ಸೆ.5 ರಂದು ಶಿಕ್ಷಕರ ದಿನಾಚರಣೆ: ಚಿತ್ರದುರ್ಗ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರ ವಿವರ

3 Min Read

ಚಿತ್ರದುರ್ಗ,(ಸೆಪ್ಟಂಬರ್ 03) :  ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಬಂದ ಶಿಕ್ಷಕರ ಪ್ರಶಸ್ತಿ ಪ್ರಸ್ತಾವನೆಗಳನ್ನು ಪರಿಶೀಲನೆ ಮಾಡಿ ಜಿಲ್ಲಾ ಸಮಿತಿಯು ಪ್ರಾಥಮಿಕ ಶಾಲಾ ಶಿಕ್ಷಕರನ್ನು ಹಾಗೂ ಪ್ರೌಢಶಾಲಾ ಶಿಕ್ಷಕರನ್ನು 2022-23ನ ಸಾಲಿನ ಅತ್ಯುತ್ತಮ ಹಾಗೂ ವಿಶೇಷ ಶಿಕ್ಷಕ ಪ್ರಶಸ್ತಿ ನೀಡಲು ಆಯ್ಕೆ ಮಾಡಲಾಗಿದೆ.

ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾಮಟ್ಟದ ಅತ್ಯುತ್ತಮ ಹಾಗೂ ವಿಶೇಷ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು ಇದೇ ಸೆಪ್ಟೆಂಬರ್ 5ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ತರಾಸು ರಂಗಮಂದಿರದಲ್ಲಿ ನಡೆಯುವ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಸನ್ಮಾನಿಸಲಾಗುವುದು.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್,  ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರು ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು ಗೌರವಿಸಿ ಸನ್ಮಾನಿಸುವರು.

ಜಿಲ್ಲಾಮಟ್ಟದಲ್ಲಿ ಉತ್ತಮ ಶಿಕ್ಷಕರ ಆಯ್ಕೆ ಮಾಡಲಾದ ಶಿಕ್ಷಕರ ವಿವರ ಈ ಕೆಳಗಿನಂತೆ ಇದೆ.

ಪ್ರೌಢ ಶಾಲಾ ವಿಭಾಗ:

ಚಿತ್ರದುರ್ಗ ತಾಲ್ಲೂಕಿನ ಮಾಡನಾಯಕನಹಳ್ಳಿಯ ಶ್ರೀ.ಜಿ.ಹೆಚ್ ಅಶ್ವಥ್ ರೆಡ್ಡಿ ಸ್ಮರಣಾರ್ಥ ಪಾಟೀಲ್ ಬಸಣ್ಣ ಪ್ರೌಢಶಾಲೆಯ ವಿಜ್ಞಾನ ಸಹ ಶಿಕ್ಷಕ ಎಸ್.ಎಂ.ಮೃಂತ್ಯಂಜಯಸ್ವಾಮಿ,

ಚಿತ್ರದುರ್ಗ ತಾಲ್ಲೂಕಿನ ತುರುವನೂರಿನ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗ ಆಂಗ್ಲ ಭಾಷಾ ಸಹ ಶಿಕ್ಷಕ ಸಿ.ಎಲ್.ಏಕನಾಥ,

ಚಳ್ಳಕೆರೆ ತಾಲೂಕಿನ ಅಬ್ಬೇನಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ಬಿ.ಓ.ಬಸವರಾಜಪ್ಪ,

ಹೊಳಲ್ಕೆರೆ ತಾಲ್ಲೂಕಿನ ತಾಳ್ಯದ ಶ್ರೀ.ಆಂ.ಸ್ವಾ.ಸಂ.ಪ್ರೌಢಶಾಲೆಯ ವೃತ್ತಿ ಶಿಕ್ಷಕ ಪಿ.ಎ ಸಂಧ್ಯಾ,

ಹೊಸದುರ್ಗ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ಆಂಗ್ಲ ಭಾಷಾ ಸಹ ಶಿಕ್ಷಕ ಆರ್.ಶಿವಶಂಕರ್, ಹಿರಿಯೂರು ತಾಲ್ಲೂಕಿನ ಅನುದಾನಿತ ಗೀರಿಶ ಬಾಲಕಿಯರ ಪ್ರೌಢಶಾಲೆಯ ಸಹ ಶಿಕ್ಷಕರಾದ ಎಸ್.ಸಿ.ಅಮೃತೇಶ್.

ವಿಶೇಷ ಶಿಕ್ಷಕ ಪ್ರಶಸ್ತಿ:

ಹೊಸದುರ್ಗ ತಾಲ್ಲೂಕಿನ ಮೇಂಗಸಂದ್ರ ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕರಾದ ಸಿ.ರೂಪ,

ಚಿತ್ರದುರ್ಗ ತಾಲ್ಲೂಕಿನ  ಬಾ.ಸ.ಪ,ಪೂ.ಕಾ (ಪ್ರೌಢಶಾಲಾ) ವಿಭಾಗದ ಹಿಂದಿ ಶಿಕ್ಷಕರಾದ ಆರ್.ಎಂ. ಮಹಮದ್ ಖಾನ್,

ಚಿತ್ರದುರ್ಗದ ಕೋಟೆ ಸರ್ಕಾರಿ ಪ್ರೌಢಶಾಲೆ ಚಿತ್ರಕಲಾ ಶಿಕ್ಷಕ ಬಿ.ಆರ್.ನಿರಂಜನ ಮೂರ್ತಿ,

ಹಿರಿಯೂರು ತಾಲ್ಲೂಕಿನ ಪಾಲವ್ವನಹಳ್ಳಿಯ ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕರಾದ ಪಿ.ವಿ.ವಾದಿರಾಜ,

ಮೊಳಕಾಲ್ಮೂರು ತಾಲ್ಲೂಕಿನ ಶ್ರೀನಿವಾಸ ನಾಯಕ ಸ್ಮಾರಕ ಪ್ರೌಢಶಾಲೆಯ ಸಹ ಶಿಕ್ಷಕರಾದ ಡಿ.ಓಬಮ್ಮ.

ಪ್ರಾಥಮಿಕ ಶಾಲಾ ಹಿರಿಯ ಪ್ರಾಥಮಿಕ ಶಾಲಾ ವಿಭಾಗ:

ಚಳ್ಳಕೆರೆಯ ಗಾಂಧಿನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕಿ ಬಿ.ಎಸ್.ಯೋಗೇಶ್ವರಿ,

ಚಿತ್ರದುರ್ಗ ತಾಲ್ಲೂಕಿನ ಭೀಮಸಮುದ್ರದ ಭೀಮಶ್ವೇರ ಬಾಲವಿಕಾಸ ಹಿರಿಯ ಪ್ರಾಥಮಿಕ ಶಾಲೆಯ ಸಹ.ಶಿಕ್ಷಕ ಎಂ.ಎನ್.ರಾಮು,

ಚಿತ್ರದುರ್ಗ ತಾಲ್ಲೂಕಿನ ಅಗಸನಕಲ್ಲು ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಜಮರುದ್ ಪರ್ವಿನ್ ,

ಹೊಸದುರ್ಗ ತಾಲ್ಲೂಕಿನ ಬನ್ಸಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಜಾನಕಮ್ಮ,

ಮೊಳಕಾಲ್ಮೂರು ತಾಲ್ಲೂಕಿನ ಕೋನಸಾಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಜಿ.ಜಿ.ನಾಗರಾಜ್,

ಹೊಳಲ್ಕೆರೆ ತಾಲ್ಲೂಕಿನ ಗುಡ್ಡದ ಸಂತೇನಹಳ್ಳಿಯ ಸರ್ಕಾರಿ ಹಿರಿಯ ಪಾಥಮಿಕ ಶಾಲೆಯ ಸಹ ಶಿಕ್ಷಕರಾದ ಎನ್.ಬಸವರಾಜಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

ವಿಶೇಷ ಶಿಕ್ಷಕ ಪ್ರಶಸ್ತಿ:

ಚಿತ್ರದುರ್ಗ ತಾಲ್ಲೂಕಿನ ಅನ್ನೇಹಾಳ್ ಜಂಪಯ್ಯನಹಟ್ಟಿ ಸ.ಹಿ.ಪ್ರಾ.ಶಾಲೆಯ ಸಹ ಶಿಕ್ಷಕರಾದ ಆರ್. ಶಾಂತಮ್ಮ,

ಹಿರಿಯೂರು ತಾಲ್ಲೂಕಿನ ಹೇಮದಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಕೆ.ಭಾಗ್ಯಮ್ಮ,

ಹೊಸದುರ್ಗ ತಾಲ್ಲೂಕಿನ ಕೆಲ್ಲೂಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಡ್ತಿ ಮುಖ್ಯ ಶಿಕ್ಷಕರಾದ ಆರ್.ಪ್ರೇಮ ಅವರನ್ನ ಆಯ್ಕೆ ಮಾಡಲಾಗಿದೆ.

ಪ್ರಾಥಮಿಕ ಶಾಲಾ ಕಿರಿಯ ವಿಭಾಗ:

ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ಸಿದ್ದಾಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಓ.ವಸಂತಕುಮಾರ್,

ಚಳ್ಳಕೆರೆ ತಾಲ್ಲೂಕಿನ ಉಪ್ಪರಹಟ್ಟಿಯ ಹೀರೆಮಧುರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಬಿ.ಈರಣ್ಣ,

ಹಿರಿಯೂರು ತಾಲ್ಲೂಕಿನ ಗೋಗುದ್ದು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಟಿ.ಹೆಚ್.ಓಬಳೇಶ್,

ಹೊಸದುರ್ಗ ತಾಲ್ಲೂಕಿನ ಕಾಟೇಹಟ್ಟಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಜಿ.ಸರಸ್ವತಿ,

ಮೊಳಕಾಲ್ಮೂರು ತಾಲ್ಲೂಕಿನ ಚೌಡಿಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಪಿ.ಎನ್.ಕುಮಾರ್,

ಹೊಳಲ್ಕೆರೆ ತಾಲ್ಲೂಕಿನ ಚನ್ನಪಟ್ಟಣದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಎನ್.ತಿಪ್ಪೇಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ.

ವಿಶೇಷ ಶಿಕ್ಷಕ ಪ್ರಶಸ್ತಿ:  

ಮೊಳಕಾಲ್ಮೂರು ತಾಲ್ಲೂಕಿನ ಬೆಳಬಿನಮರದಕಟ್ಟೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಪಿ.ಕೆ.ಶಿವಕುಮಾರ್, ಚಳ್ಳಕೆರೆ ತಾಲ್ಲೂಕಿನ ಶಾಂತಿನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಕೆ.ಜಿ.ಹಾಲೇಶ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ರವಿಶಂಕರ್ ರೆಡ್ಡಿ ತಿಳಿಸಿದ್ದಾರೆ.

 

 

Share This Article
Leave a Comment

Leave a Reply

Your email address will not be published. Required fields are marked *