Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ತಲೆ ಬುರುಡೆಯಲ್ಲಾದ ಸಮಸ್ಯೆಯಾಗಿದ್ದನ್ನು ವೈದ್ಯರು ಸರಿ ಮಾಡಿದ್ದಾರೆ : ಆಸ್ಪತ್ರೆಯಿಂದಾನೆ ತಿಳಿಸಿದ ಸದ್ಗುರು

---Advertisement---

ನವದೆಹಲಿ: ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಅವರಿಗೆ ಅನಾರೋಗ್ಯ ಸಂಭವಿಸಿ, ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯ ಸ್ಥಿತಿ ಸರಿ ಇದೆ ಎಂಬುದನ್ನು ಸ್ಚತಃ ಅವರೇ ಸ್ಪಷ್ಟಪಡಿಸಿದ್ದಾರೆ. ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಸದ್ಗುರು ಚಿಕಿತ್ಸೆ ಸದ್ಯ ಯಶಸ್ವುಯಾಗಿದೆ. ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಳ್ಳುವ ಮೂಲಕ ಸ್ಪಷ್ಟಪಡಿಸಿದ್ದಾರೆ.

‘ಅಪೋಲೋ ಆಸ್ಪತ್ರೆಯ ವೈದ್ಯರು ನನ್ನ ಬ್ರೈನ್ ಅನ್ನು ಸರ್ಜರಿ ಮಾಡಿದ್ದಾರೆ. ತಲೆ ಬುರುಡೆಯಲ್ಲಿ ಆಗಿದ್ದ ಸಮಸ್ಯೆಯನ್ನು ವೈದ್ಯರು ಸರಿ ಮಾಡಿದ್ದಾರೆ. ತಲೆ‌ ಮೇಲೆ ಪ್ಯಾಚ್ ಹಾಕಿದ್ದಾರೆ. ನಾನು ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿದ್ದೀನಿ. ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ. ಆರೋಗ್ಯವಾಗಿದ್ದೀನಿ’ ಎಂದು ಆಸ್ಪತ್ರೆಯ ಬೆಡ್ ಮೇಲೆ ಮಲಗಿಕೊಂಡು ವಿಡಿಯೋ ಮಾಡಿ, ಹಂಚಿಕೊಂಡಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಕಿಂಚ ಧೈರ್ಯ ಬಂದಿದೆ.

ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ಬ್ರೇನ್ ಸರ್ಜರಿ ಆಗಿದೆ ಎಂದು ಅವರ ಅಭಿಮಾನಿಗಳು, ಭಕ್ತರು ಆತಂಕ ವ್ಯಕ್ತಪಡಿಸಿದ್ದರು. ಜಗ್ಗಿ ವಾಸುದೇವ್ ಅವರು ಶೀಘ್ರ ಗುಣಮುಖರಾಗಬೇಕು ಎಂದು ಇಶಾ ಫೌಂಡೇಶನ್​ನ ಭಕ್ತರು ಹಾಗೂ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಸದ್ಗುರು ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಬೇಡಿಕೊಳ್ಳುತ್ತಿದ್ದಾರೆ. ಇದೀಗ ತಮ್ಮ ಆರೋಗ್ಯದ ಬಗ್ಗೆ ಸದ್ಗುರು ಅವರೇ ಸ್ಪಷ್ಟನೆ ನೀಡಿದ್ದಾರೆ. ಸದ್ಗುರು ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ದೇಶದಾದ್ಯಂತ ಅಭಿಮಾನಿಗಳಿದ್ದಾರೆ. ಅವರ ಒಂದೊಂದು ಮಾತು ಕೇಳುವುದಕ್ಕೆ ಫ್ಯಾನ್ಸ್ ಕಾಯುತ್ತಿರುತ್ತಾರೆ. ಹೀಗಿರುವಾಗ ಅವರಿಗೆ ಮೆದುಳಿನ ಶಸ್ತ್ರಚಿಕಿತ್ಸೆ ಎಂದಾಗ ಸಹಜವಾಗಿಯೇ ಆತಂಕಗೊಂಡ ಫ್ಯಾನ್ಸ್ ದೇವರ ಮೊರೆ ಹೋಗಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment