Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಭ್ಬಾಷ್ ಸಿನಿಮಾದ 2ನೇ ಹಂತದ ಚಿತ್ರೀಕರಣ ಮಗಿಸಿದ ಚಿತ್ರತಂಡ

Facebook
Twitter
Telegram
WhatsApp

ಸುದ್ದಿಒನ್, ಬೆಂಗಳೂರು, ಫೆಬ್ರವರಿ. 28 : ರುದ್ರಶಿವ ನಿರ್ದೇಶನದ `ಶಭ್ಬಾಷ್’ ಸಿನಿಮಾ ಇದೀಗ ಎರಡನೇ ಹಂತದ ಚಿತ್ರೀಕರಣವನ್ನು ಮುಗಿಸಿದೆ. ಸುಲಲಿತವಾಗಿ ಚಿತ್ರೀಕರಣ ಮುಗಿಸಿದ ಸಂತಸದ ವಿಚಾರವನ್ನು ಚಿತ್ರತಂಡ ಹಂಚಿಕೊಂಡಿದೆ.

ಚನ್ನಗಿರಿಯಲ್ಲಿ ಮೊದಲನೇ ಹಂತದ ಚಿತ್ರೀಕರಣ ಮುಗಿಸಿಕೊಂಡಿದ್ದ ಚಿತ್ರತಂಡ, ಎರಡನೇ ಹಂತಕ್ಕೆ ಬೇರೆ ಬೇರೆ ಸ್ಥಳಗಳಿಗೆ ಭೇಟಿ ನೀಡಿದೆ. ಮಡಿಕೇರಿ ಸುತ್ತಮುತ್ತಲ ಚೆಂದದ ಪರಿಸರದಲ್ಲಿ ಎರಡನೇ ಹಂತದ ಚಿತ್ರೀಕರಣವನ್ನು ಮುಗಿಸಿಕೊಂಡಿದೆ.

ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಗಿಸಿದ ಅನುಭವ ಬಿಚ್ಚಿಟ್ಟ ನಿರ್ದೇಶಕ ರುದ್ರಶಿವ, ಅತ್ಯಂತ ಅಚ್ಚುಕಟ್ಟಾಗಿ ಪ್ಲಾನು ಮಾಡಿಕೊಂಡು, ಅದಕ್ಕೆ ತಕ್ಕುದಾಗಿಯೇ ಮುಂದಡಿ ಇಡುತ್ತಿದ್ದಾರೆ. ಅದರ ಭಾಗವಾಗಿಯೇ ಮಡಿಕೇರಿಯ ಗೋಣಿಕೊಪ್ಪ, ಬಿರನಾಣಿ ಮುಂತಾದ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸಿದ್ದಾರೆ. ಈ ಭಾಗದ ಟಾಟ ಟೀ ಎಸ್ಟೇಟ್, ಬೆಟ್ಟಗುಡ್ಡ, ಜಲಪಾತ ಮುಂತಾದೆಡೆಗಳಲ್ಲಿ ಬಹುಮುಖ್ಯ ಭಾಗಗಳನ್ನು ಸೆರೆಹಿಡಿಯಲಾಗಿದೆ. ದುರ್ಗಮವಾದ ಪ್ರದೇಶಗಳಲ್ಲಿ ಒಂದಿಡೀ ಚಿತ್ರತಂಡ ಅತ್ಯಂತ ಉತ್ಸಾಹದಿಂದ ಈ ಚಿತ್ರೀಕರಣದಲ್ಲಿ ಭಾಗಿಯಾಗಿದೆ.

ವಿಶೇಷವಾಗಿ, ಎರಡು ಹಾಡುಗಳನ್ನು ಈ ಸಂದರ್ಭದಲ್ಲಿ . ಇಲ್ಲಿ ವಾಸವಾಗಿರುವ ಜೇನುಕುರುಬರ ಹಾಡಿಗಳಿಗೆ ಭೇಟಿ ನೀಡಿದ್ದ ಚಿತ್ರತಂಡ, ಆ ಬುಡಕಟ್ಟು ಜನಾಂಗದ ಹಾಡೊಂದನ್ನು ಚಿತ್ರೀಕರಿಸಿಕೊಂಡಿದೆ. ಅದಕ್ಕೆ ಸಾಹಿತ್ಯ, ಸಂಗೀತವೆಲ್ಲ ಆ ಬುಡಕಟ್ಟು ಜನರದ್ದೇ ಎಂಬುದು ಅಸಲೀ ವಿಶೇಷ. ಒಟ್ಟಾರೆ ಶಭ್ಬಾಷ್ ಚಿತ್ರದ ಪ್ರಧಾನ ಆಕರ್ಷಣೆಗಳಲ್ಲಿ ಜೇನುಕುರುಬರ ಆ ಹಾಡೂ ಕೂಡಾ ಪ್ರಧಾನವಾಗಿ ಸೇರಿಕೊಂಡಿದೆ.
ಅಂದಹಾಗೆ, ಆರು ದಿನಗಳ ಕಾಲ ಮಡಿಕೇರಿ ಭಾಗದಲ್ಲಿಯೇ ಚಿತ್ರತಂಡ ಬೀಡುಬಿಟ್ಟಿತ್ತು. ಡ್ಯಾನ್ಸರ್ ಗಳು ಸೇರಿದಂತೆ ಇಡೀ ಚಿತ್ರತಂಡವೇ ಎರಡನೇ ಹಂತರ ಚಿತ್ರೀಕರಣದಲ್ಲಿ ಭಾಗಿಯಾಗಿತ್ತು. ಅದರಲ್ಲಿಯೂ ಒಂದು ದಿನ ಸಂಜೆ ಆರು ಗಂಟೆಯಿಂದ ಮಾರನೇ ದಿನ ಮುಂಜಾನೆ ಆರು ಗಂಟೆಯವರೆಗೂ ಅವ್ಯಾಹತವಾಗಿ ಚಿತ್ರೀಕರಣ ನಡೆಸಲಾಗಿದೆ. ಮಡಿಕೇರಿ ಅಂದಮೇಲೆ ಅಲ್ಲಿನ ಮಂಜು, ಚಳಿಯ ತೀವ್ರತೆ ಎಂಥಾದ್ದೆಂಬುದು ಎಲ್ಲರಿಗೂ ತಿಳಿದಿರುತ್ತೆ. ಅದರ ನಡುವೆಯೂ ಅಹೋರಾತ್ರಿ ಚಿತ್ರೀಕರಣ ನಡೆಸಿದ ರೋಮಾಂಚಕ ಕ್ಷಣಗಳಿಗೆ ಚಿತ್ರತಂಡ ಸಾಕ್ಷಿಯಾಗಿದೆ.

ಓಂ ಸಾಯಿ ಪ್ರಕಾಶ್ ಸೇರಿದಂತೆ ಘಟಾನುಘಟಿ ನಿರ್ದೇಶಕರ ಗರಡಿಯಲ್ಲಿ ಪಳಗಿಕೊಂಡಿರುವ ರುದ್ರಶಿವ ನಿರ್ದೇಶನದ ಮೊದಲ ಚಿತ್ರವಿದು. ಪವೀಂದ್ರ ಮುತ್ತಪ್ಪ ಈ ಚಿತ್ರವನ್ನು ಏಸ್ 22 (ACE 22) ಬ್ಯಾನರಿನಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಈಗಾಗಲೇ `ಕ’ ಮತ್ತು `ಮಳೆಬಿಲ್ಲು’ ಸಿನಿಮಾಗಳಲ್ಲಿ ನಟಿಸಿರುವ ಶರತ್ ನಾಯಕನಾಗಿ ನಟಿಸಿದ್ದರೆ, ನಿಸರ್ಗ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ಇದೀಗ ಎರಡನೇ ಹಂತದ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಗಿಸಿಕೊಂಡಿರುವ ಚಿತ್ರತಂಡ, ಮೂರನೇ ಹಂತದ ಚಿತ್ರೀಕರಣದತ್ತ ಸಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!