ಕರ್ನಾಟಕ ವಿಧಾನಸಭಾ ಚುನಾವಣೆಗೆ ಈಗಾಗಲೇ ಪಕ್ಷಗಳು ಭಾರೀ ತಯಾರಿ ನಡೆಸುತ್ತಿವೆ. ರಾಜ್ಯದಲ್ಲಿ ಸ್ಟ್ರಾಂಗ್ ಆಗಿರುವ ಮೂರು ಪಕ್ಷಗಳು ಹಲವು ಯೋಜನೆಗಳ ಮೂಲಕ ಜನರನ್ನು ತಲುಪುತ್ತಿವೆ. ಜೆಡಿಎಸ್ ಪಕ್ಷ ಪಂಚರತ್ನ ಯಾತ್ರೆ ಮೂಲಕ ಹಳ್ಳಿ ಹಳ್ಳಿಗೂ ಹೋಗಿ ತಮ್ಮ ಯೋಜನೆಯ ಮಹತ್ವವನ್ನು ಮುಟ್ಟಿಸುತ್ತಿದ್ದರೆ, ಕಾಂಗ್ರೆಸ್ ನಾಯಕರು ಪ್ರವಾಸದ ರೂಪುರೇಷೆ ಸಿದ್ಧತೆ ಮಾಡಿಕೊಂಡಿದ್ದಾರೆ. ಇನ್ನು ಬಿಜೆಪಿ ಜನ ಸಂಕಲ್ಪ ಯಾತ್ರೆಯ ಮೂಲಕ ಪ್ರಚಾರ ಕಾರ್ಯ ಶುರು ಮಾಡಿಕೊಂಡಿದ್ದಾರೆ.
ಈ ನಡುವೆ ಚುನಾವಣೆಯ ದಿನಾಂಕ ಅನೌನ್ಸ್ ಆದರೆ ಪ್ರಚಾರ ಕಾರ್ಯದಲ್ಲಿ ಇನ್ನಷ್ಟು ಬಿರುಸು ಪಡೆದುಕೊಳ್ಳಲಿದೆ. ಇಂದು ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕವೂ ಅನೌನ್ಸ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇಂದು ಮಧ್ಯಾಹ್ನ ಪಕ್ಕಾ ಮಾಹಿತಿ ಹೊರ ಬೀಳಲಿದೆ.
ಇಂದು ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿಯನ್ನು ನಡೆಸಲಿದೆ. ಈ ವೇಳೆ ನಾಗಲ್ಯಾಂಡ್, ಮೇಘಾಲಯ, ತ್ರಿಪುರಾ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಲಿದೆ. ಚುನಾವಣಾ ಆಯುಕ್ತರ ಕಡೆಗೆ ಎಲ್ಲರ ಚಿತ್ತ ನೆಟ್ಟಿದೆ.