ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ ಮೇ. 17: ಚಿತ್ರದುರ್ಗ ನಗರದಿಂದ ದಾವಣಗೆರೆಗೆ ತೆರಳುವ ರಸ್ತೆ ಮಾರ್ಗ ಅಂದರೆ ಚಿತ್ರದುರ್ಗದ ರೈಲ್ವೆ ಸ್ಟೇಷನ್ ಹತ್ತಿರದ ರೈಲ್ವೆ ಗೇಟ್‍ಗೆ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಒಂದು ವಾರದ ಒಳಗಾಗಿ ಟೆಂಡರ್ ಕರೆಯಬೇಕು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅಧಿಕಾರಿಗಳಿಗೆ ತಾಕೀತು ಮಾಡಿದರು.
ನಗರದ ರೈಲ್ವೆ ನಿಲ್ದಾಣ ಬಳಿ ಇರುವ ಚಿತ್ರದುರ್ಗ-ದಾವಣಗೆರೆ ಮಾರ್ಗದ ರಸ್ತೆಗೆ ಅಡ್ಡಲಾಗಿರುವ ರೈಲ್ವೆ ಗೇಟ್ ಸ್ಥಳಕ್ಕೆ ಶನಿವಾರದಂದು ಭೇಟಿ ನೀಡಿದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಈ ರೈಲ್ವೆ ಗೇಟ್ ಸಂಖ್ಯೆ 22 ರಿಂದ ಸಾರ್ವಜನಿಕರಿಗೆ, ವಾಹನ ಸಂಚಾರಕ್ಕೆ ಉಂಟಾಗುತ್ತಿರುವ ತೀವ್ರ ತೊಂದರೆಗಳ ಬಗ್ಗೆ ಸಂಸದ ಗೋವಿಂದ ಕಾರಜೋಳ ಅವರು ಮನವರಿಕೆ ಮಾಡಿಕೊಟ್ಟರು. ದಿನಕ್ಕೆ ಕನಿಷ್ಟ 30 ಬಾರಿ ರೈಲ್ವೆ ಗೇಟ್ ಬಂದ್ ಮಾಡುವುದರಿಂದ, ಹಲವು ಬಾರಿ ಆ್ಯಂಬುಲೆನ್ಸ್‍ಗಳು, ಪ್ರಯಾಣಿಕರ ಬಸ್‍ಗಳು, ವಾಹನ ಸವಾರರು ಅಸಹನೀಯ ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸ್ಥಳದಲ್ಲಿ ಉಪಸ್ಥಿತರಿದ್ದ ರೈಲ್ವೆಯ ಉಪ ಮುಖ್ಯ ಇಂಜಿನಿಯರ್ ನಿಂಗಪ್ಪ ಅವರನ್ನು ರೈಲ್ವೆ ಸಚಿವ ವಿ. ಸೋಮಣ್ಣ ಅವರು ತೀವ್ರ ತರಾಟೆಗೆ ತೆಗೆದುಕೊಂಡು, ಈ ರೈಲ್ವೆ ಗೇಟ್‍ನ ಸಮಸ್ಯೆ ಪರಿಹರಿಸಲು ಈ ಹಿಂದೆಯೇ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದ್ದು, ಅನುದಾನವನ್ನೂ ಕೂಡ ಒದಗಿಸಲಾಗಿದೆ. ಆದರೆ ನೀವು ಯಾವುದೇ ಕ್ರಮ ಕೈಗೊಳ್ಳದೆ ಕಾಲಹರಣ ಮಾಡುತ್ತಿದ್ದೀರ, ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಅಧಿಕಾರಿಗಳಿಗೆ ಬದ್ಧತೆ ಇರಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿ, ಒಂದು ವಾರದ ಒಳಗಾಗಿ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಬೇಕು, ತಪ್ಪಿದಲ್ಲಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯಕ್ ಅವರು ಮಾತನಾಡಿ, ಈ ಮಾರ್ಗದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಬಳಿಕ ನಗರದ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ವಿ. ಸೋಮಣ್ಣ ಅವರು, ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗದ ಕಾಮಗಾರಿ ಕೈಗೊಳ್ಳುವ ಸಂದರ್ಭದಲ್ಲಿ ನಗರದ ರೈಲ್ವೆ ನಿಲ್ದಾಣದಲ್ಲಿ ನಿರ್ಮಿಸಲಾಗುವ ರೈಲ್ವೆ ಲೈನ್‍ಗಳ ಬಗ್ಗೆ ಹಾಗೂ ಚಿತ್ರದುರ್ಗದ ರೈಲ್ವೆ ನಿಲ್ದಾಣವನ್ನು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಅಭಿವೃದ್ದಿಪಡಿಸಲಾಗುತ್ತಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಸಂಸದ ಗೋವಿಂದ ಎಂ. ಕಾರಜೋಳ, ರೈಲ್ವೆ ಇಲಾಖೆ ಮುಖ್ಯ ಆಡಳಿತಾಧಿಕಾರಿ (ನಿರ್ಮಾಣ) ಅಜಯ್ ಶರ್ಮಾ, ವಿಭಾಗೀಯ ರೈಲ್ವೆ ವ್ಯವಸ್ಥಾಪಕ (ಡಿಜಿಎಂ) ಮುದಿತ್ ಮಿತ್ತಲ್, ದಾವಣಗೆರೆ-ಚಿತ್ರದುರ್ಗ-ತುಮಕೂರು ರೈಲ್ವೆ ಮಾರ್ಗದ ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯಕ್ ಸೇರಿದಂತೆ ವಿವಿಧ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್