Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಭೀಕರ ದುರಂತ; ಯುವಕ ಸಾವು

---Advertisement---

ಸುದ್ದಿಒನ್, ಚಿತ್ರದುರ್ಗ, ಜೂನ್‌. 18 : ನಗರದ ಹೊಳಲ್ಕೆರೆ ರಸ್ತೆಯಲ್ಲಿರುವ ಮಾರ್ಬಲ್ಸ್ ಮತ್ತು ಗ್ರ್ಯಾನೈಟ್ಸ್ ಗೋದಾಮಿನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ (ಕುಡಾ) ಮಾಜಿ ಅಧ್ಯಕ್ಷ ತಿಪ್ಪೇಸ್ವಾಮಿ ಅವರ ಪುತ್ರ ರಾಣಾ ಪ್ರತಾಪ್ ಸಿಂಹ (30 ವರ್ಷ) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಹೊಳಲ್ಕೆರೆ ರಸ್ತೆಯಲ್ಲಿರುವ ಮಾರ್ಬಲ್ಸ್ ಮತ್ತು ಗ್ರ್ಯಾನೈಟ್ಸ್’ ಗೋದಾಮಿನಲ್ಲಿ ಲಾರಿಯಿಂದ ಗ್ರ್ಯಾನೈಟ್ ಬಿಲ್ಲೆಗಳನ್ನು ಇಳಿಸಿ ಜೋಡಿಸುವ ಕಾರ್ಯ ನಡೆಯುತ್ತಿತ್ತು. ಈ ವೇಳೆ ಗೋದಾಮಿನ ಒಳಭಾಗದಲ್ಲಿ ಗೋಡೆಯ ಪಕ್ಕ ನಿಂತಿದ್ದ ರಾಣಾ ಪ್ರತಾಪ್ ಸಿಂಹ ಅವರ ಮೇಲೆ ಭಾರಿ ಗಾತ್ರದ ಗ್ರ್ಯಾನೈಟ್ ಬಿಲ್ಲೆಯೊಂದು ಆಕಸ್ಮಿಕವಾಗಿ ಬಿದ್ದಿದೆ ಎನ್ನಲಾಗಿದೆ.ಭಾರೀ ತೂಕದ ಗ್ರ್ಯಾನೈಟ್ ಕಲ್ಲು ನೇರವಾಗಿ ಕುತ್ತಿಗೆಯ ಭಾಗಕ್ಕೆ ಬಿದ್ದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಆದರ್ಶ ಯುವಕನಾಗಿ ಗುರುತಿಸಿಕೊಂಡಿದ್ದ ಪ್ರತಾಪ್ ಅವರ ಅಕಾಲಿಕ ನಿಧನ ಕುಟುಂಬಸ್ಥರು, ಬಂಧು-ಬಳಗ ಮತ್ತು ಸ್ನೇಹಿತರಲ್ಲಿ ತೀವ್ರ ದುಃಖ ಮೂಡಿಸಿದೆ. ಈ ದುಃಖದ ನಡುವೆಯೂ ಕುಟುಂಬ ಸದಸ್ಯರು ಮಾನವೀಯ ನಿರ್ಧಾರ ಕೈಗೊಂಡಿದ್ದು, ಮೃತ ರಾಣಾ ಪ್ರತಾಪ್ ಸಿಂಹ ಅವರ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಘಟನೆ ಕುರಿತು ಮಾಹಿತಿ ಪಡೆದ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಗೋದಾಮಿನಲ್ಲಿ ಸುರಕ್ಷತಾ ಕ್ರಮಗಳ ಪಾಲನೆ ಕುರಿತು ತನಿಖೆ ಆರಂಭಿಸಲಾಗಿದೆ.ಈ ಸಂಬಂಧ ಚಿತ್ರದುರ್ಗ ಕೋಟೆ ಪೊಲೀಸ್ ಠಾಣೆಯಲ್ಲಿ (Chitradurga kote Police Station) ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now