ಚಿತ್ರದುರ್ಗ, (ಮೇ.11) : ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ವತಿಯಿಂದ 5 ರಿಂದ 16 ವರ್ಷದ ಮಕ್ಕಳಿಗಾಗಿ ಮೇ 4ರಿಂದ 13ರವರೆಗೆ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮದ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ನಗರದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಮೇ 13ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸಮಾರೋಪ ಸಮಾರಂಭದ ಉದ್ಘಾಟನೆ ನೆರವೇರಿಸಲಿದ್ದಾರೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ನಂದಿನಿ ದೇವಿ ಅಧ್ಯಕ್ಷತೆ ವಹಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಹಾಗೂ ಜಿಲ್ಲಾ ಬಾಲಭವನ ಸಮಿತಿ ಕಾರ್ಯದರ್ಶಿ ಭಾರತಿ ಆರ್.ಬಣಕಾರ್ ಪ್ರಾಸ್ತವಿಕ ನುಡಿಗಳನ್ನಾಡುವರು.
ಮುಖ್ಯ ಅತಿಥಿಗಳಾಗಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ. ಪ್ರಭಾಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಾಣಾಧಿಕಾರಿ (ಪ್ರಭಾರ) ನರಸಿಂಹರಾಜು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪಿ.ಲೋಕೇಶ್ವರಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಧಾ.ಎನ್ ಭಾಗವಹಿಸಲಿದ್ದಾರೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…