ಸುದ್ದಿಒನ್, ಚಿತ್ರದುರ್ಗ, ನವೆಂಬರ್. 26 : ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಮೊದಲ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಚಾರಣೆ ಪೂರ್ಣಗೊಂಡಿದೆ.
ನಿಗಧಿಯಂತೆ ಇಂದು ಬೆಳಗ್ಗೆ 11:30ಕ್ಕೆ ಶರಣರ ವಿರುದ್ಧದ ಮೊದಲ ಪೋಕ್ಸೊ ಪ್ರಕರಣದ ತೀರ್ಪು ಪ್ರಕಟವಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಕಾರಣಾಂತರಗಳಿಂದ ಇಂದು ಮಧ್ಯಾನ್ಹ 2 : 45 ಕ್ಕೆ ತೀರ್ಪು ಪ್ರಕಟವಾಗಲಿದೆ ಎಂದು ಕೋರ್ಟ್ ಮೂಲಗಳಿಂದ ತಿಳಿದು ಬಂದಿದೆ. ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್ ಕೋರ್ಟ್ ನ ನ್ಯಾಯಮೂರ್ತಿ ಗಂಗಾಧರಪ್ಪ ಚೆನ್ನಬಸಪ್ಪ ಹಡಪದ ತೀರ್ಪು ಪ್ರಕಟಿಸಲಿದ್ದಾರೆ.

