Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಂದು ಸುಳ್ಳು ಕೊಲೆ ಕೇಸಲ್ಲಿ ಯುವಕ ಅರೆಸ್ಟ್ : ಇಂದು ಆ ಪೊಲೀಸರೇ ಅಮಾನತು

---Advertisement---

ಮೈಸೂರು: ಇಂಥ ಘಟನೆಗಳನ್ನ ಕೆಲವೊಂದು ಸಿನಿಮಾದಲ್ಲಿ ನೋಡಿರ್ತೇವೆ. ಇನ್ನು ಕೆಲವೊಂದು ಸಲ ರಾಜ್ಯದಲ್ಲಿ ಯೇ ನಡೆದ ಉದಾಹರಣೆಗಳನ್ನು ಕೇಳಿರುತ್ತೇವೆ. ಸುಳ್ಳು ಕೇಸಲ್ಲಿ ಪೊಲೀಸ್ ಠಾಣೆ ಒಳಗೆ ಹೋದವರು ಅನುಭವಿಸಿ ಬಂದ ನರಕ ದರ್ಶನದ ಉದಾಹರಣೆಯೂ ಇದೆ. ಹೀಗೆ ಸುಳ್ಳು ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನ ಬಂಧಿಸಿದ್ದ ಘಟನೆ ಮೈಸೂರಿನಲ್ಲಿ ನಡೆದಿತ್ತು. ಇದೀಗ ಅದಕ್ಕೆ ಸಂಬಂಧಿಸಿದಂತೆ ಪೊಲೀಸರನ್ನು ಅಮಾನತು ಮಾಡಿರುವ ಘಟನೆ ಮೈಸೂರಿನ ಪಿರಿಯಾಪಟ್ಟಣದಲ್ಲಿ ನಡೆದಿದೆ.

ಬೆಟ್ಟದಪುರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಬಿ.ಜಿ.ಪ್ರಕಾಶ್, ಇಲವಾಲ ಸಬ್ ಇನ್ಸ್‌ಪೆಕ್ಟರ್ ಮಹೇಶ್ ಕುಮಾರ್ ಹಾಗೂ ಜಯಪುರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಪ್ರಕಾಶ್ ಎತ್ಯಿನಮನೆಯವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

2020ರ ನವೆಂಬರ್ 12 ರಂದು ಬೆಟ್ಟದಪುರದಲ್ಲಿ ಒಬ್ಬ ಮಹಿಳೆಯ ಮೃತದೇಹ ಸಿಕ್ಕಿತ್ತು. ಆ ಮೃತದೇಹದ ಮರಣೋತ್ತರ ಪರೀಕ್ಷೆಯಲ್ಲಿ ಬಲವಾದ ಏಟಿನಿಂದ ಮಹಿಳೆ ಮೃತಪಟ್ಟಿದ್ದಾರೆ ಎಂಬುದು ದೃಢವಾಗಿತ್ತು. ಹೀಗಾಗಿ ಅದು ಕೊಲೆ ಎಂದು ಸ್ಪಷ್ಟವಾಗಿತ್ತು. ಇದರ ನಡುವೆ ಕುಶಾಲನಗರದ ಬಸವನಹಳ್ಳಿ ಹೊಸ ಬಡಾವಣೆಯ ಜೇನುಕುರುಬ ಆದಿವಾದಿ ಸಮುದಾಯಕ್ಕೆ ಸೇರಿದವರಾ್ ಸುರೇಶ್ ಅಲಿಯಾಸ್ ಕುರುಬರ ಸುರೇಶ್, 2020ರ ನವೆಂಬರ್ ನಲ್ಲಿ ಪತ್ನಿ ಕಾಣೆಯಾಗಿರುವ ಕುರಿತು ಕುಶಾಲನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪತ್ನಿ ಕಾಣೆಯಾಗಲು ಗಣೇಶ್ ಎಂಬಾತನೇ ಕಾರಣ ಎಂದು ತಿಳಿಸಿದ್ದರು. ಬಳಿಕ ಮಲ್ಲಿಗೆ ತಾಯಿ ಗೌರಿ ಅವರು ಮಗಳು ಕೊಲೆಯಾಗಿರುವ ಬಗ್ಗೆ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಸುರೇಶ್ ಅವರನ್ನೆರ ಆರೋಪಿಯಾಗಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ವಿಚಾರಣಾಧಿಕಾರಿಗಳು ಕಟ್ಟು ಕಥೆ ಕಟ್ಟಿದ್ದರು. ಬೆಟ್ಟದಪುರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಬಿ.ಜಿ. ಪ್ರಕಾಶ್ ನ್ಯಾಯಾಲಯಕ್ಕೆ ಸುಳ್ಳು ಜಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. ಈ ಸಂಬಂಧ ಇದೀಗ ಇನ್ಸ್‌ಪೆಕ್ಟರ್ ಹಾಗೂ ಸಬ್ ಇನ್ಸ್‌ಪೆಕ್ಟರ್ ಅಮನಾತಾಗಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment