ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ನವೆಂಬರ್. 13 : ಶಿಕ್ಷಕರುಗಳು ಕಡ್ಡಾಯವಾಗಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ತಯಾರಿಸಿ ಅದರಂತೆ ತರಗತಿಗಳಲ್ಲಿ ಅನುಷ್ಟಾನಗೊಳಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ.ಆರ್.ಮಂಜುನಾಥ್ ಕರೆ ನೀಡಿದರು.
ಕೋಟೆ ಮುಂಭಾಗವಿರುವ ಮಹಾರಾಣಿ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಹತ್ತನೆ ತರಗತಿ ಶಿಕ್ಷಕರುಗಳಿಗೆ ಹಮ್ಮಿಕೊಳ್ಳಲಾಗಿದ್ದ ಆಂಗ್ಲ ಭಾಷಾ ವಿಷಯದ ಪ್ರಶ್ನೆ ಪತ್ರಿಕೆ ತಯಾರಿಕಾ ಕಾರ್ಯಾಗಾರ-2014 ನ್ನು ಉದ್ಘಾಟಿಸಿ ಮಾತನಾಡಿದರು.
ಆಂಗ್ಲ ಭಾಷಾ ಪ್ರಶ್ನೆ ಪತ್ರಿಕೆಗಳನ್ನು ಸಿದ್ದಪಡಿಸಿ ಮಕ್ಕಳ ಮನಸ್ಸಿಗೆ ನಾಟುವಂತೆ ಬೋಧಿಸಿದಾಗ ಪರೀಕ್ಷೆ ಭಯ ಕಾಡುವುದಿಲ್ಲ. ಇದರಿಂದ ಗುಣಮಟ್ಟದ ಫಲಿತಾಂಶಕ್ಕೆ ಸಹಕಾರಿಯಾಗಲಿದೆ ಎಂದು ಶಿಕ್ಷಕರುಗಳಿಗೆ ತಿಳಿಸಿದರು. ವಿದ್ಯಾಧಿಕಾರಿ ಎನ್.ಆರ್.ತಿಪ್ಪೇಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್, ವಿಷಯ ಪರಿವೀಕ್ಷಕ ಹೆಚ್.ಟಿ.ಚಂದ್ರಣ್ಣ, ಜಿಲ್ಲಾ ಆಂಗ್ಲ ಭಾಷಾ ಕ್ಲಬ್ ಅಧ್ಯಕ್ಷ ಸಿದ್ದೇಶ್ ಸಿ.ಬಿ. ಗೌರವಾಧ್ಯಕ್ಷ ರಾಜಪ್ಪ ಎಸ್. ತಾಲ್ಲೂಕು ಆಂಗ್ಲ ಭಾಷಾ ಕ್ಲಬ್ ಅಧ್ಯಕ್ಷ ಗುರುಮೂರ್ತಿ, ಕಾರ್ಯದರ್ಶಿ ರಾಮಚಂದ್ರಪ್ಪ, ಖಜಾಂಚಿ ರಾಮಲಿಂಗಪ್ಪ, ಸಂಪನ್ಮೂಲ ಶಿಕ್ಷಕರುಗಳಾದ ಹೆಚ್.ಕೆ.ಮಹೇಶ್, ಶೋಭರಾಣಿ, ಡಿ.ಪದ್ಮಾವತಿ, ಟಿ.ಸಂತೋಷ್, ಸಿ.ಕೋಟಿಹಾಳ್, ಚಂದ್ರೇಗೌಡ, ಸರ್ಕಾರಿ ಅನುದಾನಿತ, ಅನುದಾನರಹಿತ
ಶಾಲೆಗಳ 145 ಆಂಗ್ಲ ಭಾಷಾ ಶಿಕ್ಷಕರುಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.







