ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ನೀಡುವುದಾಗಿ ಭರವಸೆ ನೀಡಿದ್ದ ಕಾರಣ ಇದೀಗ ಎರಡು ಯೋಜನೆಗಳನ್ನು ಈಗಾಗಲೇ ಜಾರಿಗೆ ತರಲಾಗಿದೆ. ಈಗ ಮೂರನೇ ಯೋಜನೆ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತರುವುದೇ ಸರ್ಕಾರಕ್ಕೆ ಸಂಕಷ್ಟವಾಗಿದೆ.
ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರ ಬಳಿ ಅಕ್ಕಿ ನೀಡಲು ಕೇಳಲಾಗಿದೆ. ಆದರೆ ಆ ಕಡೆಯಿಂದ ರೆಸ್ಪಾನ್ಸ್ ಸಿಕ್ಕಿಲ್ಲ. ಛತ್ತಿಸ್ ಗಡ, ಆಂಧ್ರದಿಂದ ಅಕ್ಕಿ ಕೊಡುವುದಕ್ಕೆ ಪಾಸಿಟಿವ್ ರೆಸ್ಪಾನ್ಸ್ ಸಿಕ್ಕಿದೆ. ಆದರೆ ಅಕ್ಕಿಯನ್ನು ರಾಜ್ಯಕ್ಕೆ ತರುವಷ್ಟರಲ್ಲಿ ಟ್ರಾವೆಲ್ ಹಣವೇ ಹೆಚ್ಚಾಗಲಿದೆ. ಹೀಗಾಗಿ ರಾಜ್ಯ ಸರ್ಕಾರ ಚಿಂತನೆ ಮಾಡುತ್ತಿದೆ.
ಈ ಬಗ್ಗೆ ಮಾತನಾಡಿದ ಸಚಿವ ಮುನಿಯಪ್ಪ, ನೆರೆ ರಾಜ್ಯದವರು ಅಕ್ಕಿಯನ್ನು ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ ಎಷ್ಟು ಕೊಡುತ್ತೀವಿ ಎಂಬುದಕ್ಕೆ ಇನ್ನು ಸ್ಪಷ್ಟನೆ ನೀಡಿಲ್ಲ. ಕೇಂದ್ರ ಸರ್ಕಾರದವರು ರಾಜಕಾರಣ ಮಾಡುತ್ತಿರುವುದಕ್ಕೆ ತಡವಾಗುತ್ತಾ ಇದೆ. ಅಕ್ಕಿಯನ್ನು ಆದಷ್ಟು ಬೇಗ ಕೊಡುವುದಕ್ಕೆ ತೀರ್ಮಾನ ಮಾಡುತ್ತೇವೆ ಎಂದು ಆಹಾರ ಸಚಿವ ಮುನಿಯಪ್ಪ ತಿಳಿಸಿದ್ದಾರೆ.