Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸ್ವಚ್ಛತಾ ಆಂದೋಲನ ಒಂದು ದಿನಕ್ಕೆ ಸೀಮಿತವಾಗಬಾರದು : ಸಂಸದ ಗೋವಿಂದ ಕಾರಜೋಳ

---Advertisement---

ಸುದ್ದಿಒನ್,ಹಿರಿಯೂರು, ಸೆಪ್ಟೆಂಬರ್. 20 : ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆಯ ಸೇವಾ ಪಾಕ್ಷಿಕ ಅಂಗವಾಗಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ವಿಶೇಷ ಸ್ವಚ್ಚತಾ ಅಭಿಯಾನ ಕಾರ್ಯಕ್ರಮಕ್ಕೆ ಸಂಸದ ಗೋವಿಂದ ಕಾರಜೋಳ ಅವರು ಕಸ ಗುಡಿಸುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ಸ್ವಚ್ಛತಾ ಕಾರ್ಯಕ್ರಮ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಇದು ಪೌರಕಾರ್ಮಿಕರಂತೆ ನಿರಂತರವಾಗಿರಬೇಕು. ಜೊತೆಗೆ ಪ್ರತಿಯೊಬ್ಬರ ಜೀವನದಲ್ಲೂ ಪ್ರತಿನಿತ್ಯ ಪಾಲಿಸುವ ಸಂಸ್ಕಾರ ವಾಗಬೇಕು ಎಂದರು.

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದ ಅಭಿವೃದ್ಧಿಯತ್ತ ಸಾಗುತ್ತಿದೆ. ಅದರಂತೆ ಪ್ರತಿಯೊಬ್ಬ ಕಾರ್ಯಕರ್ತರು ಸಮಾಜದ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಂಸದರು ಕರೆ ನೀಡಿದರು.

ಬಿಜೆಪಿ ತಾಲೂಕು ಅಧ್ಯಕ್ಷ ಕೆ ಅಭಿನಂದನ್ ಮಾತನಾಡಿ ಪ್ರಧಾನಿ ಮೋದಿಯವರ ಸ್ವಚ್ಛ ಭಾರತ್ ಅಭಿಯಾನವನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬ ಕಾರ್ಯಕರ್ತನ ಹೊಣೆಗಾರಿಕೆಯಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಎ. ಮುರುಳಿ, ಮಾಜಿ ಮಂಡಲ ಅಧ್ಯಕ್ಷ ವಿಶ್ವನಾಥ್, ಹಿರಿಯ ಮುಖಂಡ ಎಂ ಎಸ್ ರಾಘವೇಂದ್ರ, ಎ. ರಾಘವೇಂದ್ರ, ಜೆಬಿ. ರಾಜು, ಬಸವರಾಜ್ ನಾಯಕ, ಸೋಮಣ್ಣ, ಯೋಗೇಶ್, ನಿತಿನ್ ಗೌಡ, ಕೆಟಿ. ಹನುಮಂತ್, ಮಂಜುನಾಥ್, ಪ್ರಜ್ವಲ್, ದ್ಯಾಮಣ್ಣ, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now