Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೇಶ-ರಾಜ್ಯ ಮುಳುಗಿ ಹೋಗುವಂತ ಕೆಲಸ ಮಾಡಿಲ್ಲ : ಕರೆಂಟ್ ವಿಚಾರಕ್ಕೆ ಹೆಚ್ಡಿಕೆ ಪ್ರತಿಕ್ರಿಯೆ

---Advertisement---

 

ಬೆಂಗಳೂರು: ದೀಪಾವಳಿ ಹಬ್ಬದಂದು ದೀಪಲಂಕಾರಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಜೆಪಿ ನಗರ ನಿವಾಸಕ್ಕೆ, ಲೈಟ್ ಕಂಬದ ಮೂಲಕ ಅಕ್ರಮವಾಗಿ ಪವರ್ ಕನೆಕ್ಷನ್ ತೆಗೆದುಕೊಂಡಿದ್ದಾರೆ. ಈ ಸಂಬಂಧ ಕಾಂಗ್ರೆಸ್ ವಿಡಿಯೋ ಸಮೇತ ಪೋಸ್ಟ್ ಮಾಡಿ ಟೀಕೆ ಮಾಡಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ನಾನೇನು ದೇಶ – ರಾಜ್ಯ ಮುಳುಗಿ ಹೋಗುವ ಕೆಲಸ‌ ಮಾಡಿಲ್ಲ ಎಂದಿದ್ದಾರೆ.

ಸಾವಿರ ರೂಪಾಯಿ ಕರೆಂಟ್ ಕದಿಯುವ ಪ್ರಮೇಯ ನನಗೆ ಬಂದಿಲ್ಲ. ಕಾಂಗ್ರೆಸ್ ಬೇರೆ ಕೆಲಸ ಇಲ್ಲ. ಅದಕ್ಕೆ ಈ ವಿಚಾರ ಇಟ್ಟುಕೊಂಡು ಚರ್ಚೆ ಮಾಡುತ್ತಾ ಇದ್ದಾರೆ. ಅಚಾತುರ್ಯದಿಂದ ಈ ಕೆಲ ನಡೆದು ಹೋಗಿದೆ. ನಾನೇನು ದೇಶವನ್ನು ಲೂಟಿ ಹೊಡೆದಿಲ್ಲ. ವಿದ್ಯುತ್ ಕಳ್ಳತನ ಮಾಡುವಂತ ದರಿದ್ರ ನನಗೆ ಬಂದಿಲ್ಲ. ನನ್ನ ಎಲ್ಲಾ ವಿಚಾರಗಳು ತೆರೆದ ಪುಸ್ತಕವಿದ್ದಂತೆ. ಕಾಂಗ್ರೆಸ್ ನವರಂತೆ ಲೂಟಿ ಹೊಡೆಯುವ ಕೆಲಸ ನಾನು ಮಾಡಿಲ್ಲ ಎಂದಿದ್ದಾರೆ.

ಬಿಡದಿ ತೋಟದಿಂದ ಬಂದ ಕೂಡಲೇ ವಿಚಾರ ಗೊತ್ತಾಗಿದೆ. ಕೂಡಲೇ ಆ ಕನೆಕ್ಷನ್ ತೆಗೆಯುವಂತೆ ಸೂಚಿಸಿದ್ದೇನೆ. ಲೈನ್ ಮ್ಯಾನ್ ಅಕ್ರಮವಾಗಿ ಕನೆಕ್ಷನ್ ಕೊಡಿ ಎಂದು ನಾನು ಹೇಳಿದ್ದೇನಾ. ಏನೇ ಆದರೂ ಹೊಣೆ ನಾನೇ. ಬೆಸ್ಕಾಂನವರು ದಂಡ ಹಾಕಿದರೆ ನಾನು ಕಟ್ಟುತ್ತೇನೆ ಎಂದು ಅಕ್ರಮ ಕರೆಂಟ್ ಕನೆಕ್ಷನ್ ಗೆ ಕುಮಾರಸ್ವಾಮಿ ಅವರೇ ಸ್ಪಷ್ಟ ಉತ್ತರ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment