ನವದೆಹಲಿ; ಡಿಕೆ ಶಿವಕುಮಾರ್ ರಾಮನಗರದ ಜನತೆಗೆ ಭರವಸೆಯೊಂದನ್ನ ನೀಡಿದ್ದರು. ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸುತ್ತೇನೆ. ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುತ್ತೇನೆ ಎಂದಿದ್ದರು. ಆದರೆ ಈಗ ಆ ಕನಸಿಗೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದ್ದು, ಜಿಲ್ಲೆಯ ಹೆಸರು ಬದಲಾವಣೆಯ ಪ್ರಸ್ತಾವನೆಯನ್ನೇ ತಿರಸ್ಕಾರ ಮಾಡಿದೆ. ಈ ಹಿಂದೆ ಕೇಂದ್ರ ಸರ್ಕಾರ ಬಿಜಾಪುರ ಜಿಲ್ಲೆಯ ಹೆಸರನ್ನು ವಿಜಯಪುರ ಹಾಗೂ ಗುಲ್ಬರ್ಗಾ ಜಿಲ್ಲೆಯ ಹೆಸರನ್ನು ಕಲಬುರಗಿ ಎಂದು ಬದಲಾಯಿಸಲಾಗಿತ್ತು. ಇದಕ್ಕೆ ಕೇಂದ್ರ ಗೃಹ ಇಲಾಖೆಯಿಂದ ಒಪ್ಪಿಗೆಯೂ ಸಿಕ್ಕಿತ್ತು. ಆದರೆ ರಾಮನಗರಕ್ಕೆ ಸಿಕ್ಕಿಲ್ಲ.

ಕೆಲ ಕಾಲ ರಾಮನಗರ ಹೆಸರು ಬದಲಾವಣೆಯ ಪ್ರಸ್ತಾವವನ್ನು ಮುಂದುವರೆಸಬೇಡಿವೆಂದಿರುವ ಕೇಂದ್ರ ಸರ್ಕಾರ ತನ್ನ ಈ ನಿರ್ಧಾರಕ್ಕೆ ಯಾವುದೇ ನಿರ್ದಿಷ್ಟ ಕಾರಣವನ್ನು ಕೊಟ್ಟಿಲ್ಲ. ಡಿಕೆ. ಶಿವಕುಮಾರ್ ಹಾಗೂ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದೆ. ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮಾಡಿದರೆ ಜಮೀನು, ಆಸ್ತಿಗಳ ಬೆಲೆ ಹೆಚ್ಚಾಗಲಿದೆ. ತಮ್ಮ ಜಿಲ್ಲೆಗೂ ಬೆಂಗಳೂರಿನ ಬ್ರ್ಯಾಂಡ್ ವ್ಯಾಲ್ಯೂ ಸಿಗುತ್ತದೆ ಅನ್ನೋದು ಡಿಕೆ ಶಿವಕುಮಾರ್ ಅವರ ಲೆಕ್ಕಾಚಾರವಾಗಿತ್ತು. ಆದರೆ ಆ ಲೆಕ್ಕಾಚಾರವೆಲ್ಲ ತಲೆಕೆಳಗೆ ಆಗಿದೆ.

ಇತ್ತ ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರವೇನೋ ನೋ ಎಂದಿದೆ. ಆದರೆ ಈಗ ರಾಜ್ಯ ಸರ್ಕಾರವೇ ಮುಂದೆ ನಿಂತು ಆ ಹೆಸರನ್ನು ಬದಲಾಯಿಸುತ್ತದೆಯ..? ಎಂಬ ಪ್ರಶ್ನೆಯೂ ಹಲವರನ್ನ ಕಾಡಿದೆ. ಇದಕ್ಕೆ ಕಂದಾಯ ಸಚಿವ ಕೃಷ್ಣಭೈರೇಗೌಡ ಪ್ರತಿಕ್ರಿಯೆ ನೀಡಿದ್ದಿ, ಜಿಲ್ಲೆಯ ಹೆಸರು ಬದಲವಣೆಗೆ ಕೇಂದ್ರ ಸರ್ಕಾರದ ಒಪ್ಪಿಗೆ ಬೇಕಿಲ್ಲ. ರಾಮನಗರ ಜಿಲ್ಲೆಯ ಹೆಸರು ಬದಲಾಯಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ.

