Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಖುರ್ಚಿ ಕದನ ಜೋರು : ದೆಹಲಿಯಲ್ಲಿಯೇ ವಾಸ್ತವ್ಯ ಹೂಡಿದ ಡಿಕೆ ಬ್ರದರ್ಸ್

---Advertisement---

 

ಬೆಂಗಳೂರು: ದಿನಗಳು ಉರುಳುತ್ತಿವೆ. ಡಿಕೆಶಿ ಸಿಎಂ ಕನಸಿಗೆ ಒಂದೊಂದೇ ದಿನಗಳು ಖಾಲಿ ಆಗ್ತಾ ಇದಾವೆ. ಎರಡೂವರೆ ವರ್ಷ ಆದ್ಮೇಲೆ ಸಿಎಂ ಸ್ಥಾನ ಬಿಟ್ಟುಕೊಡ್ತೀನಿ ಎಂಬ ಮಾತಾಗಿತ್ತು ಎಂಬ ವಿಚಾರ ಈಗಾಗಲೇ ಸಾಕಷ್ಟು ಸದ್ದು ಮಾಡಿದೆ. ಇದರ ನಡುವೆ ಹೈಕಮಾಂಡ್ ತೀರ್ಮಾನವೇ ಅಂತಿಮ ತೀರ್ಮಾನ ಎಂಬುದನ್ನ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇದರ ನಡುವೆ ಇಂದಿಗೂ ಸಿಎಂ ಸ್ಥಾನಕ್ಕಾಗಿ ಪ್ರಯತ್ನ ನಡೆಸುತ್ತಿರುವ ಡಿಕೆಶಿ, ಇಂದು ದೆಹಲಿಯಲ್ಲಿಯೇ ವಾಸ್ತವ್ಯ ಹೂಡಿದ್ದಾರೆ.

ಈಗಾಗಲೇ ಪಂಚರಾಜ್ಯ ಚುನಾವಣೆಗಳು ಮುಗಿಯುವ ಹಂತಕ್ಕೆ ತಲುಪಿದೆ. ಪಶ್ಚಿಮ ಬಂಗಾಳದಲ್ಲಿ ಇನ್ನೊಂದು ಹಂತದ ಚುನಾವಣೆ ಮಾತ್ರ ಬಾಕಿ ಇದೆ. ಇದರ ನಡುವೆ ಹೈಕಮಾಂಡ್ ಗೆ ಸಿಎಂ ಬದಲಾವಣೆ ವಿಚಾರವನ್ನು ಮನದಟ್ಟು ಮಾಡಲು ಡಿಕೆ ಬ್ರದರ್ಸ್ ಸಜ್ಜಾಗಿದ್ದಾರೆ. ನಿನ್ನೆ ರಾತ್ರಿಯೇ ಡಿಕೆ ಬ್ರದರ್ಸ್ ದೆಹಲಿಗೆ ತೆರಳಿದ್ದಾರೆ. ಇಂದು ಕೂಡ ಅಲ್ಲಿಯೇ ಉಳಿಯಲಿದ್ದು, ನನಗೂ ಒಂದು ಅವಕಾಶ ಕೊಡಿ ಎಂದು ಕೇಳುವ ಪ್ರಯತ್ನದಲ್ಲಿದ್ದಾರೆ.

ಉಳಿದ ಕಡಿಮೆ ಅವಧಿಯಲ್ಲಿ ನನಗೆ ಸಿಎಂ ಸ್ಥಾನ ಕೊಟ್ಟರು ಅದರಿಂದ ಆಗುವಂತ ಪ್ರಯೋಜನಗಳೇನು ಎಂಬ ವಿಚಾರವನ್ನು ಮನದಟ್ಟು ಮಾಡಲಿದ್ದಾರೆ. ನಿನ್ನೆ ರಾತ್ರಿ ಕೆ.ಸಿ. ವೇಣುಗೋಪಾಲ್ ಅವರನ್ನ ಭೇಟಿ ಮಾಡಿದ್ದಾರೆ ಎಂಬ ವಿಷಯ ಕೂಡ ಚರ್ಚೆಯಾಗ್ತಾ ಇದೆ. ಸಿಎಂ ಆಗಲೇಬೇಕೆಂಬ ಹಠ ಅವರಲ್ಲಿದೆ. ಅದಕ್ಕೆ ಬೇಕಾದ ಎಲ್ಲಾ ಪ್ರಯತ್ನಗಳು ಮಾಡುತ್ತಾ ಇದ್ದಾರೆ. ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ, ಮಾತನ್ನಾಡುವುದಕ್ಕೆ ತೀರ್ಮಾನ ಮಾಡಿದ್ದಾರೆ. ಪಂಚ ರಾಜ್ಯಗಳ ಚುನಾವಣೆ ಮುಗಿದ ಮೇಲೆ ನೋಡೋಣಾ ಎಂದಿದ್ದ ಹೈಕಮಾಂಡ್ ಗೆ ಇದೀಗ ಪಂಚರಾಜ್ಯಗಳ ಚುನಾವಣೆ ಮುಗಿಯುವ ಹಂತದಲ್ಲಿ ಅದನ್ನ ನೆನಪಿಸಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...