Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗದ ಕೋಟೆ ನಿರ್ಮಾಣದಲ್ಲಿ ಕಾರ್ಮಿಕರ ಶ್ರಮವಿದೆ : ಡಾ.ಬಿ.ರಾಜಶೇಖರಪ್ಪ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 27 : ಕಾರ್ಮಿಕರಲ್ಲಿ ಅಸಾಧಾರಣವಾದ ಶಕ್ತಿಯಿದೆ. ಚಿತ್ರದುರ್ಗದ ಐತಿಹಾಸಿಕ ಕೋಟೆ ನಿರ್ಮಾಣದಲ್ಲಿ ಕಾರ್ಮಿಕರ ಶ್ರಮ ಅಡಗಿದೆ ಎಂದು ಇತಿಹಾಸ ಸಂಶೋಧಕರಾದ ಡಾ.ಬಿ.ರಾಜಶೇಖರಪ್ಪ ತಿಳಿಸಿದರು.

ನ್ಯಾಷನಲ್ ಸೆಂಟರ್ ಫಾರ್ ಲೇಬರ್(ಎನ್.ಸಿ.ಎಲ್.) ಸೇರ್ಪಡೆ, ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಕೇಂದ್ರ ಸಂಘ ಜಿಲ್ಲಾ ಶಾಖೆ ಇವುಗಳ ಸಹಯೋಗದೊಂದಿಗೆ
ರೋಟರಿ ಬಾಲಭವನದಲ್ಲಿ ಮಂಗಳವಾರ ನಡೆದ ಕಾರ್ಮಿಕರ ದಿನಾಚರಣೆ ಉದ್ಗಾಟಿಸಿ ಮಾತನಾಡಿದರು.

ಚಿತ್ರದುರ್ಗದ ಕೋಟೆ ಕಟ್ಟುವಾಗ ಬೃಹತ್ ಗಾತ್ರದ ಕಲ್ಲುಗಳನ್ನು ಕ್ರಮಬದ್ದವಾಗಿ ಜೋಡಿಸಿ ಗೋಡೆ ನಿರ್ಮಾಣ ಮಾಡಿರುವುದರ ಹಿಂದೆ ಕಾರ್ಮಿಕರ ಪರಿಶ್ರಮವಿದೆ. ಭಾರತದಲ್ಲಿರುವ ಪ್ರಮುಖ ಕೋಟೆಗಳಲ್ಲಿ ಚಿತ್ರದುರ್ಗದ ಕೋಟೆಯೂ ಒಂದು. ಹೈದರಾಲಿ ಚಿತ್ರದುರ್ಗದ ಕೋಟೆಯನ್ನು ಮೆಚ್ಚಿಕೊಂಡಿದ್ದ. ಭರಮಣ್ಣನಾಯಕ 20 ಕೆರೆಗಳನ್ನು ನಿರ್ಮಾಣ ಮಾಡಿರುವುದರ ಹಿಂದೆ ಕಾರ್ಮಿಕರ ಶ್ರಮವಿದೆ. ಯಾವ ಚಕ್ರವರ್ತಿಯಿಂದಲೂ ಇಂತಹ ಕೆಲಸ ಆಗಿಲ್ಲ. ಬಾವಿ, ಸುರಂಗ ಮಾರ್ಗಗಳನ್ನು ನಿರ್ಮಿಸುವವರು ಕಟ್ಟಡ ಕಾರ್ಮಿಕರು. ಬಸ್, ರೈಲು ಓಡಾಡುವ ಸುರಂಗ ಮಾರ್ಗ, ಸುಯೇಜ್ ಹಾಗೂ ಪನಾಮ ಕಾಲುವೆ ನಿರ್ಮಾಣದಲ್ಲಿಯೂ ಕಾರ್ಮಿಕರ ಶ್ರಮ ಅಡಗಿದೆ. ಹಾಗಾಗಿ ಕಾರ್ಮಿಕರ ಜೀವನ ಸುರಕ್ಷತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕೆಂದು ಮನವಿ ಮಾಡಿದರು.

ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುವಲ್ಲಿ ಸೈನಿಕರು, ರೈತರು, ಕಾರ್ಮಿಕರ ಶ್ರಮ ಬಹಳ ಮುಖ್ಯ. ರಾಷ್ಟ್ರವನ್ನು ಶಕ್ತಿಶಾಲಿಯನ್ನಾಗಿ ಮಾಡುವಷ್ಟು ಸಾಮಥ್ರ್ಯ ಕಾರ್ಮಿಕರಲ್ಲಿ ಅಡಗಿದೆ. ಕಾರ್ಮಿಕರ ಕಲ್ಯಾಣಕ್ಕೆ ಸರ್ಕಾರಗಳು ಯೋಚಿಸುತ್ತಿವೆ ಎಂದು ಹೇಳಿದರು.

ಕೆ.ಎಸ್.ಸಿ.ಡಬ್ಲ್ಯು.ಸಿ.ಯು. ರಾಜ್ಯ ಪ್ರಧಾನ ಕಾರ್ಯದರ್ಶಿ ಲೀಲಾವತಿ ಮಾತನಾಡಿ ಸಮಾಜ ಕಟ್ಟುವ ಕೆಲಸ ಮಾಡುತ್ತಿರುವವರು ಕಾರ್ಮಿಕರು. ದೇಶ ಕಟ್ಟಿದ ಕಾರ್ಮಿಕರ ಪರಿಸ್ಥಿತಿ ಕಷ್ಟದಲ್ಲಿದೆ. ಮೂಲಭೂತ ಸೌಲಭ್ಯಗಳಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಹೋರಾಟ ಮಾಡಬೇಕಿದೆ. ನಲವತ್ತು ವರ್ಷಗಳಿಂದಲೂ ಎನ್.ಸಿ.ಎಲ್.ಕೆಲಸ ಮಾಡುತ್ತಿದೆ. ಕೇಂದ್ರ ಸರ್ಕಾರ 1196 ರಲ್ಲಿ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು ನೀಡುವುದಕ್ಕಾಗಿ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ರಚಿಸಿತು. ಅನೇಕ ಹೋರಾಟಗಳ ಫಲವಾಗಿ ರಾಜ್ಯ ಸರ್ಕಾರ 2007 ರಲ್ಲಿ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ರಚಿಸಿತು. ಆದರೂ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಇನ್ನು ಹೋರಾಟ ನಡೆಸುತ್ತಿರುವುದು ನೋವಿನ ಸಂಗತಿ ಎಂದು ವಿಷಾಧಿಸಿದರು.
ಕೆ.ಎಸ್.ಸಿ.ಡಬ್ಲ್ಯು.ಸಿ.ಯು. ಜಿಲ್ಲಾಧ್ಯಕ್ಷ ವೈ.ಸತ್ಯಪ್ಪ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಸಂಚಾಲಕ ಗಣೇಶ್, ಪ್ರಧಾನ ಕಾರ್ಯದರ್ಶಿ ಪ್ರಸನ್ನಕುಮಾರ್, ಜಿಲ್ಲಾ ಕಾರ್ಯದರ್ಶಿ ಮಲ್ಲೇಶ್, ಕಾರ್ಯದರ್ಶಿ ಶಿವಕುಮಾರ್, ತಾಲ್ಲೂಕು ಅಧ್ಯಕ್ಷ ಸಿದ್ದಲಿಂಗಪ್ಪ
ನಿರ್ದೇಶಕ ಪಿ.ಎಂ.ನಾಗರಾಜ್, ಉಪಾಧ್ಯಕ್ಷ ಎಂ.ಸಿ.ಮಚ್ಚೇಂದ್ರಪ್ಪ, ಸಂಘಟನಾ ಕಾರ್ಯದರ್ಶಿ ಎಂ.ಡಿ.ಶಫಿ ಹಾಗೂ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...