Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಮತ್ತೆ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು : ಚನ್ನಬಸವಾನಂದ ಸ್ವಾಮೀಜಿಯಿಂದ ಆಗ್ರಹ..!

---Advertisement---

 

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಆಗಾಗ ಕೇಳಿ ಬರುತ್ತಲೆ ಇದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರದಲ್ಲಿ ತಣ್ಣಗಾಗಿದ್ದ ಪ್ರತ್ಯೇಕ ಕೂಗು ಈಗ ಮತ್ತೆ ಎದ್ದಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಬಸವ ಧರ್ಮ ಮಹಾಮನೆಯ ಪೀಠಾಧ್ಯಕ್ಷ ಡಾ. ಚನ್ನಬಸವಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.

ಈ ಸಂಬಂಧ ಕೇಂದ್ರಕ್ಕೆ ಮರುಪ್ರಸ್ತಾಪವನೆ ಸಲ್ಲಿಸುವಂತೆ ಒತ್ತಾಯಿಸಿದ್ದಾರೆ. ಲಿಂಗಾಯತ ಸ್ವತಂತ್ರ ಧರ್ಮಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ಚನ್ನಬಸವಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ. ಲೋಕಸಭಾ ಚುನಾವಣೆಯ ಹೊತ್ತಿನಲ್ಲಿಯೇ ಪ್ರತ್ಯೇಕ ಧರ್ಮದ ಕೂಗು ಮತ್ತೆ ಕೇಳಿದೆ.

ಈ ಹಿಂದೆ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿದ್ದಾಗ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಕೇಳಿಸಿತ್ತು. ಲಿಂಗಾಯತರ ಸ್ವತಂತ್ರ ಧರ್ಮಕ್ಕಾಗಿ ಮನವಿ ಸಲ್ಲಿಸುವ ಮೂಲಕ ಸಿದ್ದರಾಮಯ್ಯ ಐತಿಹಾಸಿಕ ನಿರ್ಧಾರ ಮಾಡಿದ್ದರು. ಆದರೆ ಆ ಸಮಯದಲ್ಲಿ ಪ್ರಧಾನಿ ಮೋದಿ ತಿರಸ್ಕಾರ ಮಾಡಿದ್ದರು. ಈಗ ಮತ್ತೊಮ್ಮೆ‌ ಪ್ರಸ್ತಾಪನೆ‌ ಸಲ್ಲಿಸಲು ಮನವಿ ಮಾಡಲಾಗಿದೆ. ಮತ್ತೆ ರಾಜ್ಯದಲ್ಲಿ ಸಿದ್ದರಾಮಯ್ಯ ಅವರದ್ದೇ ಸರ್ಕಾರ ಆಡಳಿತದಲ್ಲಿದೆ. ಹೀಗಾಗಿ ಮರು ಪ್ರಸ್ತಾವನೆಗೆ ಸ್ವಾಮೀಜಿ ಒತ್ತಾಯಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment