ಚಿತ್ರದುರ್ಗ. ಮೇ.07: ಡಿಬಿಟಿ ಮುಖಾಂತರ ರೈತರ ಖಾತೆಗೆ ಜಮೆಯಾಗುವ ಪರಿಹಾರ ಮೊತ್ತವನ್ನು ಬ್ಯಾಂಕ್‍ನವರು ಸಾಲಕ್ಕೆ ಜಮೆ ಮಾಡಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ರೈತರ ಸಭೆಯಲ್ಲಿ, ರೈತರು ಬೆಳೆವಿಮೆ ಪರಿಹಾರ, ಬರ ಪರಿಹಾರ, ಪಿಎಂ ಕಿಸಾನ್, ಹಾಲಿನ ಸಹಾಯಧನದ ಮೊತ್ತ, ಉದ್ಯೋಗ ಖಾತ್ರಿಯ ಕೂಲಿ ಮೊತ್ತವನ್ನು ಬ್ಯಾಂಕ್‍ನವರು ರೈತರ ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬಗ್ಗೆ ರೈತರು, ರೈತ ಮುಖಂಡರು ದೂರಿದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ರೈತರ ಖಾತೆಗೆ ಜಮೆಯಾಗುವ ಪರಿಹಾರ, ಸಹಾಯಧನ ಮೊತ್ತವನ್ನು ಸರ್ಕಾರವು ನಿರ್ದಿಷ್ಟ ಉದ್ದೇಶಗಳಿಗಾಗಿ ನೀಡುತ್ತಿದ್ದು, ಈ ಮೊತ್ತವನ್ನು ಯಾವುದೇ ಬ್ಯಾಂಕುಗಳು ಸಾಲಗಳಿಗೆ ಜಮೆ ಮಾಡಿಕೊಳ್ಳದೇ ಇರಲು ಕಟ್ಟುನಿಟ್ಟಿನ ನಿರ್ದೇಶನ ನೀಡಿ ಆದೇಶಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















