಲಗೆರೆ ಲಂಬಾಣಿ ಶಾಲೆಯ ವಿಜ್ಞಾನ ಶಿಕ್ಷಕ ನಾಗಭೂಷಣ್ ಇವರ ಸೃಜನಾತ್ಮಕ ಬೋಧನೆ ಹಾಗೂ ಶಿಕ್ಷಣದ ಬದ್ಧತೆಯ ಸೇವೆಯನ್ನು ಪರಿಗಣಿಸಿ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ವತಿಯಿಂದ  ಈ ವರ್ಷದ ರಾಜ್ಯ ಮಟ್ಟದ ಅನಿತಾ ಕೌಲ್ ಪ್ರಶಸ್ತಿಗೆ ಆಯ್ಕೆಮಾಡಿದ್ದಾರೆ.

ಜನವರಿ 7 ರಂದು ಬೆಳಗ್ಗೆ 11 ಗಂಟೆಗೆ ಡಾ.ಹೆಚ್ಚೆನ್ ಮಲ್ಟಿಮೀಡಿಯಾ ಸಭಾಂಗಣ, ನ್ಯಾಷನಲ್ ಕಾಲೇಜು, ಬಸವನಗುಡಿ, ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

ಅನಿತಾ ಕೌಲ್ ಇವರು ಭಾರತೀಯ ಆಡಳಿತ ಸೇವೆಗೆ ಸೇರಿದ ಪ್ರಾರಂಭದಿಂದಲೂ ಸಾಕ್ಷರತೆ, ಪ್ರಾಥಮಿಕ ಶಿಕ್ಷಣ, ಮಹಿಳಾ ಸಬಲೀಕರಣ ಹಾಗೂ ವಿಕೇಂದ್ರೀಕೃತ ಆಡಳಿತ ವ್ಯವಸ್ಥೆಗೆ ಪೂರಕವಾಗಿ ಮತ್ತು ಸಂಪೂರ್ಣವಾಗಿ ತೊಡಗಿಸಿಕೊಂಡು ದುಡಿದವರು, ಅಷ್ಟೇ ಅಲ್ಲದೆ ಸಾಕ್ಷರತಾ ಆಂದೋಲನದ ಪ್ರಾರಂಭದ ದಿನಗಳಲ್ಲಿ ನವದೆಹಲಿಯಲ್ಲಿ ಸಾಕ್ಷರತಾ ಆಂದೋಲನವನ್ನು ಜನಾಂದೋಲನವನ್ನಾಗಿ ರೂಪಿಸಲು ರಾಷ್ಟ್ರೀಯ ಸಾಕ್ಷರತಾ ಮಿಷನ್ ಪ್ರಾಧಿಕಾರದಲ್ಲಿ ಹಗಲಿರುಳೂ ಶ್ರಮಿಸಿ ಸಮಾಜ ಸೇವೆಗೈದ ಇವರು 2016 ರಂದು ನಿಧನ ಹೊಂದಿದರು.

ಇವರ ಸ್ಮರಣಾರ್ಥ ಅನಿತಾ ಕೌಲ್ ಹೆಸರಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸೇವೆಯನ್ನು ಸಲ್ಲಿಸುತ್ತಿರುವ ಶಿಕ್ಷಕರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಜ್ಞಾನ ವಿಜ್ಞಾನ ಸಮಿತಿಯ ಅಧ್ಯಕ್ಷರಾದ ಡಾ.C.R ಚಂದ್ರಶೇಖರ್,ಕಾರ್ಯದರ್ಶಿ ಈ.ಬಸವರಾಜ್ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕ ನಾಗಭೂಷಣ್ ಇವರನ್ನು ಜಿಲ್ಲೆಯ ಉಪನಿರ್ದೇಶರಾದ ರವಿಶಂಕರ್ ರೆಡ್ಡಿ, ಚಳ್ಳಕೆರೆ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್,ಮುಖ್ಯ ಶಿಕ್ಷಕ ವೆಂಕಟೇಶ್, ಎಸ್ ಡಿ ಎಂ ಸಿ ಅಧ್ಯಕ್ಷ ಜಯಣ್ಣ, ಶಾಲಾ ಸಿಬ್ಬಂದಿ ಹಾಗೂ ಊರಿನ ಗ್ರಾಮಸ್ಥರು ಅಭಿನಂದಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!