Connect with us

Hi, what are you looking for?

ಪ್ರಮುಖ ಸುದ್ದಿ

ನನ್ನ ಸಾವಿಗೆ ಸರ್ಕಾರವೇ ಕಾರಣ…..ರಾಜಕಾರಣಿಗಳ ವಿರುದ್ಧ ಕೆಂಡಾಮಂಡಲರಾದ ನಿರ್ದೇಶಕ ಗುರು ಪ್ರಸಾದ್ ! 

ಕನ್ನಡದ ನಿರ್ದೇಶಕ ಮಠ ಸಿನಿಮಾ ಖ್ಯಾತಿಯ ನಿರ್ದೇಶಕ ಗುರು ಪ್ರಸಾದ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿರುವ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಸುಧಾಕಾರ್, ಮಾಜಿ ಸಿಎಂ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಹೀಗೆ ಹಲವರು ರಾಜಕೀಯ ನಾಯಕರ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.

ನನ್ನ ಸಾವಿಗೆ ಸರ್ಕಾರವೇ ಕಾರಣವೆಂದು ಡೆತ್ ನೋಟ್ ಬರೆಯುವುದಾಗಿ ಹೇಳಿದ್ದಾರೆ. ರಾಜಕೀಯ ಮಾಡಬೇಡಿ, ಆಡಳಿತ ಮಾಡಿ ಎಂದು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಮನೆವರೆಗೂ ಕೊರೊನಾ ಕಳುಹಿಸಿದ ಯಡಿಯೂರಪ್ಪ ಮತ್ತು ಪುತ್ರ ವಿಜಯೇಂದ್ರ ಅವರಿಗೆ ಧನ್ಯವಾದ. ಎಷ್ಟು ಕೋಟಿ ಬೇಕು ನಮಗೆ, ನಿಮ್ಮ ಕೋಟಿ ಎಂದರೆ ಬಡವರ ಮನೆಯ ಒಂದೊಂದು ಇಡ್ಲಿಯನ್ನು ತಂದು ನಿಮ್ಮ ಲಾಕರ್ ನಲ್ಲಿ ಇಡುತ್ತಿದ್ದೀರಿ. ದರಿದ್ರ ಜೀವನ ನಡೆಸಿಲಿಕ್ಕೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದು ವೇಳೆ ನಾನು ಸತ್ತರೆ ನನ್ನ ಶಾಪ ಕೊನೆವರೆಗೂ ನಿಮಗೆ ನೋವು. ಒಂದೂವರೆ ವರ್ಷ ಸಮಯ ತೆಗೆದುಕೊಂಡು, 2 ತಿಂಗಳೂ ಲಾಕ್ ಡೌನ್ ಮಾಡಿ ಏನು ಮಾಡಿದ್ರಿ. ನಿಮಗೆ ಕೋಟಿ ಕೋಟಿ ಹಣ ಬಂದಿದೆ ಅಂತ ಸಾಮಾನ್ಯ ಜನರನ್ನು ಸಂಕಷ್ಟಕ್ಕೆ ತಳ್ಳಬೇಡಿ. ನನಗೆ ಕೊರೋನಾ ತಂದುಕೊಟ್ಟ ನಿಮಗೆ ದಿಕ್ಕಾರವಿರಲಿ. ತುಂಬಾ ಜನರನ್ನು ಸಾಯಿಸಿದ್ದಾರೆ, ಒಂದೂವರೇ ವರ್ಷವಾದರೂ ಏನು ಮಾಡಿಲ್ಲ. ನನ್ನಂತವರಿಗೆ ಕೊಟ್ಟಿದ್ರೆ ಏನೋ ಮಾಡುತ್ತಿದ್ದೆ. ಇನ್ನು ಎಷ್ಟು ಕೋಟಿ ನಿಮಗೆ, ಕೊರೋನಾ ಬಂದರು ಪಾಠ ಕಲಿತಿಲ್ಲ.

ಮೋದಿ ಪ್ರಾಮಾಣಿಕ. ಆದರೆ ಬಿಜಿಪಿಯವರೆಲ್ಲ ಪ್ರಾಮಾಣಿಕರಲ್ಲ. ಜೆಡಿಎಸ್, ಕಾಂಗ್ರೆಸ್ನವರೆಲ್ಲ ಪ್ರಾಮಾಣಿಕರಲ್ಲ. ಒಂದು ವೈರಸ್ ನಿಮ್ಮನ್ನು ಆಡಿಸುತ್ತಿದೆ. ವಿಜ್ಞಾನದ ಹಿನ್ನೆಲೆ ಇದ್ದರೆ ಡಾ. ಸುಧಾಕರ್ ಬೆಂಗಳೂರಿನಲ್ಲಿ ಒಂದು ಲಕ್ಷ ವಾರ್ಫೇರ್ ಟೆಂಟ್ ಹಾಕಿಸಿ. ಅದರ ಬದಲು ಯಾವುದೇ ಬ್ಯುಸಿನೆಸ್ ನಿಲ್ಲಿಸ ಬೇಡಿ. ಒಂದೊಂದು ರೂಪಾಯಿ ದುಡಿಯಲು ಎಲ್ಲರೂ ಕಷ್ಟ ಪಡುತ್ತಿದ್ದಾರೆ ಎಂದು ರಾಜಕಾರಣೀಗಳ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಸದ್ಯ ಸರ್ಕಾರ ವಿರುದ್ಧ ಗುಡುಗಿರುವ ಡೈರೆಕ್ಟರ್ ಗುರು ಪ್ರಸಾದ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಕೊಡಗು: ಸದ್ಯ ಲಾಕ್ಡೌನ್ ನಿಂದಾಗಿ ಅದೆಷ್ಟೋ ಜನ ತುತ್ತು ಅನ್ನಕ್ಕೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥವರ ಸಹಾಯಕ್ಕಾಗಿ ಅದೆಷ್ಟೋ ಜನ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ಮಧ್ಯೆ ಅಲ್ಲೊಬ್ಬ ಯುವಕ ತನ್ನ...

ಪ್ರಮುಖ ಸುದ್ದಿ

ಸುದ್ದಿಒನ್, ದಾವಣಗೆರೆ,(ಜೂನ್.15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರ ವರದಿಯಲ್ಲಿ 183 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 47668 ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ ದಾವಣಗೆರೆ 69...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ನಗರದ ವಿ .ಪಿ. ಬಡಾವಣೆಯಲ್ಲಿ ಕನ್ಸರ್‍ವೆನ್ಸಿಗಳನ್ನು ಒತ್ತುವರಿ ಮಾಡಲಾಗಿದೆ ಇವುಗಳನ್ನು ತೆರವು ಮಾಡಿ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಪೌರಾಯುಕ್ತರಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು. ನಗರದ ವಿ.ಪಿ.ಬಡಾವಣೆಯ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಸುದ್ದಿಒನ್,ಬಳ್ಳಾರಿ, (ಜೂ.15) : ಬಳ್ಳಾರಿ-ವಿಜಯನಗರ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್‍ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್‍ನಿಂದ 339 ಜನ ಗುಣಮುಖರಾಗಿದ್ದು ದಿನದಿಂದ ದಿನಕ್ಕೆ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ....

ಪ್ರಮುಖ ಸುದ್ದಿ

ಚಿತ್ರದುರ್ಗ,(ಜೂನ್15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 95 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33,997ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 16, ಚಳ್ಳಕೆರೆ 18, ಹಿರಿಯೂರು...

ಕ್ರೀಡೆ

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಗೆದ್ದವರಿಗೆ ಎಷ್ಟು ಮೊತ್ತ ಸಿಗಬಹುದು ಎಂಬ ಪ್ರಶ್ನೆ ಕ್ರಿಕೆಟ್ ಅಭಿಮಾನಿಗಳಿಗೆ ಯಾವಾಗಲೂ ಕಾಡುವಂತ ಪ್ರಶ್ನೆ. ಆ ಪ್ರಶ್ನೆಗೆ ಇಂದು ಐಸಿಸಿ ಉತ್ತರಿಸಿದೆ. ಟೆಸ್ಟ್ ಚಾಂಪಿಯನ್ ಶಿಪ್...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂನ್.15) : ನಗರದ ಅಲೆಮಾರಿ, ಕೂಲಿ ಕಾರ್ಮಿಕರು, ಬಡವರು ಹಾಗೂ ನಿರ್ಗತಿಕರಿಗೆ ಭಾರತೀಯ ರೆಡ್ ಕ್ರಾಸ್ ಚಿತ್ರದುರ್ಗ ಜಿಲ್ಲಾ ಶಾಖೆ ವತಿಯಿಂದ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಲಾಯಿತು. ನಗರದ ಪತ್ರಿಕಾ ಭವನದ...

ಪ್ರಮುಖ ಸುದ್ದಿ

ನವದೆಹಲಿ : ಕೋವಿಡ್ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಭೇಟಿಗೆ ಸಿದ್ಧತೆಗಳು ನಡೆದಿವೆ. ವರ್ಷದ ಅಂತ್ಯದಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳಬಹುದು ಎಂದು ಮೂಲಗಳು ತಿಳಿಸಿವೆ. ಆದರೆ ಪ್ರವಾಸದ ಸಮಯ...

error: Content is protected !!