Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆ ಶಿವಕುಮಾರ್ ಕನಸಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ..!

ಡಿಕೆ ಶಿವಕುಮಾರ್
---Advertisement---

ನವದೆಹಲಿ; ಡಿಕೆ ಶಿವಕುಮಾರ್ ರಾಮನಗರದ ಜನತೆಗೆ ಭರವಸೆಯೊಂದನ್ನ ನೀಡಿದ್ದರು. ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸುತ್ತೇನೆ. ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುತ್ತೇನೆ ಎಂದಿದ್ದರು. ಆದರೆ ಈಗ ಆ ಕನಸಿಗೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದ್ದು, ಜಿಲ್ಲೆಯ ಹೆಸರು ಬದಲಾವಣೆಯ ಪ್ರಸ್ತಾವನೆಯನ್ನೇ ತಿರಸ್ಕಾರ ಮಾಡಿದೆ. ಈ ಹಿಂದೆ ಕೇಂದ್ರ ಸರ್ಕಾರ ಬಿಜಾಪುರ ಜಿಲ್ಲೆಯ ಹೆಸರನ್ನು ವಿಜಯಪುರ ಹಾಗೂ ಗುಲ್ಬರ್ಗಾ ಜಿಲ್ಲೆಯ ಹೆಸರನ್ನು ಕಲಬುರಗಿ ಎಂದು ಬದಲಾಯಿಸಲಾಗಿತ್ತು. ಇದಕ್ಕೆ ಕೇಂದ್ರ ಗೃಹ ಇಲಾಖೆಯಿಂದ ಒಪ್ಪಿಗೆಯೂ ಸಿಕ್ಕಿತ್ತು. ಆದರೆ ರಾಮನಗರಕ್ಕೆ ಸಿಕ್ಕಿಲ್ಲ.

ಕೆಲ ಕಾಲ ರಾಮನಗರ ಹೆಸರು ಬದಲಾವಣೆಯ ಪ್ರಸ್ತಾವವನ್ನು ಮುಂದುವರೆಸಬೇಡಿವೆಂದಿರುವ ಕೇಂದ್ರ ಸರ್ಕಾರ ತನ್ನ ಈ ನಿರ್ಧಾರಕ್ಕೆ ಯಾವುದೇ ನಿರ್ದಿಷ್ಟ ಕಾರಣವನ್ನು ಕೊಟ್ಟಿಲ್ಲ. ಡಿಕೆ. ಶಿವಕುಮಾರ್ ಹಾಗೂ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದೆ. ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮಾಡಿದರೆ ಜಮೀನು, ಆಸ್ತಿಗಳ ಬೆಲೆ ಹೆಚ್ಚಾಗಲಿದೆ‌. ತಮ್ಮ ಜಿಲ್ಲೆಗೂ ಬೆಂಗಳೂರಿನ ಬ್ರ್ಯಾಂಡ್ ವ್ಯಾಲ್ಯೂ ಸಿಗುತ್ತದೆ ಅನ್ನೋದು ಡಿಕೆ ಶಿವಕುಮಾರ್ ಅವರ ಲೆಕ್ಕಾಚಾರವಾಗಿತ್ತು. ಆದರೆ ಆ ಲೆಕ್ಕಾಚಾರವೆಲ್ಲ ತಲೆಕೆಳಗೆ ಆಗಿದೆ‌.

ಇತ್ತ ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರವೇನೋ ನೋ ಎಂದಿದೆ. ಆದರೆ ಈಗ ರಾಜ್ಯ ಸರ್ಕಾರವೇ ಮುಂದೆ‌ ನಿಂತು ಆ ಹೆಸರನ್ನು ಬದಲಾಯಿಸುತ್ತದೆಯ..? ಎಂಬ ಪ್ರಶ್ನೆಯೂ ಹಲವರನ್ನ ಕಾಡಿದೆ. ಇದಕ್ಕೆ ಕಂದಾಯ ಸಚಿವ ಕೃಷ್ಣಭೈರೇಗೌಡ ಪ್ರತಿಕ್ರಿಯೆ ನೀಡಿದ್ದಿ, ಜಿಲ್ಲೆಯ ಹೆಸರು ಬದಲವಣೆಗೆ ಕೇಂದ್ರ ಸರ್ಕಾರದ ಒಪ್ಪಿಗೆ ಬೇಕಿಲ್ಲ. ರಾಮನಗರ ಜಿಲ್ಲೆಯ ಹೆಸರು ಬದಲಾಯಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment