Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತಾಪಮಾನ ಹೆಚ್ಚಳ : ಆರೋಗ್ಯ ಕಾಳಜಿ ವಹಿಸಿ : ಡಾ. ಬಿ.ವಿ. ಗಿರೀಶ್

---Advertisement---

ಚಿತ್ರದುರ್ಗ ಮಾ. 24 : ವಾತಾವರಣದಲ್ಲಿ ತಾಪಮಾನ ಹೆಚ್ಚಳವಾಗಿದ್ದು, ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಆರೋಗ್ಯ ಕಾಳಜಿ ವಹಿಸಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಬಿ.ವಿ. ಗಿರೀಶ್ ಹೇಳಿದರು.

ಚಿತ್ರದುರ್ಗ ತಾಲೂಕಿನ ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ಸೋಮವಾರದಂದು “ಬಿಸಿಲ ಬೇಗೆಗೆ ದೇಹದ ಬಗೆಗಿರಲಿ ವಿಶೇಷ ಕಾಳಜಿ” ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಉಷ್ಣದ ಅಲೆ ದಿನದಿಂದ ದಿನಕ್ಕೆ ಏರುತ್ತಿದೆ ಸಾರ್ವಜನಿಕರು ಆರೋಗ್ಯ ಇಲಾಖೆಯು ನೀಡುವ ಮಾಹಿತಿಯನ್ನು ತಪ್ಪದೇ ಪಾಲಿಸಬೇಕು,  ದೇಹದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಬಿಸಿಲಿನಲ್ಲಿ ಹೋಗುವುದನ್ನು ಆದಷ್ಟು ತಪ್ಪಿಸಬೇಕು, ಅಲ್ಲದೆ ಮಧ್ಯಾಹ್ನದ ವೇಳೆ ಅಡುಗೆ ಮಾಡುವುದನ್ನು ಆದಷ್ಟು ಕೈಬಿಡಬೇಕು. ಮದ್ಯಪಾನ, ಚಹಾ, ಕಾಫಿ, ಕಾರ್ಬೋನೇಟ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶ ಇರುವ ಪಾನೀಯಗಳನ್ನು ಸೇವಿಸಬಾರದು ಎಂದರು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಮಂಜುನಾಥ್ ಮಾತನಾಡಿ, ಬೇಸಿಗೆಯಲ್ಲಿ ಬಸವಳಿದ ದೇಹಕ್ಕೆ ವಿಶ್ರಾಂತಿ ಅವಶ್ಯಕತೆ ಇರುತ್ತದೆ. ಹೆಚ್ಚು ನೀರಿನ ಅವಶ್ಯಕತೆ ಇರುತ್ತದೆ ಬಾಯಾರಿಕೆ ಇಲ್ಲದಿದ್ದರೂ ನೀರನ್ನು ಕುಡಿಯುತ್ತಿರುವುದು ಒಳ್ಳೆಯದು. ಪ್ರಯಾಣಿಸುವಾಗ ನೀರಿನ ಬಾಟಲಿ ಜೊತೆಗಿರಲಿ. ಅಡುಗೆ ಸಿದ್ದಪಡಿಸುವ ಪ್ರದೇಶದಲ್ಲಿ ಕಿಟಿಕಿ ಹಾಗೂ ಬಾಗಿಲು ತೆರೆದಿಡಬೇಕು. ಹಗುರ ಮತ್ತು ಸಡಿಲವಾದ ಹತ್ತಿಯ ಬಟ್ಟೆಯನ್ನು ಧರಿಸಬೇಕು.  ಹೆಚ್ಚು ನೀರಿನ ಅಂಶವಿರುವ ಹಣ್ಣು ತರಕಾರಿಗಳನ್ನು ಸೇವಿಸಬೇಕು. ಬಿಸಿಲಿನಲ್ಲಿ ಹೊರಗಡೆ ಹೋಗುವುದು ಅನಿವಾರ್ಯವಾದರೆ, ಟೋಪಿ, ಕೊಡೆಯಿಂದ ರಕ್ಷಣೆ ಪಡೆದು ಬಿಸಿಲಿನಿಂದ ರಕ್ಷಿಸಿಕೊಳ್ಳಬೇಕು. ನಿಲ್ಲಿಸಿದ ವಾಹನಗಳ ಒಳಗೆ ಮಕ್ಕಳನ್ನು ಬಿಡಬಾರದು.  ಎಳನೀರು, ಮಜ್ಜಿಗೆ, ಬೇಲದ ಹಣ್ಣಿನ ಪಾನಕ, ನಿಂಬೆಹಣ್ಣಿನ ಪಾಲಕ, ಹಸಿ ಸವತೆಕಾಯಿ ಹೆಚ್ಚು ಉಪಯೋಗಿಸಬೇಕು.  ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಬೇಕು ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ವೈದ್ಯಾಧಿಕಾರಿ ಡಾ. ತುಳಸಿ ರಂಗನಾಥ್, ವೈದ್ಯಾಧಿಕಾರಿ ಡಾ. ಶಿಲ್ಪ, ದಂತ ವೈದ್ಯ ಡಾ. ಬಿಂದ್ಯಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಬಿ, ಜಾನಕಿ. ಬಿ. ಮೂಗಪ್ಪ. ಫಾರ್ಮಸಿ ಅಧಿಕಾರಿ ಮೋಹನ್, ರಾಷ್ಟ್ರೀಯ ಕಿಶೋರಿ ಸ್ವಾಸ್ಥ್ಯ ಕಾರ್ಯಕ್ರಮದ ಕನ್ಸಲ್ಟೆಂಟ್ ಕಾವ್ಯ ಮಧುಸೂದನ, ಮಂಜುಳಾ ಪ್ರದೀಪ್, ಸಾರ್ವಜನಿಕರು ಉಪಸಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...