Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ನೌಕರರ ಭವನವನ್ನು  ನೌಕರರ ಹಿತಕ್ಕೆ ಬಳಸಬೇಕು : ಕರುನಾಡ ವಿಜಯಸೇನೆ ಆಗ್ರಹ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.30  : ಕಳೆದ 27 ರಂದು ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ಅವರವರ ಅಳತೆಗೆ ತಕ್ಕಂತೆ ಟೀಶರ್ಟ್ ಮತ್ತು ಇತರೆ ಸಾಮಾಗ್ರಿಗಳನ್ನು ನೀಡುವಲ್ಲಿ ಲೋಪವಾಗಿದ್ದನ್ನು ಪ್ರಶ್ನಿಸುತ್ತಿದ್ದ ಸಂದರ್ಭದಲ್ಲಿ ದೃಶ್ಯ ಹಾಗೂ ಮುದ್ರಣ ಮಾಧ್ಯಮದವರು ನೌಕರರ ಪರ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಇವರನ್ನು ಪ್ರಶ್ನಿಸಿದಾಗ ಹಲ್ಲೆ ನಡೆಸಿರುವುದನ್ನು ವಿರೋಧಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ ಸುಮೋಟೋ ಕೇಸು ದಾಖಲಿಸಿ ಬಂಧಿಸುವಂತೆ ಒತ್ತಾಯಿಸಿದರು.

ಮಹಿಳಾ ನೌಕರರು ತಮ್ಮ ತಮ್ಮ ಅಳತೆಗೆ ತಕ್ಕಂತೆ ಟೀಶರ್ಟ್‍ಗಳನ್ನು ನೀಡಿಲ್ಲ ಎಂದು ರಾಜ್ಯಾಧ್ಯಕ್ಷ ಷಡಾಕ್ಷರಿಯನ್ನು ಪ್ರಶ್ನಿಸುತ್ತಿದ್ದ ಸಂದರ್ಭವನ್ನು ಸೆರೆ ಹಿಡಿಯುತ್ತಿದ್ದ ಟಿ.ವಿ. ಮಾಧ್ಯಮ ಹಾಗೂ ಪತ್ರಕರ್ತರನ್ನು ನಿಂದಿಸಿದ್ದಲ್ಲದೆ ಹಲ್ಲೆ ನಡೆಸಿ ದೌರ್ಜನ್ಯವೆಸಗಿರುವುದು ಅತ್ಯಂತ ಖಂಡನೀಯ. ಹಾಗಾಗಿ ಕೂಡಲೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು.

ಚಿತ್ರದುರ್ಗದಲ್ಲಿರುವ ಸರ್ಕಾರಿ ನೌಕರರ ಭವನವನ್ನು ಬಾರ್ ಮತ್ತು ರೆಸ್ಟೋರೆಂಟ್‍ಗೆ ನೀಡಿ ಜಿಲ್ಲೆಯ ಸರ್ಕಾರಿ ನೌಕರರನ್ನು ಅವಮಾನಿಸಲಾಗಿದೆ. ಸರ್ಕಾರ ಇತ್ತ ಗಮನಹರಿಸಿ ನೌಕರರ ಭವನವನ್ನು ಬಾಡಿಗೆ ನೀಡಿರುವುದನ್ನು ಹಿಂದಕ್ಕೆ ಪಡೆದು ನೌಕರರ ಹಿತಕ್ಕೆ ಬಳಸಬೇಕು ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಆಗ್ರಹಿಸಿದರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಕಾರ್ಯದರ್ಶಿ ಜಗದೀಶ್, ವಿಶ್ವನಾರಾಯಣಮೂರ್ತಿ, ಅಖಿಲೇಶ್, ಗೋಪಿನಾಥ್, ಹರೀಶ್‍ಕುಮಾರ್, ಅವಿನಾಶ್, ಕಮಲಮ್ಮ, ಗೋಪಿ, ಅಭಿಷೇಕ್, ಸಾಯಿಕುಮಾರ್, ಮಂಜುನಾಥ, ಸುರೇಶ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...