ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 23 : ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಮಂಗಳವಾರ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 26 ಮಂದಿ ಬಲಿಯಾಗಿರುವುದನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್‍ನಿಂದ ಗಾಂಧಿವೃತ್ತದಲ್ಲಿ ಬುಧವಾರ ಸಂಜೆ ಮೇಣದಬತ್ತಿ ಬೆಳಗಿ ಸಂತಾಪ ಸೂಚಿಸಲಾಯಿತು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕಾರೇಹಳ್ಳಿ ಉಲ್ಲಾಸ್ ನೇತೃತ್ವದಲ್ಲಿ ನಡೆದ ಮೌನ ಸಂತಾಪದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಪ್ರಧಾನ ಕಾರ್ಯದರ್ಶಿ ಸಂಪತ್, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಯೂತ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ದಾದಾಪೀರ್, ವಸೀಂ, ಕಾರ್ಯದರ್ಶಿ ವೈಶಾಕ್‍ಯಾದವ್
ಉಪಾಧ್ಯಕ್ಷ ಸಮರ್ಥರಾಯ್, ನಗರಾಧ್ಯಕ್ಷ ಪವನ್, ಇಂಜುಮಾಮ್, ದರ್ಶನ್, ಮಹಂತೇಶ್, ಪ್ರಧಾನ ಕಾರ್ಯದರ್ಶಿ ಪವನ್ ಸೇರಿದಂತೆ ಯೂತ್ ಕಾಂಗ್ರೆಸ್‍ನ ಪದಾಧಿಕಾರಿಗಳು ಸಂತಾಪದಲ್ಲಿ ಭಾಗವಹಿಸಿದ್ದರು.






