ಇರಾಕ್‌ನ ಮದುವೆ ಸಮಾರಂಭದಲ್ಲಿ ಭೀಕರ ಅಗ್ನಿ ದುರಂತ : ವಧುವರ ಸೇರಿ 100 ಕ್ಕೂ ಹೆಚ್ಚು ಮಂದಿ ಸಜೀವ ದಹನ

suddionenews
1 Min Read

 

Iraq Fire Accident: ‌ ಇರಾಕ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಮದುವೆ ಸಮಾರಂಭ ನಡೆಯುತ್ತಿದ್ದ ಪಂಕ್ಷನ್ ಹಾಲ್ ನಲ್ಲಿ ಈ ದುರ್ಘಟನೆ ನಡೆದಿದೆ. ಸಮಾರಂಭದ ವೇಳೆ ಬೆಂಕಿ ಕಾಣಿಸಿಕೊಂಡು 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸತ್ತವರಲ್ಲಿ ನವ ದಂಪತಿಗಳು ಇದ್ದಾರೆ ಎಂದು ತಿಳಿದು ಬಂದಿದೆ.

ಉತ್ತರ ಇರಾಕ್ ನ ನಿನೆವಯ ಪ್ರಾಂತ್ಯದ ಅಲ್ಹಮ್ದಾನಿಯಾ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಈ ದುರ್ಘಟನೆ ನಡೆದಿದೆ. ನಿನೆವೆಯ ಡೆಪ್ಯುಟಿ ಗವರ್ನರ್ ಹಸನ್ ಅಲ್-ಅಲ್ಲಾಕ್ ಪ್ರಕಾರ, ಸಮಾರಂಭದಲ್ಲಿ 1000 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಆದರೆ ಮಂಗಳವಾರ ರಾತ್ರಿ 10.45ರ ಸುಮಾರಿಗೆ (ಸ್ಥಳೀಯ ಕಾಲಮಾನ) ಫಂಕ್ಷನ್ ಹಾಲ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ವೇಗವಾಗಿ ಹರಡಿತು ಮತ್ತು 113 ಜನರು ಸಾವನ್ನಪ್ಪಿದರು. ಇನ್ನೂ 150 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ‌ಇವರೆಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಮದುವೆ ಸಮಾರಂಭದಲ್ಲಿ ಪಟಾಕಿ ಸಿಡಿಸಿದ್ದು ಅಪಘಾತಕ್ಕೆ ಪ್ರಾಥಮಿಕ ಕಾರಣ. ಯಾವುದೇ ಮುಂಜಾಗ್ರತೆ ವಹಿಸದೆ ಪಟಾಕಿ ಸಿಡಿಸಿದ್ದರಿಂದ ಅವಘಡ ಸಂಭವಿಸಿದೆ. ಪಂಕ್ಷನ್‌ ಹಾಲ್‌ನಲ್ಲಿದ್ದ ಸಾಮಗ್ರಿಗಳು ಬೇಗ ಹೊತ್ತಿ ಉರಿದಿದ್ದರಿಂದ ಸಮಾರಂಭದಲ್ಲಿ ಭಾಗವಹಿಸಿದ್ದವರು ಹೊರಗೆ ಹೋಗಲು ಸಾಧ್ಯವಾಗಲಿಲ್ಲ. ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ ಅವಘಡದ ಬಗ್ಗೆ ಮಾಹಿತಿ ಪಡೆದ ತಕ್ಷಣ ಪರಿಹಾರ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಆಂಬ್ಯುಲೆನ್ಸ್‌ಗಳು ಸೇರಿದಂತೆ ‌ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದೆ.  ಗಾಯಾಳುಗಳನ್ನು ತಕ್ಷಣ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಆದರೆ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *