Connect with us

Hi, what are you looking for?

ಪ್ರಮುಖ ಸುದ್ದಿ

ಕೋವಿಡ್ ನಿಯಂತ್ರಣಕ್ಕೆ ಗ್ರಾಮಗಳ ದತ್ತು ಸ್ವೀಕಾರ; ಸಿದ್ಧವಾದ ಖಾಸಗಿ ವೈದ್ಯರು

ಸುದ್ದಿಒನ್,ದಾವಣಗೆರೆ, (ಮೇ.19) : ಕೋವಿಡ್ ಸೋಂಕು ಗ್ರಾಮ ಮಟ್ಟದಲ್ಲಿ ವೇಗವಾಗಿ ಹರಡುತ್ತಿದ್ದು, ಇದನ್ನು ತಡೆಗಟ್ಟಲು ಗ್ರಾಮಗಳ ದತ್ತು ಸ್ವೀಕಾರಕ್ಕೆ ಖಾಸಗಿ ವೈದ್ಯರು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಮನವಿ ಮಾಡಿದರು.

ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಕೋವಿಡ್ ಸೋಂಕಿತರ ಆರೋಗ್ಯ ಮೇಲ್ವಿಚಾರಣೆ ಮಾಡುವ ಸಂಬಂಧ ವೈದ್ಯರುಗಳ ನಿಯೋಜನೆ ಕುರಿತಂತೆ ಬುಧವಾರ ಏರ್ಪಡಿಸಲಾಗಿದ್ದ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದರು.

ಗ್ರಾಮ ಪಂಚಾಯತ್ ಮಟ್ಟದಲ್ಲಿ ಗ್ರಾಮಗಳನ್ನು ದತ್ತು ಪಡೆದು, ಸತತ 10 ದಿನಗಳ ಕಾಲ ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ, ರೋಗಪತ್ತೆ, ಚಿಕಿತ್ಸೆ ನಿರ್ಧರಣೆಗೆ ಜಿಲ್ಲೆಯಲ್ಲಿರುವ ಖಾಸಗಿ ವೈದ್ಯರು ಸಹಕರಿಸುವ ಮೂಲಕ ಜಿಲ್ಲೆಯ ಋಣ ತೀರಿಸಲು ಮುಂದಾಗಬೇಕು ಎಂದರು.

ನಗರದ ಪ್ರತಿಷ್ಠಿತ ಬಡಾವಣೆಗಳಲ್ಲಿಯೇ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಇದಕ್ಕೆ ಕಾರಣ ಹೋಂ ಐಸೋಲೇಷನ್‍ನ ಅಸಮರ್ಪಕ ವ್ಯವಸ್ಥೆ. ಹಳೆ ದಾವಣಗೆರೆ ಪ್ರದೇಶದಲ್ಲಿ ಜನರು ಸೋಂಕಿನ ಭೀತಿಯಿಲ್ಲದೆ, ನಿತ್ಯವೂ ಅಗತ್ಯ ವಸ್ತಗಳ ಖರೀದಿ ನೆಪದಲ್ಲಿ ಜನಸಂದಣಿಯಲ್ಲಿ ಬೆರೆಯುವುದು ಕಂಡುಬರುತ್ತಿದ್ದು, ಯಾವಾಗ ಸೋಂಕು ಸ್ಫೋಟಗೊಳ್ಳುತ್ತದೆಯೋ ಎನ್ನುವ ಆತಂಕವಿದೆ ಎಂದು ತಿಳಿಸಿದರು.

ಗ್ರಾಮಗಳಲ್ಲಿ ಜನರಿಗೆ ರೋಗದ ಬಗ್ಗೆ ಸರಿಯಾದ ತಿಳುವಳಿಕೆ ಇಲ್ಲ. ಜನರು ತಪ್ಪು ಕಲ್ಪನೆ ಹಾಗೂ ಭೀತಿಯಿಂದ ರೋಗ ಲಕ್ಷಣಗಳಿದ್ದರೂ ಪರೀಕ್ಷೆ ಮಾಡಿಸಿಕೊಳ್ಳದೆ, ರೋಗ ಮುಚ್ಚಿಡುವ ಪ್ರಯತ್ನ ಮಾಡುತ್ತಿದ್ದಾರೆ. ಇಂತಹವರು ರೋಗವನ್ನು ಬೇರೆಯವರಿಗೆ ಹರಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಶೇ.40 ರಷ್ಟು ಪ್ರಕರಣಗಳು ಗ್ರಾಮೀಣ ಪ್ರದೇಶಗಳಿಂದ ವರದಿಯಾಗುತ್ತಿವೆ.

ಹೀಗಾಗಿ ಕೋವಿಡ್ ಸೋಂಕಿನ ಕುರಿತು ಗ್ರಾಮೀಣ ಜನರಲ್ಲಿ ಸರಿಯಾದ ತಿಳುವಳಿಕೆ, ಅರಿವು ಮೂಡಿಸಬೇಕಿದೆ, ಇದರ ಜೊತೆಗೆ ಅವರಲ್ಲಿನ ತಪ್ಪು ಕಲ್ಪನೆಗಳನ್ನು ತೊಡೆದುಹಾಕಿ, ಅವರಲ್ಲಿ ಚಿಕಿತ್ಸೆಯ ಬಗ್ಗೆ ಹಾಗೂ ಸರ್ಕಾರ ನಿಮ್ಮೊಂದಿಗಿದೆ ಎನ್ನುವ ವಿಶ್ವಾಸವನ್ನು ಮೂಡಿಸಬೇಕಿದೆ. ಇದಕ್ಕಾಗಿ ಜಿಲ್ಲೆಯ ಎಲ್ಲ ಖಾಸಗಿ ವೈದ್ಯರ ಸಹಕಾರ ಈಗ ಅತ್ಯಗತ್ಯವಾಗಿದೆ ಎಂದರು.

ಜಿಪಂ ಸಿಇಒ ಡಾ.ವಿಜಯ್ ಮಹಾಂತೇಶ್ ಅವರು ಗ್ರಾಮಗಳ ದತ್ತು ಸ್ವೀಕಾರ ಕುರಿತ ವಿವರಣೆ ನೀಡಿ, ಖಾಸಗಿ ವೈದ್ಯರು ಕನಿಷ್ಟ 2 ತಿಂಗಳು ಗ್ರಾಮಗಳ ದತ್ತು ಸ್ವೀಕರಿಸಬೇಕು. ಖಾಸಗಿ ಹಾಗೂ ಸರ್ಕಾರಿ ವೈದ್ಯರನ್ನು ಒಳಗೊಂಡ ನಿಯೋಜಿತ ತಂಡಗಳು ದತ್ತು ಸ್ವೀಕೃತ ಗ್ರಾಮಗಳಿಗೆ ಭೇಟಿ ನೀಡಿ, ಅಲ್ಲಿನ ಜನರಲ್ಲಿ ವಿಶ್ವಾಸ ಮೂಡಿಸಬೇಕು.

ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೋಂಕು ಲಕ್ಷಣ ಹೊಂದಿರುವ ವ್ಯಕ್ತಿಗಳನ್ನು ಗುರುತಿಸಿ, ಅವರ ಪ್ರಾಥಮಿಕ ಸಂಪರ್ಕಿತರ ಪಟ್ಟಿ ಸಿದ್ಧಪಡಿಸಿಕೊಳ್ಳಬೇಕು, ರೋಗ ಲಕ್ಷಣಗಳುಳ್ಳ ಜನರಿಗೆ ರ್ಯಾಪಿಡ್ ಟೆಸ್ಟ್ ಮಾಡಬೇಕು. ಸೋಂಕು ದೃಢಪಟ್ಟವರ ಆರೋಗ್ಯ ಸ್ಥಿತಿಗತಿ ಹಾಗೂ ಸೋಂಕಿನ ತೀವ್ರತೆಗೆ ಅನುಗುಣವಾಗಿ ಹೋಂ ಐಸೋಲೇಷನ್, ಕೋವಿಡ್ ಕೇರ್ ಸೆಂಟರ್ ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಕುರಿತು ನಿರ್ಧರಿಸಬೇಕು.

ಗ್ರಾಮೀಣರು ತಪ್ಪು ತಿಳುವಳಿಕೆಯಿಂದ ಮಾರ್ಗಸೂಚಿ ಪಾಲಿಸದೆ ಉಡಾಫೆಯಿಂದ ವರ್ತಿಸುತ್ತಿದ್ದಾರೆ. ಕೋವಿಡ್ ಸೋಂಕು ಲಕ್ಷಣ ಪ್ರಾರಂಭವಾಗಿ 5 ದಿನಗಳ ಒಳಗಾಗಿ ಸೋಂಕಿತರಿಗೆ ಚಿಕಿತ್ಸೆ ಪ್ರಾರಂಭವಾಗಬೇಕು, ಇಲ್ಲದಿದ್ದರೆ ಅಂತಹ ವ್ಯಕ್ತಿಯ ಜೀವಕ್ಕೇ ಅಪಾಯ ಎಂಬುದನ್ನು ಮರೆಯಬಾರದು.

ಈ ನಿಟ್ಟಿನಲ್ಲಿ ಗ್ರಾಮೀಣ ಜನರಲ್ಲಿ ಅರಿವು ಮೂಡಿಸಿ, ಸರ್ಕಾರಿ ವ್ಯವಸ್ಥೆಯೊಂದಿಗೆ ಖಾಸಗಿ ವೈದ್ಯರ ನೆರವು ಅತ್ಯಗತ್ಯವಾಗಿದೆ, ಖಾಸಗಿ ವೈದ್ಯರು ಇದಕ್ಕೆ ಸಹಕರಿಸುವ ಮೂಲಕ ಜಿಲ್ಲೆಯನ್ನು ಕೋವಿಡ್ ಸೋಂಕಿನಿಂದ ಮುಕ್ತಗೊಳಿಸಲು ಮುಂದಾಗಬೇಕು. ಇದಕ್ಕಾಗಿ ಅಗತ್ಯವಿರುವ ಎಲ್ಲ ನೆರವನ್ನು ಒದಗಿಸಲಾಗುವುದು ಎಂದರು.

ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಅಧ್ಯಕ್ಷ ಡಾ.ಸೋಮಶೇಖರ್ ಮಾತನಾಡಿ, ಜಿಲ್ಲೆಯಲ್ಲಿ ಬಹಳಷ್ಟು ಜನರು ನಾವು ವೈದ್ಯರಿದ್ದೇವೆ. ವೈದ್ಯರು, ನರ್ಸ್‍ಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಅಗತ್ಯವಿರುವ ಸಿಬ್ಬಂದಿಗಳ ತಂಡವನ್ನು ರಚಿಸಿ, ಗ್ರಾಮಗಳಲ್ಲಿ ಕಾರ್ಯಾಚರಣೆ ಕೈಗೊಳ್ಳಲು ಸೂಕ್ತ ರೂಪರೇಷೆಗಳನ್ನು ಕೈಗೊಂಡಲ್ಲಿ, ಇದಕ್ಕೆ ಜಿಲ್ಲೆಯ ಎಲ್ಲ ವೈದ್ಯರು ಸಹಕಾರ ನೀಡಲು ಸಿದ್ಧರಿದ್ದೇವೆ ಎಂದು ತಿಳಿಸಿದರು.

ನರ್ಸಿಂಗ್ ಅಸೋಸಿಯೇಷನ್, ದಂತ ವೈದ್ಯರ ಸಂಘ ಸೇರಿದಂತೆ ವಿವಿಧ ವೈದ್ಯಕೀಯ ಕ್ಷೇತ್ರಗಳ ಸಂಘಗಳ ಪ್ರತಿನಿಧಿಗಳು, ಜಿಲ್ಲಾಡಳಿತದ ಕರೆಗೆ ಸ್ಪಂದಿಸಿ, ಕೋವಿಡ್ ನಿಯಂತ್ರಣಕ್ಕೆ ಯಾವುದೇ ಸೇವೆ ಸಲ್ಲಿಸಲು ಸದಾ ಸಿದ್ಧರಿದ್ದೇವೆ ಎನ್ನುವ ಭರವಸೆ ನೀಡಿದರು.

ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಡಿಹೆಚ್‍ಒ ಡಾ.ನಾಗರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್, ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ನಟರಾಜ್ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Latest

ಚಿತ್ರದುರ್ಗ

upper bhadra meeting in DS Hally, chitradurga ಡಿಎಸ್ ಹಳ್ಳಿಯಲ್ಲಿ ಭದ್ರಾ ಮೇಲ್ದಂಡೆ ಸಭೆ; ಗ್ರಾಮಸ್ಥರು ಭಾಗಿ ಸುದ್ದಿಒನ್, ಚಿತ್ರದುರ್ಗ, (ಆ.03) : ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಶಾಲೆ ಆವರಣದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.03) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್ ಜೆ ಎಮ್ ಸಿ ಬಿ ಎಸ್ ಇ ರೆಸಿಡೆನ್ಷಿಯಲ್ ಶಾಲೆಯು 2020-21 ನೇ ಸಾಲಿನ ಸಿ ಬಿ ಎಸ್ ಇ...

ಪ್ರಮುಖ ಸುದ್ದಿ

ಬೆಂಗಳೂರು: ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸೋದಕ್ಕಾಗಿಯೇ ಸಿಎಂ ಮೂರು ದಿನದಿಂದ ದೆಹಲಿಯಲ್ಲಿದ್ದಾರೆ. ಈಗಾಗಲೇ ಹೈಕಮಾಂಡ್ ಜೊತೆ ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಸಂಪುಟದಲ್ಲಿ ಯಾರೆಲ್ಲಾ ಇರ್ಬೇಕು...

ಪ್ರಮುಖ ಸುದ್ದಿ

ಮುಂಬೈ: ಶಿಲ್ಲಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ರೋ ಮಗ ವಿಹಾನ್ ಕುಂದ್ರಾ ಕೂಡ ಅಷ್ಟೇ ಆ್ಯಕ್ಟೀವ್ ಆಗಿದ್ದ. ಸದಾ ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕ್ತಾ ಇದ್ದ. ಆದ್ರೆ ರಾಜ್...

ಪ್ರಮುಖ ಸುದ್ದಿ

ರಾಜಸ್ಥಾನ : ಹಿಂದಿನ ಕಾಲದಿಂದಲೂ ಪಾರಿವಾಳ ಸಂದೇಶ ರವಾನಿಸುವ, ಬೇಹುಗಾರಿಕೆಯಲ್ಲೂ ತನ್ನ ಚಾಣಾಕ್ಯತನ ತೋರಿದೆ. ತಂತ್ರಜ್ಞಾನ ಮುಂದುವರೆದ ಕಾಲದಲ್ಲೂ ಪಾಕಿಸ್ತಾನದಿಂದ ಪತ್ರವೊಂದನ್ನ ಹೊತ್ತು ತಂದಿದೆ ಪಾರಿವಾಳ. ಹೌದು, ಈ ಘಟನೆ ನಡೆದಿರೋದು ರಾಜಸ್ಥಾನದ...

ಪ್ರಮುಖ ಸುದ್ದಿ

ಬೆಂಗಳೂರು :ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕೊನೆ ಕ್ಷಣದಲ್ಲಿ ತನ್ನ ಪಾಳಯದ ಬಸವರಾಜ್ ಬೊಮ್ಮಾಯಿ ಅವರಿಗೆ ಪಟ್ಟ ಕಟ್ಟಿ ಇದೀಗ ರಾಜ್ಯ ಪ್ರವಾಸಕ್ಕೆ ಮುಂದಾಗಿದ್ದಾರೆ ಬಿ.ಎಸ್.ಯಡಿಯೂರಪ್ಪ. ದೆಹಲಿಯಲ್ಲಿ ಸಚಿವ ಸಂಪುಟ ಕಸರತ್ತು...

You May Also Like

ಚಿತ್ರದುರ್ಗ

ಚಿತ್ರದುರ್ಗ, (ಜು.31): ಕೋಟೆನಾಡಿನಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೆಳಗಿ ಹೊತ್ತು ವಾಯು ವಿಹಾರಕ್ಕೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡುವ ಕಳ್ಳರು ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಶನಿವಾರ ಬೆಳಗ್ಗೆ...

ಪ್ರಮುಖ ಸುದ್ದಿ

ಅಭಿಮಾನಿಗಳು ತಮ್ಮ ಅಭಿಮಾನವನ್ನ ಒಂದೊಂದು ಬಾರಿ ಒಂದೊಂದು ರೀತಿಯಲ್ಲಿ ಅಭಿಮಾನ ತೋರಿಸ್ತಾರೆ. ಅದರಲ್ಲೂ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗಳಿಗೆ ಹಾರ ಹಾಕಿ, ಅಭಿಷೇಕ‌ ಮಾಡಿ ಎಂಜಾಯ್ ಮಾಡ್ತಾರೆ. ಇನ್ನು ಒಂದೆಜ್ಜೆ...

ಆರೋಗ್ಯ

ರಾಗಿ ತಿಂದೋನಿಗೆ ರೋಗವಿಲ್ಲ ಅನ್ನೋ ಮಾತು ಕೇಳಿರ್ತೀರಿ. ಆದ್ರೆ ಈ ಮಾತು ಯಾಕೆ ಹೇಳ್ತಾರೆ ಅಂತ ಗೊತ್ತಾಗ್ಬೇಕಂದ್ರೆ ರಾಗಿಯಿಂದ ಆರೋಗ್ಯಕ್ಕೆ ಅದೆಷ್ಟೆಲ್ಲ ಲಾಭಗಳಿವೆ ಎಂದು ತಿಳ್ಕೋಬೇಕು. ರಾಗಿಯಲ್ಲಿ ಸಾಕಷ್ಟು ಕ್ಯಾಲ್ಶಿಯಂ ಇದೆ. ಆಸ್ಟಿಯೋಪೋರೋಸಿಸ್...

ಆರೋಗ್ಯ

ಅರಳಿ ಮರ ಸಾಮಾನ್ಯವಾಗಿ ಎಲ್ಲೆಡೆ ಇರುತ್ತೆ. ಅದಕ್ಕೆ ನಗರ, ಗ್ರಾಮೀಣ ಅಂತೆಲ್ಲಾ ಏನಿಲ್ಲ. ನಗರ ಪ್ರದೇಶದಲ್ಲೂ ದೇವಾಲಯದ ಮುಂದೆ ಅರಳಿಮರವನ್ನ ಕಾಣಬಹುದು. ಈ ಅರಳಿ‌ಮರದ ಎಲೆಗಳಿಂದ ಸಾಕಷ್ಟು ಲಾಭಗಳಿವೆ. ಅದು ಅಷ್ಟಾಗಿ ಯಾರಿಗೂ...

Copyright © 2021 Suddione. Kannada online news portal

error: Content is protected !!