ನಾಲ್ಕನೇ ಅಲೆ ಬಂದಿಲ್ಲ. ಪ್ರಕರಣ ಹೆಚ್ಚುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮ ಅಗತ್ಯ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾದ ನಾಲ್ಕನೇ ಅಲೆ ಬಂದಿಲ್ಲ. ಆದರೂ ಮಾಸ್ಕ್ ಧರಿಸುವ ಹಾಗೂ ಲಸಿಕೆ ಪಡೆಯುವ ಮೂಲಕ ಜನರು ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೆಹಲಿ ಸೇರಿದಂತೆ ಕೆಲ ರಾಜ್ಯಗಳಲ್ಲಿ ಕಳೆದೊಂದು ವಾರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಇದನ್ನು ಗಮನಿಸಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುತ್ತಿದೆ. ಜೊತೆಗೆ ಆರೋಗ್ಯ ಇಲಾಖೆಯ ಸಭೆ ನಡೆಸಿ ಕ್ರಮ ವಹಿಸಲಾಗುವುದು. ಜನರ ಸುರಕ್ಷತಾ ದೃಷ್ಟಿಯಿಂದ ಮಾಸ್ಕ್ ಧರಿಸುವುದು ಹಾಗೂ ಕೋವಿಡ್ ಮೂರನೇ ಡೋಸ್ ಪಡೆಯಲು ಸೂಚಿಸಲಾಗಿದೆ. ಆದರೆ ಇದನ್ನು ಹೆಚ್ಚಿನವರು ಪಾಲಿಸುತ್ತಿಲ್ಲ. ಇನ್ನೂ 29-30 ಲಕ್ಷ ಜನರು ಎರಡನೇ ಡೋಸ್ ಪಡೆಯಬೇಕಿದೆ ಎಂದರು.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಪ್ರಯಾಣಿಕರ ಮೇಲೆ ನಿಗಾ ಇಡುವುದು ಸೇರಿದಂತೆ ಹಲವು ಕ್ರಮ ವಹಿಸಲಾಗಿದೆ. ಆದರೂ ಬೇರೆ ರಾಜ್ಯಗಳಲ್ಲಿ ಸೋಂಕು ಹೆಚ್ಚಾದಾಗ ಸಹಜವಾಗಿ ಹರಡುತ್ತದೆ. ಆದ್ದರಿಂದ ಜನರು ಹೆಚ್ಚು ಮುನ್ನೆಚ್ಚರಿಕೆ ವಹಿಸಬೇಕಿದೆ. ಹೆಚ್ಚು ಜನರು ಸೇರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಲಸಿಕೆ ಹೆಚ್ಚಾಗಿ ನೀಡಿರುವುದರಿಂದ ಮೂರನೇ ಅಲೆ ನಿಯಂತ್ರಣಕ್ಕೆ ಬಂದಿದೆ. ಆದರೆ ರಾಜ್ಯದಲ್ಲಿ ನಾಲ್ಕನೇ ಅಲೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ 97.9% ಜನರು ಎರಡನೇ ಡೋಸ್ ಪಡೆದುಕೊಂಡಿದ್ದಾರೆ. ಮೊದಲ ಡೋಸ್ ಅನ್ನು ಪಡೆದವರ ಪ್ರಮಾಣ 100% ದಾಟಿದೆ. 12 ವರ್ಷ ಮೇಲ್ಪಟ್ಟವರಲ್ಲಿ ಹೆಚ್ಚಿನವರಿಗೆ ಲಸಿಕೆ ಕೊಡಿಸಬೇಕಿದೆ. ಪೋಷಕರು ಈ ಬಗ್ಗೆ ಗಮನ ನೀಡಬೇಕು ಎಂದರು.

suddionenews

Recent Posts

ಬೆಳ್ಳಂಬೆಳಗ್ಗೆ ಚಿತ್ರದುರ್ಗ ಸೇರಿದಂತೆ ಹಲವೆಡೆ ಲೋಕಾಯುಕ್ತರಿಂದ ದಾಳಿ..!

ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…

38 minutes ago

ಇಂದಿನಿಂದ ಬಜೆಟ್ ಅಧಿವೇಶನ ಆರಂಭ

  ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…

2 hours ago

ಯಾವ ವಯಸ್ಸಿನಿಂದ ಮಕ್ಕಳಿಗೆ ಚಹಾ ಅಥವಾ ಕಾಫಿಯನ್ನು ನೀಡಬಹುದು ? ಚಿಕ್ಕ ವಯಸ್ಸಿನಲ್ಲಿ ಕುಡಿಯುವುದು ಅಪಾಯಕಾರಿಯೇ ?

ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…

5 hours ago

ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ

ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…

6 hours ago

ಫೈನಾನ್ಸ್ ಕಿರುಕುಳಕ್ಕೆ ದಾವಣಗೆರೆಯ ಶಿಕ್ಷಕಿ ಆತ್ಮಹತ್ಯೆ ಕೇಸ್ : ಉಲ್ಟಾ ಹೊಡೆದ ಪತಿ..!

ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…

15 hours ago

ಹುತಾತ್ಮರ ದಿನ : ಗಾಂಧೀಜಿಯವರಿಗೆ ಪುಷ್ಪ ನಮನ

ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…

15 hours ago