Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೌರಿ-ಗಣೇಶ ಹಬ್ಬದ ಭದ್ರತೆಗಾಗಿ ಚಿತ್ರದುರ್ಗ ಜಿಲ್ಲೆಗೆ ಇಬ್ಬರು ಪೊಲೀಸ್ ಇನ್ ಸ್ಪೆಕ್ಟರ್ ಗಳ ತಾತ್ಕಾಲಿಕ ನಿಯೋಜನೆ

---Advertisement---

ಚಿತ್ರದುರ್ಗ : ರಾಜ್ಯದಲ್ಲಿ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸೂಕ್ತ ಬಂದೋಬಸ್ತ್ ಹಾಗೂ ಭದ್ರತಾ ದೃಷ್ಟಿಯಿಂದ ಆರು ಜನ ಸಿವಿಲ್ ಪೊಲೀಸ್ ಇನ್ ಸ್ಪೆಕ್ಟರ್ ಗಳನ್ನು ಅನ್ಯಕರ್ತವ್ಯದ (ಒಒಡಿ) ಆಧಾರದ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ವಿವಿಧ ಠಾಣೆಗಳಿಗೆ ತಾತ್ಕಾಲಿಕವಾಗಿ ನಿಯೋಜಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿ-ಐಜಿಪಿ) ಆದೇಶ ಹೊರಡಿಸಿದ್ದಾರೆ.

ಆಂತರಿಕ ಭದ್ರತಾ ವಿಭಾಗ, ಸಿಐಡಿ ಹಾಗೂ ಎಸ್ಸಿಆರ್ಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ದಾವಣಗೆರೆ, ಚಿತ್ರದುರ್ಗ ಹಾಗೂ ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಗೆ ನಿಯೋಜಿಸಲಾಗಿದೆ.

ಯಾರಿಗೆ ಎಲ್ಲಿಗೆ ನಿಯೋಜನೆ?

ಮಂಜುನಾಥ ಡಿ.ಆರ್ – ಸಿ.ಐ.ಡಿ.ಯಿಂದ ಬಡಾವಣೆ ವೃತ್ತ, ಚಿತ್ರದುರ್ಗ ಜಿಲ್ಲೆ

ಗುರುಪ್ರಸಾದ್ ಜೆ – ಸಿ.ಐ.ಡಿ.ಯಿಂದ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆ, ಚಿತ್ರದುರ್ಗ ಜಿಲ್ಲೆ

ಗಜೇಂದ್ರಪ್ಪ ಕೆ.ಎನ್ – ಆಂತರಿಕ ಭದ್ರತಾ ವಿಭಾಗದಿಂದ ಆಜಾದ್ ನಗರ ಪೊಲೀಸ್ ಠಾಣೆ, ದಾವಣಗೆರೆ ಜಿಲ್ಲೆ

ರಾಷ್ಟ್ರಪತಿ ಹೆಚ್.ಎಸ್ – ಆಂತರಿಕ ಭದ್ರತಾ ವಿಭಾಗದಿಂದ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆ, ದಾವಣಗೆರೆ ಜಿಲ್ಲೆ

ಶ್ರೀನಿವಾಸ ಎಲ್ – ಆಂತರಿಕ ಭದ್ರತಾ ವಿಭಾಗದಿಂದ ತುರುವನೂರು ಪೊಲೀಸ್ ಠಾಣೆ, ಚಿತ್ರದುರ್ಗ ಜಿಲ್ಲೆ

ಶರಣಪ್ಪ ಎಲ್ ಹಡ್ಲಿ – ಎಸ್ಸಿಆರ್ಬಿ ಬೆಂಗಳೂರಿನಿಂದ ಪೇಪರ್ ಟೌನ್ ಪೊಲೀಸ್ ಠಾಣೆ, ಶಿವಮೊಗ್ಗ ಜಿಲ್ಲೆ

ನಿಯೋಜಿತ ಅಧಿಕಾರಿಗಳನ್ನು ಕೂಡಲೇ ಕರ್ತವ್ಯದಿಂದ ಬಿಡುಗಡೆಗೊಳಿಸಿ, ನಿಯುಕ್ತಿಗೊಂಡ ಸ್ಥಳಗಳಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಲು ಹಾಗೂ ಈ ಕುರಿತು ಪಾಲನಾ ವರದಿಯನ್ನು ಮುಖ್ಯ ಕಚೇರಿಗೆ ಸಲ್ಲಿಸಲು ಸಂಬಂಧಪಟ್ಟ ಘಟಕಾಧಿಕಾರಿಗಳಿಗೆ ಡಿಜಿ-ಐಜಿಪಿ ಡಾ. ಎಂ.ಎ. ಸಲೀಂ ಸೂಚನೆ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now