ಹೈದರಾಬಾದ್: ತೆಲಂಗಾಣ ಹೈಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ. ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ನಾಲ್ಕು ವಾರಗಳ ಕಾಲ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತೆಲಂಗಾಣ ಹೈಕೋರ್ಟ್ ಪೊಲೀಸ್ ಅಧಿಕಾರಿಗಳಿಗೆ ಈ ಶಿಕ್ಷೆ ವಿಧಿಸಿದೆ.
ಜಂಟಿ ಸಿಪಿ ಎಆರ್ ಶ್ರೀನಿವಾಸ್, ಬಂಜಾರ ಹಿಲ್ಸ್ ಎಸಿಪಿ ಸುದರ್ಶನ್, ಜುಬಿಲಿ ಹಿಲ್ಸ್ ಸಿಐ ರಾಜಶೇಖರ್ ರೆಡ್ಡಿ ಮತ್ತು ಎಸ್‌ಐ ನರೇಶ್‌ಗೆ ಹೈಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೆ ನಾಲ್ವರ ವಿರುದ್ಧ ಇಲಾಖಾ ಶಿಸ್ತು ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಸೂಚಿಸಿದೆ.
ಪತಿಪತ್ನಿಯ ವಿವಾದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆದೇಶಕ್ಕೆ ವ್ಯತಿರಿಕ್ತವಾಗಿ ವರ್ತಿಸಿದ ಆರೋಪ ಈ ಪೊಲೀಸ್ ಅಧಿಕಾರಿಗಳ ಮೇಲಿದೆ. ಸಿಆರ್ ಪಿಸಿ 41ಎ ಸುಪ್ರೀಂ ನಿಯಮಗಳ ಪ್ರಕಾರ ಯಾವುದೇ ಸೂಚನೆ ನೀಡಿಲ್ಲ ಎಂದು ಆರೋಪಿಸಲಾಗಿದೆ.