Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಸಚಿವ ಜಮೀರ್ ಅಹಮದ್‍ಖಾನ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಆ. 31 : ನವೆಂಬರ್ ಕ್ರಾಂತಿ ಏನೇನೂ ಇಲ್ಲ. ಎಲ್ಲವೂ ಬಿಜೆಪಿ ಊಹೆ. ಬಿಜೆಪಿಯಲ್ಲಿ ಐದು ಗುಂಪುಗಳಾಗಿವೆ ಅದನ್ನು ನೋಡಿಕೊಳ್ಳಲಿ. 2028 ರವರೆಗೆ ಸಿದ್ಧರಾಮಯ್ಯ ಮುಖ್ಯಮಂತ್ರಿ ಆಗಿರುತ್ತಾರೆ. ರಾಜ್ಯದಲ್ಲಿ ಈಗ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಸಂಪುಟ ಪುನರಚನೆ ಚಿಂತನೆ ಇದೆ.ಇದರ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಸತಿ ಸಚಿವ ಬಿ.ಝಡ್. ಜಮೀರ್ ಅಹಮದ್‍ಖಾನ್ ತಿಳಿಸಿದರು.

ಚಿತ್ರದುರ್ಗ ನಗರಕ್ಕೆ ಭೇಟಿ ನೀಡಿದ್ದ ಅವರು ಭೇಟಿಯಾದ ಮಾಧ್ಯಮದವರೊಂದಿಗೆ ಮಾತನಾಡಿದ ಅವರುಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಮಧ್ಯೆ ಸಿಎಂ ವಾರ್ ಕುರಿತು ಪ್ರತಿಕ್ರಿಯಿಸಿ ಸಿಎಂ ಆಗಬೇಕು ಅಂತಾ ಎಲ್ಲರಿಗೂ ಆಸೆ ಇದೆ… ಸಿದ್ಧರಾಮಯ್ಯ ಸಿಎಂ ಕುರ್ಚಿಯಲ್ಲಿದ್ದಾರೆ. 2028ರ ವರೆಗೆ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ.‌ ಡಿ.ಕೆ ಶಿವಕುಮಾರ್ ಸಿಎಂ ಆಗಬೇಕು ಅಂತಾ ನಮಗೂ ಆಸೆ ಇದೆ. 2028ರ ನಂತರ ಡಿ.ಕೆ ಶಿವಕುಮಾರ್ ಸಿಎಂ ಆಗಬೇಕು ಅಂತಾ ನಾವೂ ಬಯಸುತ್ತೇವೆ ಎಂದರು.

ನವೆಂಬರ್‍ನಲ್ಲಿ ಕ್ರಾಂತಿ ಇಲ್ಲ.ಏನೂ ಇಲ್ಲ.ಸಿದ್ದರಾಮಯ್ಯ ಡಿ.ಕೆ ಶಿವಕುಮಾರ್ ಅಣ್ಣ ತಮ್ಮಂದಿರಂತೆ ಜೊತೆಗೇ ಹೋಗುತ್ತಾರೆ.ಡಿ.ಕೆ ಶಿವಕುಮಾರ್ ಸಿಎಂ ಆಗದಿದ್ದರೆ ಬಿಜೆಪಿಗೆ ಹೋಗುತ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ ನಾನೂ ಬೇರೆ ಪಕ್ಷದಿಂದ ಬಂದಿರಬಹುದು. ನಾನು ಜನತಾದಳದಿಂದ ಕಾಂಗ್ರೆಸ್ ಪಕ್ಷಕ್ಕೆ ಬಂದಿರೋದು ಆದರೆ ಡಿ.ಕೆ ಶಿವಕುಮಾರ್ ಬ್ಲಡ್ಡೇ ಕಾಂಗ್ರೆಸ್.ಅದನ್ನು ಚೇಂಚ್ ಮಾಡಕ್ಕೆ ಆಗಲ್ಲ ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...