ಬೆಂಗಳೂರು: ಇಂದು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಭರ್ಜರಿ ಗೆಲುವಿನ ಬಳಿಕ ಹರತಷೋದ್ಘಾರ ವ್ಯಕ್ತಪಡಿಸಿದ್ದಾರೆ. ಗೆಲುವು ಸಾಧಿಅಇದ ಅಭ್ಯರ್ಥಿಗಳ ಪರ ಆಯಾ ಬೆಂಬಲಿಗರು ಸೆಲೆಬ್ರೇಷನ್ ಮಾಡಿದ್ದಾರೆ. ಈ ವೇಳೆ ನಾಸೀರ್ ಹುಸೇನ್ ಬೆಂಬಲಿಗರು ಸಂಭ್ರಮಾಚರಣೆ ಮಾಡುವಾಗ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ. ಈ ಘೋಷವಾಕ್ಯದ ವಿರುದ್ಧ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸಿಡಿದೆದ್ದಿದ್ದಾರೆ. ಟ್ವಿಟ್ಟರ್ ಆಕ್ರೋಶ ಹೊರ ಹಾಕಿದ್ದಾರೆ.
‘ಪಾಕಿಸ್ತಾನ್ ಜಿಂದಾಬಾದ್ ಎಂಬ ರಾಷ್ಟ್ರ ವಿದ್ರೋಹದ ಉಗ್ರ ಘೋಷಣೆ ಭಾರತದ ಪ್ರಜಾಪ್ರಭುತ್ವದ ದೇಗುಲ ವಿಧಾನ ಸೌಧದಲ್ಲೇ ಮೊಳಗಿದೆ ಎಂದರೆ ಕಾಂಗ್ರೆಸ್ ಇನ್ನೆಷ್ಟು ದೇಶ ಸುಡುವ ವಿಷಜಂತುಗಳನ್ನು ತನ್ನ ಮಡಿಲಲ್ಲಿ ಕಟ್ಟಿ ಕೊಂಡಿರಬಹುದು ಎಂದು ಅಂದಾಜಿಸಲು ಇಂದಿನ ಘಟನೆ ಸಾಕ್ಷಿ ಒದಗಿಸಿದೆ.
ರಾಜ್ಯ ಸಭೆಗೆ ಆಯ್ಕೆಮಾಡಿ ಕಳುಹಿಸಿರುವ ಸೈಯದ್ ನಾಸೀರ್ ಹುಸೇನ್ ಹಿಂದೆ ಇರುವ ಬೆಂಬಲಿಗರು ಪಾಕಿಸ್ತಾನಿ ಬೆಂಬಲಿತ ಉಗ್ರರೇ ಇರಬೇಕು, ‘ತನ್ನನು ರಕ್ಷಿಸಲು ತಮ್ಮ ಮನಃಸ್ಥಿತಿಯ ಕಾಂಗ್ರೆಸ್ ಸರ್ಕಾರ ಇರುವಾಗ ನಾವ್ಯಾರಿಗೆ ಹೆದರಬೇಕು’ ಎಂಬ ದುಷ್ಟ ಮನಸ್ಸಿನಿಂದ ಘೋಷಣೆ ಕೂಗಿರುವ ದೇಶ ವಿರೋಧಿ ನೀಚರನ್ನು ಈ ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು.
ಸಾಕ್ಷಿಗಳೆಲ್ಲವೂ ಕಣ್ಣೆದುರಿಗೇ ಇರುವಾಗ ದೇಶ ವಿರೋಧಿಗಳನ್ನು ರಕ್ಷಿಸಲು ಯತ್ನಿಸುವ ಪ್ರಯತ್ನ ನಡೆದರೆ ಮುಂದಾಗುವ ಪರಿಣಾಮಕ್ಕೆ ಕಾಂಗ್ರೆಸ್ ಸರ್ಕಾರವೇ ಹೊಣೆಯಾಗಲಿದೆ. ನಮ್ಮ ಮುಂದಿನ ಹೋರಾಟ “ರಾಜ್ಯದ ರಕ್ಷಣೆಗಾಗಿ ಕಾಂಗ್ರೆಸ್ಸಿಗರೇ ವಿಧಾನ ಸೌಧ ಬಿಟ್ಟು ತೊಲಗಿ” ಎಂದು ಟ್ವೀಟ್ ಮಾಡಿದ್ದಾರೆ.