ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ. ಮಾ. 08 : ತಾಲ್ಲೂಕಿನ ಹಿರೇಗುಂಟನೂರು ಹೋಬಳಿಯ ಭೀಮಸಮುದ್ರ ಮಜುರೆ ಬಸವಾಪುರದ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ರಥೋತ್ಸವ ಕಾರ್ಯಕ್ರಮವೂ ನೆರೆದಿದ್ದ ಅಸಂಖ್ಯಾಂತ ಭಕ್ತಾಧಿಗಳ ಸಮ್ಮುಖದಲ್ಲಿ ನಡೆಯಿತು.
ಬೆಳಿಗ್ಗೆ ಸ್ವಾಮಿಗೆ ಎಂದಿನಂತೆ ರುದ್ರಾಭೀಷೇಕ, ಸಹಸ್ರ ಬಿಲ್ವಾರ್ಚನೆ ಕಾರ್ಯಕ್ರಮ ನಡೆದಿದ್ದು, ಸಂಜೆ 4 ಗಂಟೆಗೆ ಸ್ವಾಮಿಗೆ ಹೂವಿನ ಪಲ್ಲಕ್ಕಿ ಉತ್ಸವದ ನಂತರ ಶ್ರೀ ಸ್ವಾಮಿಯ ರಥೋತ್ಸವ ಕಾರ್ಯಕ್ರಮವನ್ನು ನಡೆಸಲಾಯಿತು.
ರಥೋತ್ಸವದ ಅಂಗವಾಗಿ ರಾಜ್ಯದ ವಿವಿಧೆಗಳಿಂದ ಆಗಮಿಸಿದ್ದ ಭಕ್ತ ಸಮೂಹ ಸಕ್ರಿಯ ಭಾಗವಹಿಸಿ ರಥವನ್ನು ಭಕ್ತಿಯಿಂದ ಎಳೆಯುವುದರ ಮೂಲಕ ಸ್ವಾಮಿಯ ಕೃಪೆಗೆ ಪಾತ್ರರಾದರು. ರಥೋತ್ಸವದ ಅಂಗವಾಗಿ ಸ್ವಾಮಿಗೆ ಕಂಕಣಧಾರಣೆ, ಆಶ್ವೋತ್ಸವ, ವೃಷಭೋತ್ಸವ ಕೆಂಡಾರ್ಚನೆಯಂತಹ ಕಾರ್ಯಕ್ರಮ ನಡೆಯಿತು.
ಜಾತ್ರೆಯ ಅಂಗವಾಗಿ ದೇವಾಲಯದ ಆವರಣದ ಸುತ್ತಾ-ಮುತ್ತಲ್ಲಿನ ಪ್ರದೇಶದಲ್ಲಿ ವಿವಿಧ ರೀತಿಯ ಆಟ ಸಾಮಾನು ಬೆಂಡು ಬೆತ್ತಾಸಿನ ಅಂಗಡಿಗಳನ್ನು ನಿರ್ಮಾಣ ಮಾಡಲಾಗಿತು.್ತ ಹೂಸದಾಗಿ ಮದುವೆಯಾದ ಜೋಡಿಗಳು ರಥದ ಕಲಶವನ್ನು ನೋಡಬೇಕು ಎನ್ನುವ ಪ್ರತೀತಿ ಇರುವುದರಿಂದ ಹಲವಾರು ಜೋಡಿಗಳೊಂದಿಗೆ ಮಕ್ಕಳು, ವಯೋವೃದ್ದರು, ಮಧ್ಯವಯಸ್ಕನವರು, ಹೆಂಗಸರು ರಥೋತ್ಸವದಲ್ಲಿ ಭಾಗವಹಿಸಿದ್ದರು.
ಸಂಜೆಯಾಗುತ್ತಿದ್ದಯೇ ಸ್ವಾಮಿಯನ್ನು ಹೂವಿನ ಪಲ್ಲಕ್ಕಿಯಲ್ಲಿ ಕುಳ್ಳರಿಸಿ ದೇವಾಲಯದ ಆವರಣದಲ್ಲಿ ಮೂರು ಸುತ್ತು ಹಾಕುವುದರ ಮೂಲಕ ನಂತರ ರಥದಲ್ಲಿ ಕುಳ್ಳರಿಸಿದಾಗ ಆಗಮಿಸಿದ್ದ ಭಕ್ತಾಧಿಗಳು ರಥವನ್ನು ಎಳೆಯುವುದರ ಮೂಲಕ ಸ್ವಾಮಿಯ ರಥೋತ್ಸವವನ್ನು ಶ್ರದ್ದಾ ಭಕ್ತಿಯಿಂದ ನೇರವೇರಿಸಿದರು. ಈ ಸಂದರ್ಭದಲ್ಲಿ ಭಕ್ತಾಧಿಗಳಿಂದ ಮಾವಿನಹಳ್ಳಿ ಬಸವೇಶ್ವರ ಮಹಾರಾಜ್ ಕೀ ಜೈ ಎಂಬ ಘೋಷಣೆಗಳು ಕೇಳಿ ಬಂದವು.
ಸ್ವಾಮಿಯ ರಥೋತ್ಸವದ ಅಂಗವಾಗಿ ಮಾ.09ರ ಸಂಜೆ 5ಕ್ಕೆ ಕಂಕಣ ವಿಸರ್ಜನೆ ಹಾಗೂ ಮಹಾ ಮಹಾಮಂಗಳಾರತಿಯೊಂದಿಗೆ ಸ್ವಾಮಿಯ ಸೇವಾ ಕಾರ್ಯಕ್ರಮ ಮುಕ್ತಾಯವಾಗಲಿದೆ. ಈ ಭಾರಿಯ ಭಾವುಟವೂ ಒಂದು ಲಕ್ಷದ ಇಪ್ಪತೊಂದು ಸಾವಿರಕ್ಕೆ (1.21,000) ರುದ್ರಾಕ್ಷಿ ಹಾರ 1.51.001 ಹರಾಜಾಯಿತು. ಇದೇ ಸಂದರ್ಭದಲ್ಲಿ ಸ್ವಾಮಿಯ ಹತ್ತು ಹಾರಗಳನ್ನು ಹರಾಜು ಮಾಡಲಾಯಿತು.
ಈ ಸಂದರ್ಭದಲ್ಲಿ ಸ್ವಾಮಿಯ ಟ್ರಸ್ಟ್‍ನವರು ಆಗಮಿಸಿದ್ದ ಭಕ್ತಾಧಿಗಳಿಗೆ ನೆರಳಿನ ವ್ಯವಸ್ಥೆಯನ್ನು ಮಾಡಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಪೋಲಿಸ್ ಬಿಗಿ ಭದ್ರತೆಯನ್ನು ಮಾಡಲಾಗಿತ್ತು. ಚಿತ್ರದುರ್ಗ ಜಿಲ್ಲೆ ಅಲ್ಲದೆ ರಾಜ್ಯದ ವಿವಿಧೆಡೆಗಳಿಂದ ಭಕ್ತಾಧಿಗಳು ಆಗಮಿಸುವುದರ ಮೂಲಕ ಸ್ವಾಮಿಯ ಕೃಪೆಗೆ ಪಾತ್ರರಾಗಿದ್ದಾರೆ.
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಪಾಕಿಸ್ತಾನಿ ಸೈನಿಕರ ಬೆಂಗಾವಲು ಪಡೆಯ ಮೇಲೆ…
ಸುದ್ದಿಒನ್ : ಸುನೀತಾ ವಿಲಿಯಮ್ಸ್ ಭೂಮಿಗೆ ಮರಳಲು ವೇದಿಕೆ ಸಜ್ಜಾಗಿದೆ. ಇಡೀ ವಿಶ್ವವೇ ಕಾಯುತ್ತಿದ್ದ ಸಮಯ ಕೊನೆಗೂ ಬಂದಿದೆ. ಸುನೀತಾ…
ಬೆಂಗಳೂರು, ಮಾರ್ಚ್. 16 : ಕರ್ನಾಟಕ ವಕ್ಫ್ ಬೋರ್ಡ್ ಗೆ ನೂತನವಾಗಿ ಅಧ್ಯಕ್ಷರ ನೇಮಕವಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಇಬ್ಬರ…
ಬೆಂಗಳೂರು; ಚಿನ್ನದ ಸ್ಮಗ್ಲಿಂಗ್ ವಿಚಾರದಲ್ಲಿ ಈಗ ಸಾಕಿದ ಮಗಳಿಂದಾನೇ ತಂದೆಗೂ ಸಂಕಟ ಎದುರಾಗಿದೆ. ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಡಿಜಿಪಿ ರಾಮಚಂದ್ರ…
ಸುದ್ದಿಒನ್, ಹೊಸದುರ್ಗ, ಮಾರ್ಚ್. 16 : ತಾಲ್ಲೂಕಿನ ಜನರ ಹಾಗೂ ಪೊಲೀಸರ ನಿದ್ದೆಗೆಡಿಸಿದ್ದ ಸರಗಳ್ಳರು ಕೊನೆಗೂ ಪೊಲೀಸರ ಖೆಡ್ಡಾಗೆ ಬಿದ್ದಿದ್ದಾರೆ.…
ಸುದ್ದಿಒನ್ : ಬಹಳಷ್ಟು ಜನರು ತುಪ್ಪವನ್ನು ಚಪಾತಿ ಮತ್ತು ಬೇಳೆ ಸಾರಿನೊಂದಿಗೆ ಬೆರೆಸಿಕೊಂಡು ತಿನ್ನುತ್ತಾರೆ. ಇದು ಭಕ್ಷ್ಯಗಳ ಪೌಷ್ಟಿಕಾಂಶದ ಮೌಲ್ಯವನ್ನು…