ಪ್ರತಿ ಜಿಲ್ಲೆಯಲ್ಲಿ ಫೀಲ್ಡ್ ಆಸ್ಪತ್ರೆ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಸಿಎಂ ಬಸವರಾಜ್ ಬೊಮ್ಮಯಿ ಹೇಳಿದರು. ಈ ವೇಳೆ ಮಾತನಾಡಿದ ಅವರು,ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಅಡಿ ನೆರವು ನೀಡುವ ಮೂಲಕ ಕಾರ್ಪೊರೇಟ್ ಸಂಸ್ಥೆಗಳು ತಾವು ಬೆಳೆಯಲು ಅನುವು ಮಾಡಿಕೊಟ್ಟ ಸಮಾಜಕ್ಕೆ ಕೊಡುಗೆ ನೀಡಿ, ಉಪಕಾರ ಸ್ಮರಣೆ ಮಾಡುತ್ತಿವೆ.
ಸರ್ಕಾರದ ಪ್ರಯತ್ನಗಳಲ್ಲಿ ಕೈಜೋಡಿಸುವ ಈ ಸಂಸ್ಥೆಗಳ ಉಪಕಾರಸ್ಮರಣೆಯನ್ನು ಸರ್ಕಾರ ಮಾಡುವುದು. ಹುಟ್ಟಿದ ಕೂಡಲೇ ಯಾರೂ ದೊಡ್ಡವರಾಗುವುದಿಲ್ಲ. ನಮ್ಮ ಪೋಷಕರು, ಗುರುಗಳು, ನಮ್ಮ ಸಮಾಜ ಒಂದಲ್ಲ ಒಂದು ರೀತಿಯಲ್ಲಿ ನಮ್ಮ ಬೆಳವಣಿಗೆಗೆ ಕೊಡುಗೆ ನೀಡುತ್ತಾರೆ. ನಾವು ಬೆಳೆಯುವುದರೊಂದಿಗೆ ನಮ್ಮ ಸುತ್ತಮುತ್ತಲಿನವರನ್ನೂ ಬೆಳೆಸಬೇಕು.
ಸಮಾಜಕ್ಕೆ ನಾವು ಪಡೆದುಕೊಂಡಿರುವುದರಲ್ಲಿ ಕಿಂಚಿತ್ತಾದರೂ ಹಿಂತಿರುಗಿಸಬೇಕು. ಆಗ ಬದುಕಿನ ಬ್ಯಾಲೆನ್ಸ್ ಷೀಟ್ ತಾಳೆ ಯಾಗುವುದು.
ಉಚಿತವಾಗಿ ಲಸಿಕೆ ಒದಗಿಸುವ ಮೂಲಕ ಲಸಿಕೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ, ಕೋವಿಡ್ ಸೋಂಕು ನಿಯಂತ್ರಿಸಲು ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ, ಆರೋಗ್ಯ ಸಚಿವರು ಹಾಗೂ ಭಾರತ ಸರ್ಕಾರಕ್ಕೆ ಮುಖ್ಯಮಂತ್ರಿಗಳು ಕೃತಜ್ಞತೆ ವ್ಯಕ್ತಪಡಿಸಿದರು. ಇನ್ನೂ ಆರೋಗ್ಯ ಕ್ಷೇತ್ರದಲ್ಲಿ ಸಿ.ಎಸ್.ಆರ್. ಉಪಕ್ರಮಗಳ ಅಧ್ಯಕ್ಷೆಯಾಗಿರುವ ಗೀತಾಂಜಲಿ ಕಿರ್ಲೋಸ್ಕರ್ ಅವರ ಪ್ರಯತ್ನವನ್ನು ಶ್ಲಾಘಿಸಿದ ಮುಖ್ಯಮಂತ್ರಿಯವರು, ಹಿಂದುಳಿದ ಜಿಲ್ಲೆಗಳಲ್ಲಿ ಮತ್ತು ಅಗತ್ಯವಿರುವ ಜಿಲ್ಲೆಗಳಲ್ಲಿ ಇಂತಹ ಫೀಲ್ಡ್ ಆಸ್ಪತ್ರೆ ಸ್ಥಾಪಿಸಲು ಮುಂದಾಗುವಂತೆ ಸಲಹೆ ನೀಡಿದರು. ಇದಕ್ಕೆ ಸರ್ಕಾರದಿಂದ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ತಿಳಿಸಿದರು.