ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ಜೂ. 24 : ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿರುವ ಕಾರಣ ವಿದ್ಯುತ್ ಖಾಸಗೀಕರಣ ಮಾಡಲು ಮುಂದಾಗಿದೆ. ಕೋಟಿಗಟ್ಟಲೆ ರೂ ವಿದ್ಯುತ್ ಸಾಲ ಆಗಿದೆ ಇದನ್ನು ಸರಿದೂಗಿಸುವ ಸಲುವಾಗಿ ಸರ್ಕಾರ ಖಾಸಗೀಕರಣ ಮಾಡಿ ಓಡಿ ಹೋಗಲು ಹುನ್ನಾರ ನಡೆಸಿದೆ ಎಂದು ಮಾಜಿ ಉಪ ಮುಖ್ಯಮಂತ್ರಿಗಳು ಸಂಸದರಾದ ಗೋವಿಂದ ಕಾರಜೋಳ ಸರ್ಕಾರ ತರಾಟೆಗೆ ತೆಗೆದುಕೊಂಡಿದ್ದಾರೆ.
ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿದ್ಯುತ್ ಖಾಸಗೀಕರಣ ಮಾಡುವ ಹುನ್ನಾರ ಸರ್ಕಾರದ ಮುಂದೆ ಇದೆ.. ಸರ್ಕಾರ ಈಗಾಗಲೇ ಟಾಟಾ ಪವರ್ ಪರ್ಚೇಸಿಗೆ ಅರ್ಜಿಯನ್ನು ಆಹ್ವಾನಿಸಿತ್ತು. ದಯವಿಟ್ಟು ಸಾರ್ವಜನಿಕರಲ್ಲಿ ಕೈಮುಗಿದು ಕೇಳಿಕೊಳ್ಳುತ್ತೇನೆ ಯಾರು ಸಹ ಇದರಲ್ಲಿ ಭಾಗಿಯಾಗಬೇಡಿ ಎಂದ ಅವರು, ವಿದ್ಯುತ್ ಖಾಸಗೀಕರಣ ಆದರೆ ಮುಂದಿನ ದಿನಗಳಲ್ಲಿ ರೈತರ ಐಪಿ ಸೆಟ್ಟುಗಳಿಗೆ ಬಿಲ್ ಬರುತ್ತವೆ.. ಆ ಬಿಲ್ಲನ್ನು ತುಂಬಬೇಕಾದರೆ ರೈತರು ಹೊಲ ಮಾರಬೇಕಾಗುತ್ತದೆ. ಈ ಸರ್ಕಾರ ರಿಯಲ್ ಎಸ್ಟೇಟ್ ಕಡೆಗೆ ಗಮನ ಹರಿಸಿದೆ. ಇದನ್ನ ಎಲ್ಲಾ ಶಾಸಕರು ವಿರೋಧ ಮಾಡಬೇಕು ಎಂದು ಆಗ್ರಹಿಸಿದರು.
ಸರ್ಕಾರದ ಒಡೆತನದ ವಿದ್ಯುತ್ ಕಂಪನಿಗಳಿಗೆ ನೇಮಕಾತಿ ಮಾಡಿಕೊಂಡರೆ ಮೀಸಲಾತಿ ಕೊಡಬೇಕಾಗುತ್ತದೆ ಎಂಬ ಕಾರಣಕ್ಕೆ ಖಾಸಗೀಕರಣ ಮಾಡಲು ಹೊರಟಿದೆ.. ಇದು ಎಸ್.ಸಿ/ಎಸ್.ಟಿ ಸಮುದಾಯಕ್ಕೆ ಮಾಡುತ್ತಿರುವ ದ್ರೋಹವಾಗಿದೆ. ಹಾಗೆಯೇ ಸರ್ಕಾರ ಖಾಸಗಿ ಕಂಪನಿಗಳೊಂದಿಗೆ ಒಳಒಪ್ಪಂದ ಮಾಡಿಕೊಂಡು ಲಾಭ ಮಾಡಿಕೊಳ್ಳುವ ಹುನ್ನಾರ ನಡೆಸಿದೆ. ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿರುವ ಕಾರಣ ವಿದ್ಯುತ್ ಖಾಸಗೀಕರಣ ಮಾಡಲು ಮುಂದಾಗಿದೆ. ಕೋಟಿಗಟ್ಟಲೆ ರೂ ವಿದ್ಯುತ್ ಸಾಲ ಆಗಿದೆ ಇದನ್ನು ಸರಿದೂಗಿಸುವ ಸಲುವಾಗಿ ಸರ್ಕಾರ ಖಾಸಗೀಕರಣ ಮಾಡಿ ಓಡಿ ಹೋಗಲು ಮುಂದಾಗಿದೆ ಎಂದು ದೂರಿದರು.
ರಾಜ್ಯದಲ್ಲಿ ಬರ ಆವರಿಸಿದೆ ಕೂಡಲೇ ಬರ ಘೋಷಣೆ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರಲ್ಲಿ ಒತ್ತಾಯಿಸಿದ್ದು, ಹಾಗೆಯೇ ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ಬರ ಪರಿಹಾರಕ್ಕೆ 25 ಕೋಟಿ ರೂ ಬಿಡುಗಡೆ ಮಾಡಬೇಕು. ಹಾಗೂ ಬರ ಅಧ್ಯಯನಕ್ಕೆ ಕೂಡಲೇ ಐಎಎಸ್ ಕೇಡರ್ ಅಧಿಕಾರಿಯನ್ನ ಪ್ರತಿ ಜಿಲ್ಲೆಗೆ ನೇಮಿಸಬೇಕು ಎಂದು ಸರ್ಕಾರವನ್ನು ಸಂಸದರಾಧ ಗೋವಿಂದ ಕಾರಜೋಳ ಆಗ್ರಹಿಸಿದರು.
ಗೋಷ್ಟಿಯಲ್ಲಿ ಮಾಜಿ ಶಾಸಕರುಗಳಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಕೆ.ಟಿ.ಕುಮಾರಸ್ವಾಮಿ, ಉಪಾಧ್ಯಕ್ಷರಾದ ಡಾ.ಸಿದ್ದಾರ್ಥ, ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ ಯಾದವ್, ಮಾಧುರಿ ಗೀರೀಶ್, ಮೋಹನ್ ಕುಮಾರ್, ನಗರಾದ್ಯಕ್ಷ ಲೋಕೇಶ್ ಗ್ರಾಮಾಂತರ ಅಧ್ಯಕ್ಷ ನಾಗರಾಜ್, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ಸಹ ವಕ್ತಾರ ನವೀನ್ ಚಾಲುಕ್ಯ, ಎಸ್,ಸಿ.ಮಾರ್ಚಾದ ಅಧ್ಯಕ್ಷ ಪರಶುರಾಮ್ ಉಪಸ್ಥಿತರಿದ್ದರು.










