ಭೀಕರ ಅಪಘಾತ : ಕಣಿವೆಗೆ ಬಿದ್ದ ಸೇನಾ ವಾಹನ, 9 ಯೋಧರು ಹುತಾತ್ಮ

 

ಭಾರತೀಯ ಸೇನೆ : ಭಾರತೀಯ ಸೈನಿಕರು ಪ್ರಯಾಣಿಸುತ್ತಿದ್ದ ವಾಹನವೊಂದು ಭೀಕರ ರಸ್ತೆ ಅಪಘಾತಕ್ಕೀಡಾಗಿದೆ. ಲಡಾಖ್‌ನ ಖೇರಿ ಬಳಿ ನಡೆದ ಈ ದುರ್ಘಟನೆಯಲ್ಲಿ 9 ಯೋಧರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲೇಹ್‌ನಿಂದ 150 ಕಿಮೀ ದೂರದಲ್ಲಿರುವ ಖೇರಿ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಅಪಘಾತದ ಸಮಯದಲ್ಲಿ ವಾಹನದಲ್ಲಿ 10 ಮಂದಿ ಭಾರತೀಯ ಸೈನಿಕರು ಇದ್ದರು ಎಂದು ಉನ್ನತ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಮೃತ 9 ಮಂದಿಯಲ್ಲಿ ಒಬ್ಬರು ಜೂನಿಯರ್ ಕಮಿಷನ್ಡ್ ಅಧಿಕಾರಿ ಮತ್ತು 8 ಇತರ ಯೋಧರು ಇದ್ದಾರು ಎಂದು ತಿಳಿದು ಬಂದಿದೆ. ಆದರೆ, ಘಟನೆ ವೇಳೆ ವಾಹನದಲ್ಲಿ 10 ಮಂದಿ ಪ್ರಯಾಣಿಸುತ್ತಿದ್ದರು. ತೀವ್ರವಾಗಿ ಗಾಯಗೊಂಡ ಮತ್ತೋರ್ವ ಯೋಧನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶನಿವಾರ ಸಂಜೆ 10 ಮಂಮದಿ ಯೋಧರು ಕೆರೆ ಗ್ಯಾರಿಸನ್‌ನಿಂದ ಲೇಹ್ ಬಳಿಯ ಖೇರಿಗೆ ಸೇನಾ ವಾಹನದಲ್ಲಿ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಅವರು ಪ್ರಯಾಣಿಸುತ್ತಿದ್ದ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಆಳವಾದ ಕಣಿವೆಗೆ ಬಿದ್ದಿದೆ.ಅಷ್ಟೊಂದು ಎತ್ತರದಿಂದ ಸೇನಾ ವಾಹನ ಬಿದ್ದಿದ್ದರಿಂದ 10 ಮಂದಿಯಲ್ಲಿ 9 ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ಯೋಧರು ಪ್ರಯಾಣಿಸುತ್ತಿದ್ದ ವಾಹನ ಕಣಿವೆಗೆ ಬಿದ್ದಿರುವ ಮಾಹಿತಿ ಪಡೆದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಭಾರತೀಯ ಸೇನೆ ಮತ್ತು ಇತರ ಸ್ಥಳೀಯ ಪಡೆಗಳನ್ನು ತಕ್ಷಣವೇ ಘಟನಾ ಸ್ಥಳಕ್ಕೆ ಕಳುಹಿಸಲಾಗಿದೆ. ತಕ್ಷಣವೇ ರಕ್ಷಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮೃತದೇಹಗಳನ್ನು ಹೊರತೆಗೆಯಲಾಗುತ್ತಿದ್ದು, ಬದುಕುಳಿದವರನ್ನು ಪತ್ತೆ ಹಚ್ಚಿ ವಾಹನವನ್ನು ಮೇಲಕ್ಕೆ ಎಳೆಯಲಾಗುತ್ತಿದೆ. ಆದರೆ ಮೃತಪಟ್ಟವರ ವಿವರವನ್ನು ಸೇನಾ ಅಧಿಕಾರಿಗಳು ಇನ್ನೂ ಬಹಿರಂಗಪಡಿಸಿಲ್ಲ.

Share This Article
Leave a Comment

Leave a Reply

Your email address will not be published. Required fields are marked *