Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೆಹರು ಕಾಲದಿಂದಲೂ ಕಾಂಗ್ರೆಸ್‍ನಲ್ಲಿ ಸಾಮಾಜಿಕ ನ್ಯಾಯದ ಪರಿಕಲ್ಪನೆಯಿದೆ : ಸಿ.ಎಸ್.ದ್ವಾರಕನಾಥ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆ.12  : ಕಾಂಗ್ರೆಸ್‍ನಲ್ಲಿ ಹೊಸದಾಗಿ ಆರಂಭಗೊಂಡಿರುವ ಸಾಮಾಜಿನ ನ್ಯಾಯ ಘಟಕಕ್ಕೆ ಸಣ್ಣ ಸಣ್ಣ ಸಮುದಾಯಗಳನ್ನು ಸೇರಿಸಿಕೊಂಡು ಜಿಲ್ಲಾ ಮತ್ತು ಬ್ಲಾಕ್ ಕಮಿಟಿಗಳನ್ನು ರಚಿಸುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಾಮಾಜಿಕ ನ್ಯಾಯ ಘಟಕದ ರಾಜ್ಯಾಧ್ಯಕ್ಷ ಸಿ.ಎಸ್.ಧ್ವಾರಕನಾಥ್ ಸೂಚಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಶನಿವಾರ ಭೇಟಿ ನೀಡಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು ನೆಹರು ಕಾಲದಿಂದಲೂ ಕಾಂಗ್ರೆಸ್‍ನಲ್ಲಿ ಸಾಮಾಜಿಕ ನ್ಯಾಯದ ಪರಿಕಲ್ಪನೆಯಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಆದಿವಾಸಿಗಳು, ದಲಿತರು, ಮಹಿಳೆಯರ ಮೇಲೆ ನಡೆಯುತ್ತಿರುವ ಅನ್ಯಾಯ ದಬ್ಬಾಳಿಕೆಯನ್ನು ನೋಡಿದಾಗ ಸಾಮಾಜಿಕ ನ್ಯಾಯ ಘಟಕ ಬೇಕು ಅನಿಸಿತು.

ನಾಗಪುರದಲ್ಲಿರುವ ಆರ್.ಎಸ್.ಎಸ್.ಕಚೇರಿ ಪ್ರಧಾನಿ ಮೋದಿಯನ್ನು ಆಟ ಆಡಿಸುತ್ತಿರುವುದನ್ನು ಕಂಡಾಗ ಅವರಿಗೆ ಸ್ವಂತ ಬುದ್ದಿ ಇಲ್ಲ ಎನ್ನುವುದು ಗೊತ್ತಾಗುತ್ತದೆ. ಸಂವಿಧಾನದ ಮೇಲೆ ದಾಳಿ ನಡೆಯುತ್ತಿದೆ. ತಳಸಮುದಾಯದ ಬಗ್ಗೆ ಗೌರವವಿಲ್ಲ. ಸ್ತ್ರೀ ಸಮಾನತೆ ಅವರಿಗೆ ಇಷ್ಟವಿಲ್ಲ. ಅದಕ್ಕಾಗಿ ಸಾಮಾಜಿಕ ನ್ಯಾಯ ಘಟಕ ಎಲ್ಲಾ ಜನಾಂಗದವರಿಗೆ ಸಾಮಾಜಿಕ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇನ್ನು 45 ದಿನಗಳೊಳಗೆ ಸಾಮಾಜಿಕ ನ್ಯಾಯ ಘಟಕ ಆರಂಭವಾಗಬೇಕೆಂಬ ಆದೇಶ ನೀಡಿರುವುದರಿಂದ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದೇವೆ. ಯಾವುದೇ ಜಾತಿ ಬೇಧವಿಲ್ಲದ ಎಲ್ಲರೂ ಈ ಘಟಕಕ್ಕೆ ಬರಬಹುದು. ಪಕ್ಷದಿಂದ ಹೊರಗಿರುವವರನ್ನು ಘಟಕಕ್ಕೆ ಸೆಳೆದುಕೊಂಡು
ಶೇ.50 ರಷ್ಟು ಮಹಿಳೆಯರನ್ನು ಕಡ್ಡಾಯವಾಗಿ ಘಟಕಕ್ಕೆ ಸೇರಿಸಿಕೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ತಿಳಿಸಿದರು.

ಸಾಮಾಜಿಕ ನ್ಯಾಯ ಸಮಿತಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಮನ್ ಫರ್ಜಾನ ಮಾತನಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಹೊಸದಾಗಿ ಸಾಮಾಜಿಕ ನ್ಯಾಯ ಘಟಕ ಆರಂಭಗೊಂಡಿದೆ. ಯೂರೋಪ್‍ನಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಕ್ರಾಂತಿಯಾಯಿತು. ಬಡವ-ಶ್ರೀಮಂತ, ಮೇಲು-ಕೀಳು, ಲಿಂಗ ತಾರತಮ್ಯ ನಿವಾರಣೆಗಾಗಿ ಘರ್ಷಣೆ ಆರಂಭಗೊಂಡಾಗ ಸಾಮಾಜಿಕ ನ್ಯಾಯ ಒದಗಿಸುವುದು ಬಹಳ ಮುಖ್ಯ. ರಾಜಸ್ಥಾನದ ಉದಯಪುರ್‍ನಲ್ಲಿ ನಡೆದ ದೊಡ್ಡ ಚಿಂತನಾ ಶಿಬಿರದಲ್ಲಿ ರಾಹುಲ್‍ಗಾಂಧಿ ದೇಶಾದ್ಯಂತ ರಚನೆಯಾಗಬೇಕೆಂದು ಸೂಚಿಸಿದರು.
ಹಾಗಾಗಿ ಈ ಘಟಕಕ್ಕೆ ಒತ್ತು ಕೊಡಬೇಕಿದೆ ಎಂದು ನುಡಿದರು.

ಕಾಂಗ್ರೆಸ್‍ಗೆ ಸಾಮಾಜಿಕ ನ್ಯಾಯದಲ್ಲಿ ಬದ್ದತೆಯಿದೆ. ಸಿ.ಎಸ್.ಧ್ವಾರಕನಾಥ್‍ರವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದಾಗ ಕೆಳವರ್ಗದ ಜನರ ಸ್ಥಿತಿಗತಿಯನ್ನು ಅಧ್ಯಯನ ನಡೆಸಿದ್ದಾರೆ. ಅಸಮಾನತೆ ದೇಶದಲ್ಲಿ ತಾಂಡವವಾಡುತ್ತಿದೆ. ಜಿಲ್ಲಾ ಸಮಿತಿ ರಚಿಸುವುದು ಸಾಮಾಜಿಕ ನ್ಯಾಯದ ಉದ್ದೇಶ. ಬ್ಲಾಕ್ ಹಂತದಲ್ಲಿಯೂ ಕೆಲಸ ಮಾಡಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಬೇಕು ಎಂದು ಕರೆ ನೀಡಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಾಮಾಜಿಕ ನ್ಯಾಯ ಘಟಕದ ಪ್ರಧಾನ ಕಾರ್ಯದರ್ಶಿ ನಾಗರಾಜ್, ರಾಜ್ಯ ಉಪಾಧ್ಯಕ್ಷೆ ಪದ್ಮ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷ ರವಿಕುಮಾರ್, ಕಾನೂನು ವಿಭಾಗದ ಅಧ್ಯಕ್ಷ ಸುದರ್ಶನ್, ಪದವೀಧರ ವಿಭಾಗದ ಅಧ್ಯಕ್ಷ ಮುದಸಿರ್‍ನವಾಜ್, ಕೆ.ಪಿ.ಸಿ.ಸಿ. ವಕ್ತಾರ ಬಾಲಕೃಷ್ಣಸ್ವಾಮಿ, ಇಂಟೆಕ್ ವಿಭಾಗದ ಅಧ್ಯಕ್ಷ ಅಶೋಕ್ ನಾಯ್ಡು, ಕುಶಲ ಕರ್ಮಿ ವಿಭಾಗದ ಪ್ರಸನ್ನಕುಮಾರ್ ವೇದಿಕೆಯಲ್ಲಿದ್ದರು.
ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಅಬ್ದುಲ್ಲಾ, ಸೈಯದ್ ಅಲ್ಲಾಭಕ್ಷಿ, ಚಾಂದ್‍ಪೀರ್, ಸೇವಾದಳದ ಇಂದಿರಾ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಉದ್ಯೋಗ ವಾರ್ತೆ | ಅತಿಥಿ ಶಿಕ್ಷಕರ, ಉಪನ್ಯಾಸಕರ ನೇಮಕಕ್ಕೆ ಅರ್ಜಿ

  ಚಿತ್ರದುರ್ಗ. ಮೇ.24:  ಚಿತ್ರದುರ್ಗ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಾಲೇಜು, ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಅತಿಥಿ ಶಿಕ್ಷಕರು, ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಐಪಿಎಲ್ ನಿಂದ ಹೊರಬಿದ್ದ ಮೇಲೆ ಅಭಿಮಾನಿಗಳಿಗಾಗಿ ಪೋಸ್ಟ್ ಹಾಕಿದ ವಿರಾಟ್ ಕೊಹ್ಲಿ

  ಈ ಬಾರಿಯ ಐಪಿಎಲ್ ನಲ್ಲಿ ಆರ್ಸಿಬಿ ಟೀಂ ಆಡಿದ್ದು ನೋಡಿದ್ರೆ ಖಂಡಿತ ಕಪ್ ಗೆದ್ದು ತಂದೇ ತರುತ್ತಾರೆ ಎಂಬ ವಿಶ್ವಾಸ ಎಲ್ಲರಿಗೂ ಮೂಡಿತ್ತು. ಆದರೆ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಎದುರು ಸೋತು,

ಚಿತ್ರದುರ್ಗ | ವಿದ್ಯುತ್ ಬಿಲ್ ಪಾವತಿಸುವ ಕಚೇರಿ ಸ್ಥಳಾಂತರ

ಚಿತ್ರದುರ್ಗ. ಮೇ.24: ನಗರದ ಐಶ್ವರ್ಯ ಪೋರ್ಟ್ ಮುಂದಿನ ಹಳೇ ಬೆವಿಕಂ ಕಾಲೋನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಚೇರಿಯನ್ನು, ನಗರದ ಜಿಲ್ಲಾಧಿಕಾರಿಗಳ ಕಚೇರಿ ಪಕ್ಕದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಆದ್ದರಿಂದ

error: Content is protected !!