ಸುದ್ದಿಒನ್, ಚಿತ್ರದುರ್ಗ, ನವೆಂಬರ್.21 : ಶಿಕ್ಷಕರು ಮೂಲ ವಿಜ್ಞಾನಕ್ಕೆ ಒತ್ತು ನೀಡುವ ಮೂಲಕ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ, ವೈಜ್ಞಾನಿಕ ಚಿಂತನೆ ಮೂಡಲು ಶ್ರಮಿಸಬೇಕು” ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಮಾಜಿ ಉಪಾಧ್ಯಕ್ಷ ಚಳ್ಳಕೆರೆ ಯರ್ರಿಸ್ವಾಮಿ ತಿಳಿಸಿದರು.
ನಗರದ ಸಿಲಿಕಾನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ ನಡೆದ 31 ನೇ ಜಿಲ್ಲಾ ಮಟ್ಟದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಮಾರ್ಗದರ್ಶಿ ಶಿಕ್ಷಕರ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ಅರಿತು ಮಕ್ಕಳಿಗೆ ಯೋಜನೆಗಳನ್ನು ತಯಾರಿಸಲು ಪ್ರೇರೇಪಿಸಬೇಕು” ಎಂದು ತಿಳಿಸಿದರು.
ರಾಜ್ಯ ಮಟ್ಟದಲ್ಲಿ ತೀರ್ಪುಗಾರರಾದ ಈ.ರುದ್ರಮುನಿ ಮಾತನಾಡಿ,ಮಕ್ಕಳು ಯೋಜನೆಗಳನ್ನು ತಯಾರಿಸುವಾಗ ಪ್ರಮುಖ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವರಿಕೆ ಮಾಡಿಕೊಟ್ಟರು.
ಜಿಲ್ಲಾ ಸಮಾವೇಶದ ಸಂಚಾಲಕ ಹೆಚ್.ಮಂಜುನಾಥ್ ಮಾತನಾಡಿ, ” ಜಿಲ್ಲಾ ಸಮಾವೇಶವು ಡಿಸೆಂಬರ್ ತಿಂಗಳ ಮೊದಲ ವಾರ ನಡೆಯಲಿದ್ದು, ಜಿಲ್ಲೆಯಿಂದ 10 ಯೋಜನೆಗಳನ್ನು ಆಯ್ಕೆ ಮಾಡಿ ರಾಜ್ಯ ಮಟ್ಟಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು.
ವೇದಿಕೆಯಲ್ಲಿ ಜಿಲ್ಲಾ ಸಮಿತಿಯ ಮಾಜಿ ಅಧ್ಯಕ್ಷರಾದ ಲತೀಫ್ ಸಾಬ್, ಮುಖ್ಯ ಶಿಕ್ಷಕ ಶ್ರೀನಿವಾಸಮೂರ್ತಿ ಉಪಸ್ಥಿತರಿದ್ದರು.
ಕಾರ್ಯಾಗಾರದಲ್ಲಿ ಜಿಲ್ಲೆಯ ವಿವಿಧ ಶಾಲೆಗಳಿಂದ 72 ವಿಜ್ಞಾನ ಶಿಕ್ಷಕರು ಭಾಗವಹಿಸಿದ್ದರು.