ಸುದ್ದಿಒನ್
ಡೆಹ್ರಾಡೂನ್ : ಉತ್ತರಾಖಂಡದಲ್ಲಿ ಬುಧವಾರ ಬೆಳಗ್ಗೆ ಭೀಕರ ಘಟನೆ ಸಂಭವಿಸಿದೆ. ಅಲಕನಂದಾ ನದಿಯ ಚಮೋಲಿ ಅಣೆಕಟ್ಟಿನ ಬಳಿ ಸಂಭವಿಸಿದ ಸ್ಫೋಟದಲ್ಲಿ 15 ಜನರು ಸಾವನ್ನಪ್ಪಿದ್ದಾರೆ.
ಇನ್ನು ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಮಾಮಿ ಗಂಗಾ ಯೋಜನೆಯ ಭಾಗವಾಗಿ ನಿರ್ಮಿಸಲಾಗಿದ್ದ ಸೇತುವೆಯ ಬಳಿ ಇದ್ದ ಟ್ರಾನ್ಸ್‌ಫಾರ್ಮರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದ್ದು, ಅದರ ಮೇಲಿದ್ದ ಜನರ ಮೇಲೆ ವಿದ್ಯುತ್ ಪ್ರವಹಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಕನಿಷ್ಠ ಹತ್ತು ಮಂದಿ ಸಾವನ್ನಪ್ಪಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಚಮೋಲಿ ಜಿಲ್ಲಾ ಎಸ್ಪಿ ಪರಮೇಂದ್ರ ದೋವಲ್ ತಿಳಿಸಿದ್ದಾರೆ.
Uttarakhand: Policeman among 10 killed in Chamoli transformer explosion
Read @ANI Story | https://t.co/en9zR94aYG#Uttarakhand #Chamoli pic.twitter.com/XXve8J5XVK
— ANI Digital (@ani_digital) July 19, 2023
ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
ಸುಮಾರು ಎರಡು ವಾರಗಳಿಂದ ಸುರಿಯುತ್ತಿರುವ ಮಳೆಯಿಂದ ಉತ್ತರಾಖಂಡ ತತ್ತರಿಸಿದೆ. ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ಸತತ ಮಳೆಯಿಂದಾಗಿ ರಾಜಧಾನಿ ಡೆಹ್ರಾಡೂನ್‌ನಲ್ಲಿ 8 ಮನೆಗಳು ಮತ್ತು ಅಂಗಡಿಗಳು ಕುಸಿದಿವೆ. ಹಲವು ಪ್ರದೇಶಗಳು ಪ್ರವಾಹದ ನೀರಿನಲ್ಲಿ ಸಿಲುಕಿಕೊಂಡಿವೆ. ಹವಾಮಾನ ಇಲಾಖೆಯು ಪಿಥೋರ್‌ಘಡ್, ಬಾಗೇಶ್ವರ್, ಅಲ್ಮೋರಾ, ಚಂಪಾವತ್, ನೈನಿತಾಲ್ ಮತ್ತು ಉದ್ಧಮ್ ಸಿಂಗ್ ನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಗಂಗಾ ಜಲಾನಯನ ಪ್ರದೇಶದಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪಡೆಗಳನ್ನು ನಿಯೋಜಿಸಲಾಗಿದೆ. ಪ್ರಮುಖ ನದಿಗಳಲ್ಲಿನ ಪ್ರವಾಹ ಅಪಾಯಕಾರಿ ಮಟ್ಟವನ್ನು ದಾಟಿದೆ.
ಎರಡೂವರೆ ವರ್ಷಗಳ ಹಿಂದೆ, ಚಮೋಲಿ ಅಣೆಕಟ್ಟಿನ ಬಳಿ ಹಿಮಪಾತವು ದೌಲಿ ಗಂಗಾದಲ್ಲಿ ಹಠಾತ್ ಪ್ರವಾಹಕ್ಕೆ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.