Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ತನ್ನ ಮಗುವನ್ನೇ ಕೊಂದು, ಸೂಟ್ ಕೇಸಲ್ಲಿ ಹಾಕಿದ್ದ ಸಿಇಓ : ಚಿತ್ರದುರ್ಗ ಪೊಲೀಸರ ಕೈಗೆ ಸಿಕ್ಕಿದ್ದೇಗೆ..?

---Advertisement---

 

ಸುದ್ದಿಒನ್, ಚಿತ್ರದುರ್ಗ, ಜನವರಿ. 09  : ಸ್ಪಾಟ್ ಆಫ್ ಫೌಂಡರ್ ಸಂಸ್ಥೆಯ ಸಿಇಓ ಸೂಚನಾ ಸೇಠ್ ತನ್ನ ಮಗುವನ್ನೇ ಕೊಂದಿರುವ ಘಟನೆ ನಡೆದಿದೆ. ಹೊಟೇಲ್ ಒಂದರಲ್ಲಿ ಕೊಂದು ಆ ಮಗುವಿನ ದೇಹವನ್ನು ಸೂಟ್ ಕೇಸ್ ನಲ್ಲಿ ಹಾಕಿಕೊಂಡು, ಹೋಗುವಾಗ ಸಿಕ್ಕಿಬಿದ್ದಿದ್ದಾರೆ. ಆದರೆ ಆ ಮಗುವನ್ನು ಕೊಂದಿದ್ದು ಯಾಕೆ ಎಂಬ ಕಾರಣ, ವಿಚಾರಣೆಯ ಬಳಿಕ ತಿಳಿಯಲಿದೆ.

ಸುಚಾನಾ ಸೇಠ್ ಗೋವಾದ ಹೋಟೆಲ್ ನಲ್ಲಿ ನಾಲ್ಕು ವರ್ಷದ ಗಂಡು ಮಗುವನ್ನು ಹತ್ಯೆ ಮಾಡಿ, ಸೂಟ್ ಕೇಸ್ ನಲ್ಲಿ ಮಗುವಿನ ಶವದೊಂದಿಗೆ ಗೋವಾದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದಾಗ ಚಿತ್ರದುರ್ಗ ಜಿಲ್ಲೆಯ ಐಮಂಗಲ ಪೊಲೀಸರು ತಾಯಿಯನ್ನು ಬಂಧಿಸಿದ್ದಾರೆ. ಆರೋಪಿಯು ಗೋವಾದಿಂದ ಟ್ಯಾಕ್ಸಿ ಮಾಡಿಕೊಂಡು ತೆರಳುತ್ತಿದ್ದರು. ಗೋವಾದಲ್ಲಿ ತಂಗಿದ್ದ ಹೋಟೆಲ್ ನವರಿಗೆ ಅನುಮಾನ ಬಂದ ಹಿನ್ನಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೋಟೆಲ್ ರೂಮಿನಲ್ಲಿ ರಕ್ತದ ಕಲೆಗಳು ಪತ್ತೆ ಹಿನ್ನೆಲೆ ಅನುಮಾನ ಬಂದಿತ್ತು. ರೂಮಿಗೆ ಕರೆದೊಯ್ದಿದ್ದ ಮಗು ವಾಪಸ್ ಹೋಗುವಾಗ ಇರಲಿಲ್ಲ.

ಇದನ್ನು ಪ್ರಶ್ನಿಸಿದಾಗ ಸಂಬಂಧಿಕರ ಮನೆಗೆ ಕಳಸಿದ್ದೇನೆಂದು ಸುಳ್ಳು ಹೇಳಿದ್ದ ಸುಚನಾ ಸೇಠ್. ಬಳಿಕ ಗೋವಾ ಪೊಲೀಸ್ ಗೆ ಮಾಹಿತಿ ಬಳಿಕ ಟ್ಯಾಕ್ಸಿ ಡ್ರೈವರ್ ಸಂಪರ್ಕ ಮಾಡಿ ಹೈವೇ ಬಳಿ ಪೊಲೀಸ್ ಠಾಣೆ ಕಂಡಾಕ್ಷಣ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಟ್ಯಾಕ್ಸಿ ಡ್ರೈವರ್ ರಾಷ್ಟ್ರೀಯ ಹೆದ್ದಾರಿ 4ರ ಐಮಂಗಲ ಠಾಣೆ ಬಳಿ ಟ್ಯಾಕ್ಸಿ ನಿಲ್ಲಿಸಿದ್ದಾನೆ. ಇದಾದ ನಂತರ ಚಾಲಕ ಆರೋಪಿಯನ್ನು ಐಮಂಗಲ ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಾರ್ ನ ಡಿಕ್ಕಿಯಲ್ಲಿದ್ದ ಸೂಟ್ ಕೇಸ್ ನಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ಶವ ಮಾರ್ಚರಿಗೆ ಶಿಫ್ಟ್ ಮಾಡಿ ಆರೋಪಿ ಸುಚನಾ ವಶಕ್ಕೆ ಪಡೆದುಕೊಂಡಿದ್ದಾರೆ.

ಗೋವಾ ಪೊಲೀಸರಿಗೆ ಆರೋಪಿ ಒಪ್ಪಿಸಲು ಐಮಂಗಲ ಪೊಲೀಸರು ಕಾದಿದ್ದಾರೆ. ಗೋವಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರೆದಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment