Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬಲಿಜ ಜನಾಂಗ ಆರ್ಥಿಕ, ಶೈಕ್ಷಣಿಕವಾಗಿ ಸಧೃಢವಾಗಬೇಕಿದೆ : ಎನ್. ತಿಮ್ಮಶೆಟ್ಟಿ

---Advertisement---

 

ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್. 22 : ಬಲಿಜ ಸಮುದಾಯ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಸದೃಢವಾಗಬೇಕಿದೆ ಎಂದು ತಾಲೂಕು ಬಲಿಜ ಸಂಘದ ಅಧ್ಯಕ್ಷ ಎನ್. ತಿಮ್ಮಶೆಟ್ಟಿ ಹೇಳಿದರು.

ನಗರದ ಹೊರವಲಯದಲ್ಲಿರುವ ಬಲಿಜ ಶ್ರೇಯ ಭವನದಲ್ಲಿ ಸೋಮವಾರ ಶ್ರೀ ಯೋಗಿ ನಾರೇಯಣ ತಾಲ್ಲೂಕು ಬಲಿಜ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಲಿಜ ಜನಾಂಗದ ಏಳಿಗೆ ಹಾಗೂ ಶೈಕ್ಷಣಿಕ ಪ್ರಗತಿಗಾಗಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಬೇಕಿದೆ ಎಂದು ತಿಳಿಸಿದರು.

ಸೋಮವಾರದಿಂದ ಆರಂಭವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಆರಂಭವಾಗಿದ್ದು, ಜಾತಿ ಕಾಲಂ ಬಲಿಜ ಎಂದು ನಮೂದಿಸಬೇಕು. ಬಲಿಜ ಎಂದು ಬರೆಸುವ ಬಗ್ಗೆ ಸಂಘದ ಸರ್ವ ಸದಸ್ಯರು ತಿರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಇದೇ ವೇಳೆ ಎಸ್ಎಸ್ಎಲ್ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಎಂಬಿ. ನರೇಂದ್ರಬಾಬು, ಮೋಹಿನಿ ಶ್ರೀನಿವಾಸ್, ಮಂಜುಳಾ ಭೋಜರಾಜ್, ಉಮಾಪತಿ, ಪದ್ಮನಾಭ, ಅಶೋಕ್, ಅಣ್ಣೇಶ್, ಹೆಚ್.ಎ. ಸುರೇಶ್, ವೆಂಕಟಾಚಲ, ಬಿಬಿ. ರಾಜಣ್ಣ, ತಿಮ್ಮರಾಜು, ಲಕ್ಷ್ಮಿಕಾಂತರಾಜ, ಸಿದ್ದಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...