ವಿಧಾನಸಭಾ ಚುನಾವಣೆ ಮುಗಿದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಪಕ್ಷ ವಿರೋಧ ಪಕ್ಷದ ಸ್ಥಾನದಲ್ಲಿ ನಿಂತಿದೆ. ಆದರೆ ವಿರೋಧ ಪಕ್ಷದ ನಾಯಕನನ್ನು ಮಾತ್ರ ಆಯ್ಕೆ ಮಾಡಿಲ್ಲ. ಈ ಸಂಬಂಧ ಕಾಂಗ್ರೆಸ್ ಆಗಾಗ ಪ್ರಶ್ನೆ ಮಾಡುತ್ತಲೇ ಇರುತ್ತದೆ. ಇದೀಗ ಮತ್ತೆ ಪ್ರಶ್ನಿಸುತ್ತಾ ಇದೆ.
ಟ್ವೀಟ್ ಮಾಡಿರುವ ಕಾಂಗ್ರೆಸ್, ಚುನಾವಣೆ ಮುಗಿದು 50ಕ್ಕೂ ಹೆಚ್ಚು ದಿನ ಕಳೆಯಿತು. ನಮ್ಮ ಸರ್ಕಾರ ರಚನೆ ಆಗಿ ತಿಂಗಳು ಕಳೆಯಿತು. ಮಂತ್ರಿಮಂಡಲವೂ ರಚನೆಯಾಯ್ತು. ಸರ್ಕಾರ ಕೆಲಸ ಶುರು ಮಾಡಿಯಾಯ್ತು.
ಹಲವು ಕ್ಯಾಬಿನೆಟ್ ಸಭೆಗಳಾದವು, ಹಲವು ತೀರ್ಮಾನಗಳಾದವು. ಮೂರು ಗ್ಯಾರಂಟಿಗಳೂ ಜಾರಿಯಾದವು. ಇಷ್ಟೆಲ್ಲಾ ಆದರೂ ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಾಗಿಲ್ಲ. @BJP4Karnataka ಪಕ್ಷ ಆಡಳಿತ ಮಾಡಲು ಆಸಮರ್ಥರು ಎಂದು ಈಗಾಗಲೇ ಜನರು ಸರ್ಟಿಫಿಕೇಟ್ ಕೊಟ್ಟಾಗಿದೆ, ಈಗ ವಿರೋಧ ಪಕ್ಷವಾಗಿರಲೂ ಸಹ ಆಸಮರ್ಥರು ಎಂದು ತಿಳಿಯುತ್ತಿದೆ ಎಂದು ಟ್ವೀಟ್ ಮಾಡುವ ಮೂಲಕ ವಿರೋಧ ಪಕ್ಷದ ನಾಯಕನ ಬಗ್ಗೆ ಕೇಳಿದೆ.