ಸುದ್ದಿಒನ್, ಚಿತ್ರದುರ್ಗ, ಜನವರಿ. 09 : ಸ್ಪಾಟ್ ಆಫ್ ಫೌಂಡರ್ ಸಂಸ್ಥೆಯ ಸಿಇಓ ಸೂಚನಾ ಸೇಠ್ ತನ್ನ ಮಗುವನ್ನೇ ಕೊಂದಿರುವ ಘಟನೆ ನಡೆದಿದೆ. ಹೊಟೇಲ್ ಒಂದರಲ್ಲಿ ಕೊಂದು ಆ ಮಗುವಿನ ದೇಹವನ್ನು ಸೂಟ್ ಕೇಸ್ ನಲ್ಲಿ ಹಾಕಿಕೊಂಡು, ಹೋಗುವಾಗ ಸಿಕ್ಕಿಬಿದ್ದಿದ್ದಾರೆ. ಆದರೆ ಆ ಮಗುವನ್ನು ಕೊಂದಿದ್ದು ಯಾಕೆ ಎಂಬ ಕಾರಣ, ವಿಚಾರಣೆಯ ಬಳಿಕ ತಿಳಿಯಲಿದೆ.
ಸುಚಾನಾ ಸೇಠ್ ಗೋವಾದ ಹೋಟೆಲ್ ನಲ್ಲಿ ನಾಲ್ಕು ವರ್ಷದ ಗಂಡು ಮಗುವನ್ನು ಹತ್ಯೆ ಮಾಡಿ, ಸೂಟ್ ಕೇಸ್ ನಲ್ಲಿ ಮಗುವಿನ ಶವದೊಂದಿಗೆ ಗೋವಾದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದಾಗ ಚಿತ್ರದುರ್ಗ ಜಿಲ್ಲೆಯ ಐಮಂಗಲ ಪೊಲೀಸರು ತಾಯಿಯನ್ನು ಬಂಧಿಸಿದ್ದಾರೆ. ಆರೋಪಿಯು ಗೋವಾದಿಂದ ಟ್ಯಾಕ್ಸಿ ಮಾಡಿಕೊಂಡು ತೆರಳುತ್ತಿದ್ದರು. ಗೋವಾದಲ್ಲಿ ತಂಗಿದ್ದ ಹೋಟೆಲ್ ನವರಿಗೆ ಅನುಮಾನ ಬಂದ ಹಿನ್ನಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೋಟೆಲ್ ರೂಮಿನಲ್ಲಿ ರಕ್ತದ ಕಲೆಗಳು ಪತ್ತೆ ಹಿನ್ನೆಲೆ ಅನುಮಾನ ಬಂದಿತ್ತು. ರೂಮಿಗೆ ಕರೆದೊಯ್ದಿದ್ದ ಮಗು ವಾಪಸ್ ಹೋಗುವಾಗ ಇರಲಿಲ್ಲ.
ಇದನ್ನು ಪ್ರಶ್ನಿಸಿದಾಗ ಸಂಬಂಧಿಕರ ಮನೆಗೆ ಕಳಸಿದ್ದೇನೆಂದು ಸುಳ್ಳು ಹೇಳಿದ್ದ ಸುಚನಾ ಸೇಠ್. ಬಳಿಕ ಗೋವಾ ಪೊಲೀಸ್ ಗೆ ಮಾಹಿತಿ ಬಳಿಕ ಟ್ಯಾಕ್ಸಿ ಡ್ರೈವರ್ ಸಂಪರ್ಕ ಮಾಡಿ ಹೈವೇ ಬಳಿ ಪೊಲೀಸ್ ಠಾಣೆ ಕಂಡಾಕ್ಷಣ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಟ್ಯಾಕ್ಸಿ ಡ್ರೈವರ್ ರಾಷ್ಟ್ರೀಯ ಹೆದ್ದಾರಿ 4ರ ಐಮಂಗಲ ಠಾಣೆ ಬಳಿ ಟ್ಯಾಕ್ಸಿ ನಿಲ್ಲಿಸಿದ್ದಾನೆ. ಇದಾದ ನಂತರ ಚಾಲಕ ಆರೋಪಿಯನ್ನು ಐಮಂಗಲ ಪೊಲೀಸರಿಗೆ ಒಪ್ಪಿಸಿದ್ದಾರೆ.
ಕಾರ್ ನ ಡಿಕ್ಕಿಯಲ್ಲಿದ್ದ ಸೂಟ್ ಕೇಸ್ ನಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ಶವ ಮಾರ್ಚರಿಗೆ ಶಿಫ್ಟ್ ಮಾಡಿ ಆರೋಪಿ ಸುಚನಾ ವಶಕ್ಕೆ ಪಡೆದುಕೊಂಡಿದ್ದಾರೆ.
ಗೋವಾ ಪೊಲೀಸರಿಗೆ ಆರೋಪಿ ಒಪ್ಪಿಸಲು ಐಮಂಗಲ ಪೊಲೀಸರು ಕಾದಿದ್ದಾರೆ. ಗೋವಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರೆದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











