ಬೆಂಗಳೂರು; ಚಿನ್ನದ ಸ್ಮಗ್ಲಿಂಗ್ ವಿಚಾರದಲ್ಲಿ ಈಗ ಸಾಕಿದ ಮಗಳಿಂದಾನೇ ತಂದೆಗೂ ಸಂಕಟ ಎದುರಾಗಿದೆ. ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಡಿಜಿಪಿ ರಾಮಚಂದ್ರ ರಾವ್ ಕೂಡ ಸಹಾಯ ಮಾಡಿದ್ದಾರೆಂದು ರಾಜ್ಯ ಸರ್ಕಾರ ಅವರಿಗೆ ಶಿಕ್ಷೆ ವಿಧಿಸಿದೆ. ರಜೆ ಶಿಕ್ಷೆಯನ್ನ ನೀಡಿದೆ. ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ಮಲತಂದೆಯ ಪ್ರಭಾವವೂ ಬಳಕೆಯಾಗಿರುವ ಕಾರಣ ರಾಜ್ಯ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

ಈ ಕೇಸ್ ರಾಜ್ಯ ಸರ್ಕಾರಕ್ಕೂ ಮುಜುಗರ ತರಿಸಿದೆ. ಕಸ್ಟಮ್ ತಪ್ಪಿಸಿ, ಪ್ರೋಟೋಕಾಲ್ ಮೂಲಕ ಚಿನ್ನವನ್ನ ಹೇಗೆ ತರ್ತಾ ಇದ್ದರು..? ಭಾರತ ಸರ್ಕಾರದ ಇಂಟೆಲಿಜೆನ್ಸ್ ಬರುವ ತನಕ ರಾಜ್ಯ ಇಂಟೆಲಿಜೆನ್ಸ್ ಏನು ಮಾಡುತ್ತಿತ್ತು ಎಂಬ ಪ್ರಶ್ನೆ ಎದುರಾಗಿದೆ. ಅಷ್ಟೇ ಅಲ್ಲ ವಿಪಕ್ಷ ನಾಯಕರ ವಾಗ್ದಾಳಿಗೆ ರಾಜ್ಯ ಸರ್ಕಾರ ಗುರಿಯಾಗಿದೆ. ರಾಮಚಂದ್ರ ರಾವ್ ಗೆ ತನಿಖೆ ಮುಗಿಯುವ ತನಕ ಕಡ್ಡಾಯ ರಜೆ ಮೇಲೆ ಇರಲು ಸೂಚನೆ ನೀಡಿದ್ದಾರೆ. ಇದೇ ವೇಳೆ ರಾಮಚಂದ್ರ ರಾವ್ ಅವರು ನಿರ್ವಹಿಸುತ್ತಿದ್ದ ಕರ್ನಾಟಕ ರಾಜ್ಯ ಪೊಲೀಸ್ ಗೃಹ ನಿರ್ಮಾಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸ್ಥಾನಕ್ಕೆ ಎಡಿಜಿಪಿ ಶರತ್ ಚಂದ್ರರನ್ನ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಇನ್ನು ಈ ಕೇಸನ್ನ ಸಿಬಿಐಗೆ ವಹಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯಿಸಿದ್ದಾರೆ. ಯಾಕಂದ್ರೆ ಈ ಕೇಸಲ್ಲಿ ರಾಜ್ಯ ಸಚಿವರ ಹಲವು ಹೆಸರುಗಳೇ ಕೇಳಿ ಬರುತ್ತಿವೆ. ಹೀಗಾಗಿ ಕೇಸನ್ನ ಸಿಬಿಐಗೆ ವಹಿಸಲು ಒತ್ತಾಯಿಸುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಈ ವಿಚಾರದಲ್ಲಿ ಯಾವುದೇ ನಿರ್ಧಾರದ ಬಗ್ಗೆ ಮಾತನಾಡುತ್ತಿಲ್ಲ. ಸದ್ಯ ಪೊಲೀಸರೇ ಕೇಸನ್ನ ವಿಚಾರಣೆ ನಡೆಸುತ್ತಿದ್ದಾರೆ.

