Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಷ್ಕರ ಬಿಟ್ಟು ಕೆಲಸಕ್ಕೆ ಹಾಜರಾಗಲು ಕ್ರಿಯಾ ಸಮಿತಿಯೇ ಸೂಚನೆ..!

---Advertisement---

ಬೆಂಗಳೂರು: ಹೈಕೋರ್ಟ್ ಆದೇಶ ಇದ್ದತು ಕೂಡ ನಾಲ್ಕು ನಿಗಮಗಳ ಸಾರಿಗೆ ನೌಕರರು ಬೆಳಗ್ಗೆಯಿಂದ ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ಪ್ರತಿದಿನ ಓಡಾಟ ನಡೆಸ್ತಾ ಇದ್ದ ಜನರಿಗೆ ಸಾಕಷ್ಟು ಸಮಸ್ಯೆಯು ಎದುರಾಯ್ತು. ಕ್ರಿಯಾ ಸಮಿತಿಯಿಂದ ಹೋರಾಟ ಮಾಡಿಯೇ ತೀರ್ತೀವಿ ಎಂಬ ನಿರ್ಧಾರದಿಂದ ಪ್ರತಿಭಟನೆ ಶುರುವಾಗಿತ್ತು. ಸಂಜೆ ವೇಳೆಗೆ ಅದೇ ಕ್ರಿಯಾ ಸಮಿತಿಯು ಎಲ್ಲರೂ ಕೆಲಸಕ್ಕೆ ಹಾಜರಾಗಿ ಎಂಬ ಸೂಚನೆಯನ್ನು ನೀಡಿದೆ.

ಈ ಸಂಬಂಧ ಮಾತನಾಡಿದ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬುರಾವ್, ಸಾರಿಗೆ ನೌಕರರ ಮುಷ್ಕರವನ್ನು ಮುಂದೂಡಿದ್ದೇವೆ. ನಾವೂ ಮುಷ್ಕರವನ್ನ ಕೈಬಿಟ್ಟಿಲ್ಲ, ಸದ್ಯಕ್ಕೆ ಮುಂದೂಡಿಕೆ ಮಾಡಿದ್ದೇವೆ ಅಷ್ಟೆ. ಸರ್ಕಾರ ನಮ್ಮನ್ನು ಮಾತುಕತೆಗೆ ಕರೆಯಬಹುದು ಎಂಬ ಆತ್ಮ ವಿಶ್ವಾಸವಿದೆ. ಈಗ ನೌಕರರು ಕರ್ತವ್ಯಕ್ಕೆ ಹಾಜರಾಗುವ ಕಾರಣ ಎಸ್ಮಾ ಅನ್ವಯವಾಗುವುದಿಲ್ಲ ಎಂದು ಅನಂತ ಸುಬ್ಬುರಾವ್ ತಿಳಿಸಿದ್ದಾರೆ.

ಈ ಮುಷ್ಕರ ಮಾಡಬೇಡಿ ಅಂತ ಹೈಕೋರ್ಟ್ ಸೂಚನೆ ನೀಡಿದ್ರು ಸಹ ಜಂಟಿ ಕ್ರಿಯಾ ಸಮಿತಿ ಅದಕ್ಕೆ ಬೆಲೆ ಕೊಡದೆ ಮುಷ್ಕರ ಮಾಡಿದ್ದಕ್ಕೆ ಸಮಿತಿಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಮುಷ್ಕರ ನಿಲ್ಲಿಸಬೇಕು ಎಂದು ಹೈಕೋರ್ಟ್ ಹೇಳಿತ್ತು. ಈ ಸಂಬಂಧ ಆಗಸ್ಟ್ 7ಕ್ಕೆ ಹೈಕೋರ್ಟ್ ನಲ್ಲಿ ಈ ಸಂಬಂಧ ವಿಚಾರಣೆ ನಡೆಯಲಿದೆ. ಸಾರಿಗೆ ಮುಷ್ಕರದ ಬಗ್ಗೆ ನ್ಯಾಯಾಲಯ ವಿಚಾರಣೆ ನಡೆಸಿತ್ತು.ಯೂನಿಯನ್ ಅನ್ನು ಯಾರು ಮುನ್ನಡೆಸುತ್ತಿದ್ದಾರೆ ಎಂಬುದನ್ನು ನ್ಯಾಯಾಲಯ ಕೇಳಿತ್ತು. KSRTC ಪರ ವಕೀಲರು ಕೇವಲ 3 ಸಿಬ್ಬಂದಿ ಮಾತ್ರ ರಜೆ ತೆಗೆದುಕೊಂಡಿದ್ದಾರೆ ಎಂದಿದ್ದರು. ಬೆಂಗಳೂರಿನಲ್ಲಿ ಬಸ್ ಸಂಚಾರ ಇದ್ದು, ಬೇರೆ ಜಿಲ್ಲೆಗಳಲ್ಲಿ ಮುಷ್ಕರ ನಡೆಸಲಾಗುತ್ತಿದೆ ಎಂಬುದನ್ನ ಕೋರ್ಟ್ ಗಮನಕ್ಕೆ ತರಲಾಗಿದೆ ಎಂದು ವಕೀಲೆ ದೀಕ್ಷಾ ಅಮೃತೇಶ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment