Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರ ಯಾರ ರಕ್ಷಣೆಯನ್ನೂ ಮಾಡುತ್ತಿಲ್ಲ:ಸಿಎಂ

Facebook
Twitter
Telegram
WhatsApp

ಬೆಂಗಳೂರು: 2020 ರಲ್ಲಿ ಶ್ರೀ ಕೃಷ್ಣನ ಬಂಧನವಾಗಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅವನ ದುಷ್ಕೃತ್ಯಗಳನ್ನು ಬಯಲಿಗೆಳೆದಿದ್ದು, ಆತನನ್ನು ಬಂಧಿಸಲಾಯ್ತು. ಆತ, ಮನಿ ಲಾಂಡರಿಂಗ್, ಹ್ಯಾಕಿಂಗ್, ಡ್ರಗ್​ ಕೇಸ್​ನಲ್ಲಿ ಶಾಮೀಲಾಗಿದ್ದಾನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಹೇಳಿದರು.

ಈ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಅವರು, 2021 ರ ಮಾರ್ಚ್ 3 ರಂದು ನಾವು ಇಡಿಗೆ ಮನಿ ಲಾಂಡರಿಂಗ್ ಕೇಸ್ ಶಿಫಾರಸು ಮಾಡಿದ್ದೇವೆ. ತನಿಖೆ ನಡೀತಿದ್ದು, ನಮ್ಮ ಪೋರ್ಟಲ್ ಸಹ ಆತ ಹ್ಯಾಕ್ ಮಾಡಿದ್ದ. ಇದನ್ನ ಸಿಐಡಿ ತನಿಖೆ ಮಾಡುತ್ತಿದೆ. ಏಪ್ರಿಲ್ 28 ರಂದು ಸಿಬಿಐನ ಇಂಟರ್ ಪೋಲ್ ಬ್ರಾಂಚ್​​ಗೂ ಕೇಸ್ ತನಿಖೆಗೆ ಶಿಫಾರಸು ಮಾಡಿದ್ದೇವೆ. ಸರ್ಕಾರ ಯಾರ ರಕ್ಷಣೆಯನ್ನೂ ಮಾಡುತ್ತಿಲ್ಲ ಎನ್ನುವ ಕುರಿತು ಸ್ಪಷ್ಟೀಕರಣ ನೀಡಿದರು.

ಇನ್ನೂ ಬೆಂಗಳೂರಿನಲ್ಲಿ ರಸ್ತೆಗುಂಡಿಗಳ ಹಾವಳಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ, ಒಂದು ವಾರದಲ್ಲಿ ರಸ್ತೆ ಗುಂಡಿ ಮುಚ್ಚುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚನೆ ಕೊಟ್ಟಿದ್ದೇನೆ. ಒಂದು ವಾರದ ಬಳಿಕ ನಗರ ಸಂಚಾರ ಮಾಡಿ ಆ ಬಗ್ಗೆ ಅವಲೋಕನ ಮಾಡುತ್ತೇನೆ ಎಂದರು.

ದೀಪಾವಳಿ ಗೈಡ್‌ಲೈನ್ಸ್​ ಬಗ್ಗೆ ಸುಪ್ರೀಂಕೋರ್ಟ್ ಆದೇಶವಿದೆ. ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗೋವಿಂದ ಕಾರಜೋಳ ಅವರಿಗೆ ಎಲ್ಲಾ ಸಮುದಾಯಗಳನ್ನು ಸಮಾನತೆಯಿಂದ ನೋಡುವ ದೃಷ್ಟಿ ಇಲ್ಲ : ಎನ್.ಅನಂತನಾಯ್ಕ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಸುದ್ದಿಒನ್, ಚಿತ್ರದುರ್ಗ ಏ. 20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್ ಡಿಎ ಮೈತ್ರಿ ಕೂಟದ ಬಿಜೆಪಿ ಅಭ್ಯರ್ಥಿ

ಏಪ್ರಿಲ್ 24 ರಂದು ಚಿತ್ರದುರ್ಗಕ್ಕೆ  ಸಿಎಂ ಯೋಗಿ ಆದಿತ್ಯನಾಥ್ | ಗೋವಿಂದ ಕಾರಜೋಳ ಪರ ಮತಯಾಚನೆ 

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 20 : ಚಿತ್ರದುರ್ಗದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರ ರೋಡ್ ಶೋ ಬದಲು ಸಮಾವೇಶ ನಡೆಸಲಾಗುವುದೆಂದು

ಕಾಂಗ್ರೆಸ್ ಗ್ಯಾರಂಟಿಗಳು ಹರ್ಷದ ಕೂಳು, ಬಿಜೆಪಿಯದ್ದು ವರ್ಷದ ಕೂಳು : ಕೆಎಸ್ ನವೀನ್

ಸುದ್ದಿಒನ್, ಚಿತ್ರದುರ್ಗ ಏ. 20 : ಕಾಂಗ್ರೆಸ್ ನವರ ಗ್ಯಾರಂಟಿಗಳು ಹರ್ಷದ ಕೂಳು, ಬಿಜೆಪಿಯ ಸಂಕಲ್ಪ ಪತ್ರ ವರ್ಷದ ಕೂಳು ಎಂದು ವಿಧಾನ ಪರಿಷತ್ ಸದಸ್ಯ ಕೆಎಸ್ ನವೀನ್ ಹೇಳಿದರು. ಚಿತ್ರದುರ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ

error: Content is protected !!