Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗುರುಗಳಿಂದಾನೇ ವಿದ್ಯಾರ್ಥಿನಿ ಮೇಲೆ ಅತ್ಯಾ*ರ : ಮೂವರು ಉಪನ್ಯಾಸಕರು ಅರೆಸ್ಟ್..!

---Advertisement---

ಗುರುಗಳನ್ನ ಎಲ್ಲರು ಕೂಡ ತಮ್ಮ ಜೀವನದಲ್ಲಿ ಬಹು ದೊಡ್ಡ ಸ್ಥಾನದಲ್ಲಿ ಇಡುತ್ತೇವೆ. ಅವರೇ ನಮ್ಮ ಭವಿಷ್ಯದ ಹರಿಕಾರರು. ಆದರೆ ಗುರುಗಳೇ ವಿದ್ಯಾರ್ಥಿಗಳನ್ನ ಕೆಟ್ಟದಾಗಿ ನೋಡಿದರೆ ಹೇಗೆ..? ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗೋಗುತ್ತೆ. ಅಂಥದ್ದೊಂದು ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿರುವ ಘಟನೆ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಉಪನ್ಯಾಸಕರನ್ನು ಬಂಧಿಸಿದ್ದಾರೆ.

ದಕ್ಷಿಣ ಕನ್ನಡದ ಮೂಡಬಿದಿರೆಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ವುದ್ಯಾರ್ಥಿನಿ ಮೇಲೆ ಭೌತಶಾಸ್ತ್ರ, ರಸಾಯನ ಶಾಸ್ತ್ರ ಉಪನ್ಯಾಸಕರು ಸೇರಿದಂತೆ ಅವರ ಗೆಳೆಯ ಸೇರಿಕೊಂಡು ಈ ರೇ*‌ಮಾಡಿದ್ದಾರೆ. ಈ ಮೂವರು ಕಾಮುಕರು ಆ ವಿದ್ಯಾರ್ಥಿನಿ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿದ್ದಾರೆ. ನೊಂದ ವಿದ್ಯಾರ್ಥಿನಿ ರಾಜ್ಯ ಮಹಿಳಾ ಆಯೋಗಕ್ಕೆ ದೂರು‌ ನೀಡಿದ್ದರು. ಮಹಿಳಾ ಆಯೋಗದ ಮಾಹಿತಿ ಮೇರೆಗೆ ಬೆಂಗಳೂರಿನ ಮಾರತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ನರೇಂದ್ರ, ಸಂದೀಪ್ ಹಾಗೂ ಅನೂಪ್ ಎಂಬುವವರನ್ನ ಬಂಧಿಸಲಾಗಿದೆ. ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ ವಿದ್ಯಾರ್ಥಿನಿಗೆ ನೋಟ್ ನೀಡುವ ನೆಪದಲ್ಲಿ ಹತ್ತಿರವಾಗಿದ್ದ. ಆ ನಂತರ ವಾಟ್ಸಾಪ್ ಚಾಟ್ ಮಾಡುತ್ತಾ, ಓದುವುದರಲ್ಲಿ ಸಹಾಯ ಮಾಡುತ್ತ ಸಲುಗೆ ಬೆಳೆಸಿಕೊಂಡಿದ್ದ. ಒಮ್ಮೆ ಮಾರತ್ ಹಳ್ಳಿಯ ಗೆಳೆಯನ ರೂಮಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ. ಇದನ್ನ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ. ಕೆಲ ದಿನಗಳ ಬಳಿಕ ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಸಹ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಅದಕ್ಕೆ ವಿರೋಧಿಸಿದಾಗ ನರೇಂದ್ರನ ಜೊತೆಗಿದ್ದ ಫೋಟೋ, ವಿಡಿಯೋಗಳನ್ನು ತೋರಿಸಿ ಬ್ಲಾಕ್ ಮೇಲ್ ಮಾಡಿದ್ದಾನೆ. ಅನೂಪ್ ರೂಮಿನಲ್ಲಿಯೇ ಅತ್ಯಾಚಾರವಾಗಿತ್ತು. ಹೀಗಾಗಿ ಅನೂಪ್ ಕೂಡ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ್ದ. ಸದ್ಯ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment