ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಆಗಾಗ ಕೇಳಿ ಬರುತ್ತಲೆ ಇದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರದಲ್ಲಿ ತಣ್ಣಗಾಗಿದ್ದ ಪ್ರತ್ಯೇಕ ಕೂಗು ಈಗ ಮತ್ತೆ ಎದ್ದಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಬಸವ ಧರ್ಮ ಮಹಾಮನೆಯ ಪೀಠಾಧ್ಯಕ್ಷ ಡಾ. ಚನ್ನಬಸವಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.
ಈ ಸಂಬಂಧ ಕೇಂದ್ರಕ್ಕೆ ಮರುಪ್ರಸ್ತಾಪವನೆ ಸಲ್ಲಿಸುವಂತೆ ಒತ್ತಾಯಿಸಿದ್ದಾರೆ. ಲಿಂಗಾಯತ ಸ್ವತಂತ್ರ ಧರ್ಮಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ಚನ್ನಬಸವಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ. ಲೋಕಸಭಾ ಚುನಾವಣೆಯ ಹೊತ್ತಿನಲ್ಲಿಯೇ ಪ್ರತ್ಯೇಕ ಧರ್ಮದ ಕೂಗು ಮತ್ತೆ ಕೇಳಿದೆ.
ಈ ಹಿಂದೆ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿದ್ದಾಗ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಕೇಳಿಸಿತ್ತು. ಲಿಂಗಾಯತರ ಸ್ವತಂತ್ರ ಧರ್ಮಕ್ಕಾಗಿ ಮನವಿ ಸಲ್ಲಿಸುವ ಮೂಲಕ ಸಿದ್ದರಾಮಯ್ಯ ಐತಿಹಾಸಿಕ ನಿರ್ಧಾರ ಮಾಡಿದ್ದರು. ಆದರೆ ಆ ಸಮಯದಲ್ಲಿ ಪ್ರಧಾನಿ ಮೋದಿ ತಿರಸ್ಕಾರ ಮಾಡಿದ್ದರು. ಈಗ ಮತ್ತೊಮ್ಮೆ ಪ್ರಸ್ತಾಪನೆ ಸಲ್ಲಿಸಲು ಮನವಿ ಮಾಡಲಾಗಿದೆ. ಮತ್ತೆ ರಾಜ್ಯದಲ್ಲಿ ಸಿದ್ದರಾಮಯ್ಯ ಅವರದ್ದೇ ಸರ್ಕಾರ ಆಡಳಿತದಲ್ಲಿದೆ. ಹೀಗಾಗಿ ಮರು ಪ್ರಸ್ತಾವನೆಗೆ ಸ್ವಾಮೀಜಿ ಒತ್ತಾಯಿಸಿದ್ದಾರೆ.