Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉತ್ತರಾಖಂಡದಲ್ಲಿ ಭೀಕರ ಘಟನೆ : ಟ್ರಾನ್ಸ್‌ಫಾರ್ಮರ್  ಸ್ಫೋಟಗೊಂಡು 15 ಮಂದಿ ಸಾವು…!

---Advertisement---

 

ಸುದ್ದಿಒನ್

ಡೆಹ್ರಾಡೂನ್‌ : ಉತ್ತರಾಖಂಡದಲ್ಲಿ ಬುಧವಾರ ಬೆಳಗ್ಗೆ ಭೀಕರ ಘಟನೆ ಸಂಭವಿಸಿದೆ. ಅಲಕನಂದಾ ನದಿಯ ಚಮೋಲಿ ಅಣೆಕಟ್ಟಿನ ಬಳಿ ಸಂಭವಿಸಿದ ಸ್ಫೋಟದಲ್ಲಿ 15 ಜನರು ಸಾವನ್ನಪ್ಪಿದ್ದಾರೆ.
ಇನ್ನು ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಮಾಮಿ ಗಂಗಾ ಯೋಜನೆಯ ಭಾಗವಾಗಿ ನಿರ್ಮಿಸಲಾಗಿದ್ದ ಸೇತುವೆಯ ಬಳಿ ಇದ್ದ ಟ್ರಾನ್ಸ್‌ಫಾರ್ಮರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದ್ದು, ಅದರ ಮೇಲಿದ್ದ ಜನರ ಮೇಲೆ ವಿದ್ಯುತ್ ಪ್ರವಹಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಕನಿಷ್ಠ ಹತ್ತು ಮಂದಿ ಸಾವನ್ನಪ್ಪಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಚಮೋಲಿ ಜಿಲ್ಲಾ ಎಸ್ಪಿ ಪರಮೇಂದ್ರ ದೋವಲ್ ತಿಳಿಸಿದ್ದಾರೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.  ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಸುಮಾರು ಎರಡು ವಾರಗಳಿಂದ ಸುರಿಯುತ್ತಿರುವ ಮಳೆಯಿಂದ ಉತ್ತರಾಖಂಡ ತತ್ತರಿಸಿದೆ. ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ಸತತ ಮಳೆಯಿಂದಾಗಿ ರಾಜಧಾನಿ ಡೆಹ್ರಾಡೂನ್‌ನಲ್ಲಿ 8 ಮನೆಗಳು ಮತ್ತು ಅಂಗಡಿಗಳು ಕುಸಿದಿವೆ. ಹಲವು ಪ್ರದೇಶಗಳು ಪ್ರವಾಹದ ನೀರಿನಲ್ಲಿ ಸಿಲುಕಿಕೊಂಡಿವೆ. ಹವಾಮಾನ ಇಲಾಖೆಯು ಪಿಥೋರ್‌ಘಡ್, ಬಾಗೇಶ್ವರ್, ಅಲ್ಮೋರಾ, ಚಂಪಾವತ್, ನೈನಿತಾಲ್ ಮತ್ತು ಉದ್ಧಮ್ ಸಿಂಗ್ ನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಗಂಗಾ ಜಲಾನಯನ ಪ್ರದೇಶದಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪಡೆಗಳನ್ನು ನಿಯೋಜಿಸಲಾಗಿದೆ. ಪ್ರಮುಖ ನದಿಗಳಲ್ಲಿನ ಪ್ರವಾಹ ಅಪಾಯಕಾರಿ ಮಟ್ಟವನ್ನು ದಾಟಿದೆ.

ಎರಡೂವರೆ ವರ್ಷಗಳ ಹಿಂದೆ, ಚಮೋಲಿ ಅಣೆಕಟ್ಟಿನ ಬಳಿ ಹಿಮಪಾತವು ದೌಲಿ ಗಂಗಾದಲ್ಲಿ ಹಠಾತ್ ಪ್ರವಾಹಕ್ಕೆ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment